ಬಂಟ್ವಾಳ:
ಕರೋಪಾಡಿ ಗ್ರಾಮದ ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನಮ್ ಒಡಿಯೂರು ಎಂಬಲ್ಲಿ ದೇವಸ್ಥಾನದ ಕಾಮಗಾರಿ ನಡೆಸುವ ಸಂದರ್ಭದಲ್ಲಿ ಮಣ್ಣು ಕುಸಿದು ಬಿದ್ದು 3 ಜನ ಕಾರ್ಮಿಕರು ದಾರುಣವಾಗಿ ಮೃತಪಟ್ಟ ಅವರ ಕುಟುಂಬಕ್ಕೆ ಮುಖ್ಯ ಮಂತ್ರಿ ಅವರು ಮೂರು ಲಕ್ಷ ಪರಿಹಾರ ಹಾಗೂ ಗಂಭೀರ ಗಾಯಗೊಂಡ ಒರ್ವ ನಿಗೆ 1 ಲಕ್ಷ ರೂ ಪರಿಹಾರ ಘೋಷಣೆ ಮಾಡಿದ್ದಾರೆ.
ಅವರು ಬೆಳ್ತಂಗಡಿಯಲ್ಲಿ ಈ ಘೋಷಣೆ ಮಾಡಿದ್ದಾರೆ.
ಕರೋಪಾಡಿ ಗ್ರಾಮದ ಒಡಿಯೂರು ಎಂಬಲ್ಲಿ ಗುಡ್ಡಕುಸಿತದಿಂದ ಮೃತಪಟ್ಟ ಮೂವರು ಕಾರ್ಮಿಕರಿಗೆ ಪರಿಹಾರ ಒದಗಿಸುವಂತೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪರವರಿಗೆ ಬೆಳ್ತಂಗಡಿಯ ಮುಖ್ಯಮಂತ್ರಿಯವರ ಕಾರ್ಯಕ್ರಮದಲ್ಲಿ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಮತ್ತು ಪುತ್ತೂರು ಸಂಜೀವ ಮಠಂದೂರುರವರು ಮನವಿ ಮಾಡಿದ್ದು ಇದಕ್ಕೆ ಸ್ಪಂಧಿಸಿದ ಮುಖ್ಯಮಂತ್ರಿಗಳು ಜಿಲ್ಲಾಧಿಕಾರಿಯವರನ್ನು ಕರೆದು ಮೃತಪಟ್ಟವರಿಗೆ ತಲಾ 3 ಲಕ್ಷದಂತೆ ಗಾಯಾಳುವಿಗೆ 1ಲಕ್ಷ ಪರಿಹಾರ ಘೋಷಣೆ ಮಾಡಿದರು.
ಇಂದು ಬೆಳಿಗ್ಗೆ
ಘಟನಾ ಸ್ಥಳಕ್ಕೆ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಭೇಟಿ ನೀಡಿ ಬಳಿಕ
ಮೃತರಾದ ವಿಟ್ಲಪಡ್ನೂರಿನ ಕಾಪುಮಜಲು ರಮೇಶ್ ಮಡಿವಾಳರ ಮನೆಗೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.