Sunday, April 7, 2024

ಅನಂತಾಡಿ: ಸ್ವಚ್ಛತಾ ಜಾಥಾ

ವಿಟ್ಲ: ಅನಂತಾಡಿ ಗ್ರಾಮ ಪಂಚಾಯಿತಿ, ನೀರು ಮತ್ತು ನೈರ್ಮಲ್ಯ ಸಮಿತಿ ಹಾಗೂ ಜನ ಶಿಕ್ಷಣ ಟ್ರಸ್ಟ್ ಮಂಗಳೂರು ಇವರ ಆಶ್ರಯದಲ್ಲಿ ಸ್ವಚ್ಛತಾ ಜಾಥಾ ಮತ್ತು ಸ್ವೀಪ್ ಕಾರ್ಯಕ್ರಮ ಭಾನುವಾರ ಅನಂತಾಡಿಯಲ್ಲಿ ನಡೆಯಿತು.
ಗೋಳಿಕಟ್ಟೆ ಅಂಗನವಾಡಿ ಕೇಂದ್ರದಿಂದ ಅನಂತಾಡಿ ಶ್ರೀ ದೇವಿ ಭಜನಾ ಮಂದಿರದವರೆಗೆ ಜಾಗೃತಿ ಜಾಥಾ ನಡೆಸಲಾಯಿತು. ಬಳಿಕ ನಡೆದ ಜಾಗೃತಿ ಸಭೆಯನ್ನು ಉದ್ದೇಶಿಸಿ ಹಂಗರ್ ಪ್ರಾಜೆಕ್ಟ್‌ನ ಸೋಮಶೇಖರ್ ಮಾತನಾಡಿದರು. ಗ್ರಾಮಮಟ್ಟದಲ್ಲಿ ಮತದಾರರು ಜಾಗೃತರಾದಾಗ, ಉತ್ತಮ ಆಡಳಿತ ಸಿಗಲು ಸಾಧ್ಯ. ಈ ನಿಟ್ಟಿನಲ್ಲಿ ಮುಂಬರುವ ಚುನಾವಣೆಯಲ್ಲಿ ನಿರ್ಭೀತಿಯಿಂದ ಮತ ಚಲಾಯಿಸುವಂತೆ ಹಾಗೂ ಇದಕ್ಕೆ ಪೂರಕವಾಗಿ ಜಾಗೃತಿ ಬೆಳೆಸಿಕೊಳ್ಳುವಂತೆ ಕರೆ ನೀಡಿದರು.
ಸಂಜೀವಿನಿ ಒಕ್ಕೂಟದ ಅಧ್ಯಕ್ಷೆ ವೇದಾವತಿ, ಅನಂತಾಡಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಸನತ್ ಕುಮಾರ್ ರೈ, ತಾಲೂಕು ಪಂಚಾಯತ್ ಸದಸ್ಯೆ ಗೀತಾ ಚಂದ್ರಶೇಖರ್, ಬಾಬನಕಟ್ಟೆ ಶಾಲಾ ಮುಖ್ಯ ಶಿಕ್ಷಕ ದೊಡ್ಡಕೆಂಪಯ್ಯ, ಆರೋಗ್ಯ ಕಾರ್ಯಕರ್ತೆ ಅರುಂಧತಿ, ಅನಂತಾಡಿ ಗ್ರಾ.ಪಂ. ಪಿಡಿಒ ಜಯರಾಮ್, ಅಂಗನವಾಡಿ ಕಾರ್ಯಕರ್ತೆಯರಾದ ಶೋಭಾ, ಯಶೋಧಾ, ಸಹಾಯಕಿಯರಾದ ವಿಜಯ, ಸವಿತಾ, ಆಶಾ ಕಾರ್ಯಕರ್ತೆಯರು ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಜಾಥಾದಲ್ಲಿ ಬಾಬನಕಟ್ಟೆ ಶಾಲಾ ಮಕ್ಕಳ ಬ್ಯಾಂಡ್ ಸೆಟ್ ಬಳಗ ಗಮನ ಸೆಳೆಯಿತು. ಜನಶಿಕ್ಷಣ ಕೇಂದ್ರದ ಚೇತನ್ ಕುಮಾರ್ ಕಾರ್ಯಕ್ರಮ ನಿರೂಪಿಸಿದರು.

More from the blog

ರಾಜ್ಯದಲ್ಲಿ 60 ಮಂದಿಯ ನಾಮಪತ್ರ ತಿರಸ್ಕೃತ

ಬೆಂಗಳೂರು: ಲೋಕಸಭಾ ಚುನಾವಣೆಗೆ ರಾಜ್ಯದ ಮೊದಲ ಹಂತದ 14 ಕ್ಷೇತ್ರಗಳಲ್ಲಿ 358 ಅಭ್ಯರ್ಥಿಗಳು 492 ನಾಮಪತ್ರ ಸಲ್ಲಿಸಿದ್ದು, ಇದರಲ್ಲಿ 13 ಕ್ಷೇತ್ರದಲ್ಲಿ ಪರಿಶೀಲನೆ ಕಾರ್ಯ ಮುಗಿದಿದೆ. 276 ನಾಮಪತ್ರಗಳು ಕ್ರಮಬದ್ಧವಾಗಿದ್ದು, 60 ನಾಮಪತ್ರಗಳು...

ಆಭರಣ ಪ್ರಿಯರಿಗೆ ಗುಡ್‌ನ್ಯೂಸ್‌ : ವಾರಾಂತ್ಯದಲ್ಲಿ ಚಿನ್ನದ ದರ ತುಸು ಇಳಿಕೆ…

ಬೆಂಗಳೂರು: ಚಿನ್ನದ ದರದಲ್ಲಿ ಮತ್ತೆ ಹಾವು ಏಣಿಯಾಟ ಶುರುವಾಗಿದೆ. ಕಳೆದೆರಡು ದಿನಗಳಿಂದ ನಿರಂತರ ಏರಿಕೆ ಕಂಡಿದ್ದ ಬಂಗಾರದ ಬೆಲೆ ಇದೀಗ ಇಳಿಕೆಯಾಗಿದೆ. ನಿನ್ನೆಯ ದರಕ್ಕೆ ಹೋಲಿಸಿದರೆ 10ಗ್ರಾಂ ಚಿನ್ನದ ಮೇಲೆ 450 ರೂ...

ನೀತಿ ಸಂಹಿತೆ ಇರುವಾಗ ಆಶ್ಲೇಷ ಬಲಿ ಮಂಟಪ ಕಾಮಗಾರಿ ಆರಂಭ ಸಮರ್ಪಕವಲ್ಲ- ಹರೀಶ್ ಇಂಜಾಡಿ

ಸುಬ್ರಹ್ಮಣ್ಯ: ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಈ ಹಿಂದಿನ ಆಡಳಿತ ಮಂಡಳಿಯ ಕೊನೇ ದಿನಗಳಲ್ಲಿ ದಾನಿಗಳು ಕ್ಷೇತ್ರದಲ್ಲಿ ಆಶ್ಲೇಷ ಬಲಿ ಮಂಟಪ ನಿರ್ಮಿಸಲು ಮುಂದೆ ಬಂದರು. ಇದು ಸ್ವಾಗತಾರ್ಹ ಬೆಳವಣಿಗೆ. ಆದರೆ...

ಪ್ರಧಾನಿ ಮೋದಿ ಕರೆ : ಪ್ರತಿಯೊಬ್ಬರ ಕೈ ಮೇಲೆ ಕಮಲದ ಹಚ್ಚೆ ಹಾಕಿ

ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ  ಬಿಜೆಪಿ ಕಾರ್ಯಕರ್ತರಿಗೆ ಕರೆ ನೀಡಿರುವ ಪ್ರಧಾನಿ ನರೇಂದ್ರ ಮೋದಿ ಪ್ರತಿಯೊಬ್ಬರ ಕೈ ಮೇಲೆ ಕಮಲದ ಹಚ್ಚೆ ಹಾಕಿ “ಮೆಹಂದಿ ಅಭಿಯಾನ" ನಡೆಸುವಂತೆ ಸೂಚನೆ ನೀಡಿದ್ದಾರೆ. ಜತೆಗೆ ಮೋದಿ...