Monday, April 8, 2024

ಮೆಲ್ಕಾರ್ ಮಹಿಳಾ ಪದವಿ ಪೂರ್ವ ಹಾಗೂ ಪದವಿ ಕಾಲೇಜ್: 11ನೇ ವಾರ್ಷಿಕೋತ್ಸವ ಸಮಾರಂಭ

ಬಂಟ್ವಾಳ: ಸ್ವಚ್ಛ ಮನಸು ಹಾಗೂ ಸ್ವಸ್ಥ ಮನಸ್ಸಿನಿಂದ ಸಾಮಾಜಿಕ ಸೌಹಾರ್ದತೆ ಮತ್ತು ಆರೋಗ್ಯ ಪೂರ್ಣ ಸಮಾಜ ನಿರ್ಮಾಣ ಸಾಧ್ಯ, ಇದಕ್ಕೆ ಸುಧಾರಿತ ಕಲಿಕಾ ಕ್ರಮ ಪೂರಕ ಎಂದು ಮಂಗಳೂರು ವಿಶ್ವವಿದ್ಯಾಲಯದ ಉಪ ಕುಲಪತಿ ಪ್ರೊ. ಯಡಪಡಿತ್ತಾಯ ಹೇಳಿದ್ದಾರೆ.
ಮಂಗಳೂರು ಎಜುಕೇಶನ್ ಎನ್‌ಹ್ಯಾನ್ಸ್‌ಮೆಂಟ್ ಟ್ರಸ್ಟ್‌ನಡಿ ಸಜೀಪ ಮುನ್ನೂರಿನ ಮಾರ್ನಬೈಲ್‌ನಲ್ಲಿ ಕಾರ್ಯಾಚರಿಸುತ್ತಿರುವ ಮೆಲ್ಕಾರ್ ಮಹಿಳಾ ಪದವಿ ಪೂರ್ವ ಹಾಗೂ ಪದವಿ ಕಾಲೇಜಿನ 11ನೇ ವಾರ್ಷಿಕೋತ್ಸವವನ್ನು ಉದ್ಘಾಟಿಸಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು
ಯೆನೆಪೋಯ ವಿಶ್ವವಿದ್ಯಾಲಯದ ಸಹ ಕುಲಾಧಿಪತಿ ಪರ್ಹಾದ್ ಯೆನೆಪೋಯ, ಮಂಗಳೂರು ಎಜುಕೇಶನ್ ಎನ್‌ಹ್ಯಾನ್ಸ್‌ಮೆಂಟ್ ಟ್ರಸ್ಟ್‌ನ ಅಧ್ಯಕ್ಷ ಎಸ್.ಎಂ. ರಶೀದ್ ಹಾಜಿ ಮಾತನಾಡಿದರು.

ಕಾಲೇಜಿನ ಪ್ರಾಂಶುಪಾಲ ಬಿ.ಕೆ. ಅಬ್ದುಲ್ ಲತೀಫ್ ವಾರ್ಷಿಕ ವರದಿ ವಾಚಿಸಿದರು. ಪ್ರಸಕ್ತ ಸಾಲಿನಲ್ಲಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು. ಉಪಪ್ರಾಂಶುಪಾಲೆ ಸುನೀತಾ ಪೆರೇರಾ, ಮುಹಮ್ಮದ್ ಶಿಬಾಬ್ ಬಹುಮಾನಗಳ ಪಟ್ಟಿ ವಾಚಿಸಿದರು. ಕ್ರೀಡೆ ಹಾಗೂ ಸಾಂಸ್ಕೃತಿ ಸ್ಪರ್ಧಾ ವಿಜೇತರಿಗೆ ಬಹುಮಾನಗಳನ್ನು ವಿತರಿಸಲಾಯಿತು.

ಫಾತಿಮಾ ಜುಮಾನ ಸ್ವಾಗತಿಸಿ, ಫಾತಿಮಾ ಸುಆದಾ ನಿರೂಪಿಸಿ, ಶಾಹಿನಾ ವಂದಿಸಿದರು. ಸಭಾ ಕಾರ್ಯಕ್ರಮದ ಬಳಿಕ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

More from the blog

ಮನೆಯೊಳಗೆ ‌ನುಗ್ಗಿ ವ್ಯಕ್ತಿಗೆ ಚೂರಿ ಇರಿತ : ಆರೋಪಿ ಪರಾರಿ

ಬಂಟ್ವಾಳ: ಮನೆಯೊಳಗೆ ‌ನುಗ್ಗಿ ವ್ಯಕ್ತಿಯೋರ್ವನಿಗೆ ಚೂರಿ ಹಾಕಿ ಪರಾರಿಯಾಗಿರುವ ಘಟನೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ಪುದು ಎಂಬಲ್ಲಿ ನಡೆದಿದೆ. ಪುದು ಗ್ರಾಮದ 10 ನೇ ಮೈಲಿಕಲ್ಲು ನಿವಾಸಿ ಮಹಮ್ಮದ್ ರಮೀಜ್ (...

ಲೋಕಾಯುಕ್ತ ಇಲಾಖೆಗೆ ಸಂಬಂಧಿಸಿದಂತೆ ಸಾರ್ವಜನಿಕ ಜನಸಂಪರ್ಕ ಸಭೆ

ಬಂಟ್ವಾಳ: ಲೋಕಾಯುಕ್ತ ಇಲಾಖೆಗೆ ಸಂಬಂಧಿಸಿದಂತೆ ಸಾರ್ವಜನಿಕ ಜನಸಂಪರ್ಕ ಸಭೆ ಬಿಸಿರೋಡಿನ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಎ. 8 ರಂದು ಸೋಮವಾರ ಲೋಕಾಯುಕ್ತ ಡಿ.ವೈ.ಎಸ್.ಪಿ. ಗಾನ ಕುಮಾರಿ ಅವರ ಅಧ್ಯಕ್ಷತೆಯಲ್ಲಿ ಜರುಗಿತು. ಈ ಸಂದರ್ಭದಲ್ಲಿ ಮಾತನಾಡಿದ...

ದ್ವಿತೀಯ ಪಿಯುಸಿ ಫಲಿತಾಂಶ ಶೀಘ್ರ ಪ್ರಕಟ

ಬೆಂಗಳೂರು: ಕರ್ನಾಟಕ ಪದವಿ ಪೂರ್ವ ಶಿಕ್ಷಣ ಇಲಾಖೆಯು ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶವನ್ನು ಏಪ್ರಿಲ್ 3 ನೇ ವಾರದಲ್ಲಿ ಪ್ರಕಟಿಸುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ. ಫಲಿತಾಂಶ ಪ್ರಕಟಗೊಂಡ ನಂತರ, ಪರೀಕ್ಷೆ ಬರೆದಿರುವ ಅಭ್ಯರ್ಥಿಗಳು...

ಇಂದು ಸಂಪೂರ್ಣ ಸೂರ್ಯಗ್ರಹಣ : ಈ ರಾಶಿಯವರಿಗೆ ಕಾದಿದೆ ಆಪತ್ತು

ವರ್ಷದ ಮೊದಲ ಸೂರ್ಯಗ್ರಹಣ ಇಂದು ಸಂಭವಿಸುತ್ತಿದೆ. ಸುಮಾರು 54 ವರ್ಷಗಳ ಬಳಿಕ ಸಂಭವಿಸುತ್ತಿರುವ ಸುದೀರ್ಘ ಸೂರ್ಯಗ್ರಹಣ ಇದಾಗಿದ್ದು, ಮಾಹಿತಿಗಳ ಪ್ರಕಾರ ಏಪ್ರಿಲ್ 8 ರಂದು ಸೂರ್ಯಗ್ರಹಣ ರಾತ್ರಿ 9.12 ರಿಂದ 1.25 ರವರೆಗೆ...