ಪುಂಜಾಲಕಟ್ಟೆ: ಪುಂಜಾಲಕಟ್ಟೆ ಠಾಣಾ ವ್ಯಾಪ್ತಿಯಲ್ಲಿ ಬರುವ ಉಳಿ ಗ್ರಾಮ ದೇವಸ್ಥಾನದ ವಠಾರದಲ್ಲಿ ಚಿನ್ನದ ಸರ ಕಳ್ಳತನ ಮಾಡಿದ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಬಂಟ್ವಾಳ ತಾಲೂಕು ಉಳಿ ಗ್ರಾಮ ದೇವಸ್ಥಾನದ ವಠಾರದಲ್ಲಿ ತೆಂಕಕಜೆಕಾರು ಗ್ರಾಮದ ನಿವಾಸಿ ಹೊನ್ನಮ್ಮ ಮತ್ತು ಉಳಿ ಗ್ರಾಮದ ನಿವಾಸಿ ಮೋನಮ್ಮ ಅವರ ಕುತ್ತಿಗೆಯಲ್ಲಿದ್ದ ಚಿನ್ನದ ಸರ ಕಳ್ಳತನ ಆಗಿರುವ ಬಗ್ಗೆ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಅ.ಕ್ರ 04/2020 ಹಾಗೂ 05/2020 ಕಲಂ 379 ಐ.ಪಿ.ಸಿ ಯಂತೆ ಪ್ರಕರಣ ದಾಖಲಾಗಿದೆ. ಇದಕ್ಕೆ ಸಂಬಂಧಿಸಿದಂತೆ ಆರೋಪಿಗಳಾದ ಹಾಸನ ಜಿಲ್ಲೆ, ಅರಕಲಗೂಡು ತಾಲೂಕು, ಕೋಟೆಸಾಲುಗೇರಿ ನಿವಾಸಿಗಳಾದ ಲಕ್ಷ್ಮೀಯಮ್ಮ(ಗೌರಮ್ಮ) ಹಾಗೂ ಅಶ್ವಿನಿ ಅವರನ್ನು ಬಂಧಿಸಲಾಗಿದೆ. ಆರೋಪಿಗಳು ಕಳವು ಮಾಡಿದ 23.900 ಗ್ರಾಂ ತೂಕದ ಚಿನ್ನದ ಚೈನ್ ಹಾಗೂ 16.180 ಗ್ರಾಂ ತೂಕದ ಚಿನ್ನದ ಚೈನ್ ಅನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಅದರ ಒಟ್ಟು ಅಂದಾಜು ಮೌಲ್ಯ ರೂ. 1,37,000/- ಎಂದು ಅಂದಾಜಿಸಲಾಗಿದೆ.