Friday, April 19, 2024

ಬಾಕಿಲಗುತ್ತು: ಇಂದು ಶತ ಚಂಡಿಕಾ ಯಾಗ, ಕಲಶಾಭಿಷೇಕ

ವಿಟ್ಲ: ಅನಂತಾಡಿ ಬಾಕಿಲಗುತ್ತು ಕ್ಷೇತ್ರದಲ್ಲಿ ಶುಕ್ರವಾರ ಮಂಹಾನೆ ೫.೩೦ ರಿಂದ ಗಣಪತಿ ಹವನ, ಬೆಳಗ್ಗೆ ೭ ಗಂಟೆಯಿಂದ ಶತ ಚಂಡಿಕಾ ಯಾಗ ಆರಂಭವಾಗಲಿದ್ದು, ೧೦.೪೫ ಕ್ಕೆ ಯಾಗ ಪೂರ್ಣಾಹುತಿಯಾಗಲಿದೆ. ಶ್ರೀ ಉಳ್ಳಾಲ್ತಿ, ಹೊಸಮ್ಮನ ಸನ್ನಿಧಿಯಲ್ಲಿ ಕಲಶಾಭಿಷೇಕ ನಡೆಯಲಿದೆ. ಮಧ್ಯಾಹ್ನ ೧೨ ಗಂಟೆಗೆ ಮಹಾಪೂಜೆ, ಮಂತ್ರಾಕ್ಷತೆ, ಪ್ರಸಾದ ವಿತರಣೆ ಬೆರ್ಮೆರ್ ಬೈದೇರುಗಳ ಗರಡಿಯಲ್ಲಿ ಬೈದೇರುಗಳ ದರ್ಶನ, ಧರ್ಮಚಾವಡಿ ಭೇಟಿ, ಬಳಿಕ ಅನ್ನ ಸಂತರ್ಪಣೆ ನಡೆಯಲಿದೆ.

 

More from the blog

ಲೋಕಸಭಾ ಚುನಾವಣೆ : ಎ.20 ರಂದು‌ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ಬೃಹತ್ ಚುನಾವಣಾ ಪ್ರಚಾರ

ಬಂಟ್ವಾಳ: ಲೋಕಸಭಾ ಚುನಾವಣೆಯ ಪ್ರಚಾರ ಬಿರುಸಿನಿಂದ ನಡೆಯುತ್ತಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಎ.20 ರಂದು‌ ಶನಿವಾರ ಮಧ್ಯಾಹ್ನ 2.30 ಕ್ಕೆ ಗಂಟೆಗೆ ಬಿಸಿರೋಡಿನ ಬ್ರಹ್ಮ ಶ್ರೀನಾರಾಯಣ ಗುರು ಮಂದಿರದಲ್ಲಿ ಬೃಹತ್ ಚುನಾವಣಾ...

ರಾಜ್ಯದಲ್ಲಿ ಮತ್ತೆ ಏರಿದ ತಾಪಮಾನ

ಬೆಂಗಳೂರು: ಕಳೆದೊಂದು ವಾರದಿಂದ ತಗ್ಗಿದ್ದ ತಾಪಮಾನ ಮತ್ತೆ ಏರಿಕೆಯಾಗಿದ್ದು, ಮುಂದಿನ 5 ದಿನಗಳ ಕಾಲ ಕರ್ನಾಟಕದ ಬಹುತೇಕ ಕಡೆಗಳಲ್ಲಿ ಗರಿಷ್ಠ ಉಷ್ಣಾಂಶವು 2ರಿಂದ 3 ಡಿಗ್ರಿ ಏರಿಕೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ...

ಅಯೋಧ್ಯೆಯಲ್ಲಿ ಅದ್ಧೂರಿ ರಾಮನವಮಿ ; ರಾಮಲಲ್ಲಾ ಹಣೆ ಮೇಲೆ ಸೂರ್ಯ ತಿಲಕ

ಅಯೋಧ್ಯೆ: ಬರೋಬ್ಬರಿ 500 ವರ್ಷಗಳ ಬಳಿಕ ಅಯೋಧ್ಯೆಯಲ್ಲಿ ಮೊದಲ ಶ್ರೀರಾಮನವಮಿಯನ್ನು ಸಂಭ್ರಮ, ಸಡಗರದಿಂದ ಆಚರಿಸಲಾಗುತ್ತಿದೆ. ಮೊದಲ ರಾಮನವಮಿಯಂದು ರಾಮಲಲ್ಲಾನಿಗೆ ಸೂರ್ಯನ ತಿಲಕ ಸ್ಪರ್ಶಿಸಿದ್ದು, ಸೂರ್ಯವಂಶಸ್ಥನಿಗೆ ಸೂರ್ಯನ ಅಭಿಷೇಕ ನೆರವೇರಿಸಲಾಗಿದೆ. ರಾಮನವಮಿ ಅಂಗವಾಗಿ ಮಧ್ಯಾಹ್ನ 12 ಗಂಟೆಗೆ...

ಪುಣಚ: ಸೇತುವೆ ಕುಸಿತ ಪ್ರಕರಣ : ಗುತ್ತಿಗೆದಾರರ ವಿರುದ್ದ ಪ್ರಕರಣ

ವಿಟ್ಲ: ವಿಟ್ಲದ ಪುಣಚ ಗ್ರಾಮದ ಬರೆಂಜಾ - ಕುರುಡಕಟ್ಟೆ ಸಂಪರ್ಕ ರಸ್ತೆಯ ಮಲ್ಲಿಪ್ಪಾಡಿಯಲ್ಲಿ ನಿರ್ಮಾಣ ಹಂತದಲ್ಲಿ ಸೇತುವೆ ಕುಸಿದುಬಿದ್ದ ಅವಘಡದಲ್ಲಿ ಗಾಯಗೊಂಡ ಏಳು ಮಂದಿ ಕಾರ್ಮಿಕರು ಆಸ್ಪತ್ರೆಗಳಲ್ಲಿ ಚೇತರಿಸುತ್ತಿದ್ದಾರೆ. ಇನ್ನೊಂದೆಡೆ ಈ ಪ್ರಕರಣಕ್ಕೆ...