ವಿಟ್ಲ: ಕೊಳ್ನಾಡು ಗ್ರಾಮದ ಕುಳಾಲು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಇಂದು ಶಾಲಾ ವಾರ್ಷಿಕೋತ್ಸವ ನಡೆಯಲಿದೆ. ಧ್ವಜಾರೋಹಣವನ್ನು ಚಂದಳಿಕೆ ಶಾಲೆಯ ಮುಖ್ಯ ಶಿಕ್ಷಕ ವಿಶ್ವನಾಥ ಗೌಡ ಬಂಡಮುಗೇರು ನೆರವೇರಿಸಲಿದ್ದಾರೆ.
ಆ ಬಳಿಕ ಬಹುಮಾನ ವಿತರಣಾ ಸಮಾರಂಭ ನಡೆಯಲಿದೆ. ಉದ್ಯಮಿ ರಾಜಶೇಖರ ಚೌಟ ದೇವಸ್ಯ ಅಧ್ಯಕ್ಷತೆಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ನಾನಾ ಕ್ಷೇತ್ರಗಳ ಗಣ್ಯರು ಭಾಗವಹಿಸಲಿದ್ದಾರೆ.
ಸಂಜೆ ನಡೆಯುವ ಸಭಾ ಕಾರ್ಯಕ್ರಮವನ್ನು ಬಂಟ್ವಾಳ ಶಾಸಕ ರಾಜೇಶ್ ನಾಕ್ ಉಳಿಪ್ಪಾಡಿಗುತ್ತು ಉದ್ಘಾಟಿಸಲಿದ್ದಾರೆ. ಸಭಾಧ್ಯಕ್ಷತೆಯನ್ನು ಕೊಳ್ನಾಡು ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಸುಭಾಶ್ಚಂದ್ರ ಶೆಟ್ಟಿ ಕುಳಾಲು ವಹಿಸಲಿದ್ದಾರೆ. ಶಾಲಾ ವಿದ್ಯಾರ್ಥಿ ವಿದ್ಯಾರ್ಥಿನಿಯರಿಂದ ಮತ್ತು ಹಳೆವಿದ್ಯಾರ್ಥಿಗಳಿಂದ ನಾನಾ ಸಾಂಸ್ಕೃತಿಕ ಕಾರ್ಯಕ್ರಮ, ಸನ್ಮಾನ ಕಾರ್ಯಕ್ರಮ ನಡೆಯಲಿದೆ.