ವಿಟ್ಲ: ರಾಜ್ಯ ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ವಿಟ್ಲ ಸಮೀಪದ ಸುರಿಬೈಲು ಸರಕಾರಿ ಶಾಲೆಗೆ ಭೇಟಿ ನೀಡಿದರು.
ಸುರಿಬೈಲು ಶಾಲೆಯ ಎಸ್‌ಡಿಎಂಸಿ ಅಧ್ಯಕ್ಷ ಎಸ್‌.ಎಂ. ಅಬೂಬಕ್ಕರ್ ಅವರು ಸಚಿವರನ್ನು ಶಾಲು ಹೊದಿಸಿ ಸನ್ಮಾನಿಸಿದರು. ಸಚಿವರು ಶಾಲೆಯಲ್ಲಿ ನಿರ್ಮಾಣಗೊಂಡ ತೋಟ ಹಾಗೂ ತರಕಾರಿ ತೋಟಗಳಿಗೆ ಭೇಟಿ ನೀಡಿದರು. ಶಾಲೆಯ ಸಾಧನೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.
ಇದೇ ಸಂದರ್ಭದಲ್ಲಿ ಸಚಿವರು ವಿದ್ಯಾರ್ಥಿಗಳ ಜತೆ ಸಂವಾದ ನಡೆಸಿದ ಹಲವಾರು ಮಾಹಿತಿಗಳನ್ನು ನೀಡಿದರು. ಈ ಸಂದರ್ಭ ಬಂಟ್ವಾಳ ಶಾಸಕ ರಾಜೇಶ್ ನಾಯಕ್ ಉಳಿಪ್ಪಾಡಿಗುತ್ತು, ಕ್ಷೇತ್ರ ಶಿಕ್ಷಣಾಧಿಕಾರಿ ಜ್ಞಾನೇಶ್, ಶಾಲಾ ಮುಖ್ಯ ಶಿಕ್ಷಕರು, ಸಹ ಶಿಕ್ಷಕರು, ಸ್ಥಳೀಯ ವಿದ್ಯಾಭಿಮಾನಿಗಳು, ವಿದ್ಯಾರ್ಥಿಗಳ ಪೋಷಕರು ಭಾಗವಹಿಸಿದ್ದರು.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here