ಬಂಟ್ವಾಳ: ಬಿ.ಸಿ.ರೋಡಿನ ಸಮಾಜ ಕಲ್ಯಾಣ ಇಲಾಖೆ ವಸತಿ ಶಾಲಾ ವಠಾರದಲ್ಲಿ ಮಕ್ಕಳಿಗೆ ಬಾಲಕಾರ್ಮಿಕ ತಡೆಯುವ ಕಾಯ್ದೆಯ ಕುರಿತಾಗಿ ಜಾಗೃತಿ ಅಭಿಯಾನ ಇತ್ತೀಚೆಗೆ ಜರಗಿತು. ಜಿಲ್ಲಾ ಬಾಲಕಾರ್ಮಿಕ ಯೋಜನೆ ಸಂಘ ಮತ್ತು ಕಾರ್ಮಿಕ ಇಲಾಖೆ ಬಂಟ್ವಾಳ ಇವರ ವತಿಯಿಂದ ಕಾರ್ಯಕ್ರಮ ಸಂಯೋಜಿಸಲಾಗಿತ್ತು. ಮಂಗಳೂರು ಸಹಾಯಕ ಕಾರ್ಮಿಕ ಆಯುಕ್ತ ಬಿ.ನಾಗರಾಜ್ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಶುಭ ಹಾರೈಸಿದರು.
ಬಿ.ಸಿ.ರೋಡಿನ ಆಶ್ರಮ ಶಾಲೆ ಮತ್ತು ಕುದ್ದುಪದವು ಸರಕಾರಿ ಪರಿಶಿಷ್ಟ ವರ್ಗಗಳ ಆಶ್ರಮ ಶಾಲೆಯಲ್ಲಿ ಬೀದಿ ನಾಟಕವನ್ನು ಪ್ರದರ್ಶಿಸಲಾಯಿತು.
ಸಾರ್ವಜನಿಕರಿಗೆ ಬಾಲಕಾರ್ಮಿಕ ಪದ್ದತಿಯ ದುಷ್ಪರಿಣಾಮಗಳ ಬಗ್ಗೆ ಕಾರ್ಮಿಕ ನಿರೀಕ್ಷಕಿ ಮರ್ಲಿನ್ ಗ್ರೇಸಿಯವರು ಮಾಹಿತಿ ನೀಡಿದರು. ಬೀದಿ ನಾಟಕ ತಂಡದ ಪ್ರಮುಖರಾದ ಬಾಲಕಾರ್ಮಿಕ ಯೋಜನಾ ನಿರ್ದೇಶಕ ಶ್ರೀನಿವಾಸ ನಾಯಕ್, ಶಶಿಧರ್ ವಿ. ಬಂಟ್ವಾಳ ಮೊದಲಾದವರು ಉಪಸ್ಥಿತರಿದ್ದರು.