Wednesday, April 10, 2024

ಬಿ.ಸಿ.ರೋಡ್: ರಾಷ್ಟ್ರೀಯ ಮತದಾರರ ದಿನಾಚರಣೆ

ಬಂಟ್ವಾಳ: ಕೇಂದ್ರ ಚುನಾವಣಾ ಅಯೋಗದ ಸಂಸ್ಥಾಪನಾ ದಿನದ ಅಂಗವಾಗಿ ಶನಿವಾರ ಬಂಟ್ವಾಳ ತಾಲೂಕು ಆಡಳಿತದ ವತಿಯಿಂದ ಬಿ.ಸಿ.ರೋಡಿನಲ್ಲಿರುವ ತಾ.ಪಂ.ನ ಸಾಮರ್ಥ್ಯ ಸೌಧದಲ್ಲಿ ರಾಷ್ಟ್ರೀಯ ಮತದಾರರ ದಿನವನ್ನು ಆಚರಿಸಲಾಯಿತು.


ಈ ಸಂದರ್ಭದಲ್ಲಿ ಮತದಾರರ ಪ್ರತಿಜ್ಞಾ ವಿಧಿ ಬೋಧಿಸಲಾಯಿತು. ತಾ.ಪಂ.ನ ವ್ಯವಸ್ಥಾಪಕಿ ಶಾಂಭವಿ ಎಸ್.ರಾವ್, ಸಂಪನ್ಮೂಲ ವ್ಯಕ್ತಿ ಸರಕಾರಿ ಪಾಲಿಟೆಕ್ನಿಕ್ ಉಪನ್ಯಾಸಕ ಸನತ್‌ರಾಮ್, ಬಿ.ಮೂಡ ಸರಕಾರಿ ಪ.ಪೂ.ಕಾಲೇಜಿನ ಉಪನ್ಯಾಸಕ ರಝಾಕ್ ಅನಂತಾಡಿ, ಶಿಕ್ಷಣ ಸಂಯೋಜಕಿ ಸುಶೀಲಾ, ಕಂದಾಯ ಇಲಾಖೆಯ ರಾಜ್‌ಕುಮಾರ್, ಶಿಕ್ಷಕ ಕಿರಣ್ ಮೊದಲಾದವರು ಉಪಸ್ಥಿತರಿದ್ದರು.
ರಾಷ್ಟ್ರೀಯ ಮತದಾರರ ದಿನಾಚರಣೆ ಅಂಗವಾಗಿ ಪ್ರೌಢಶಾಲೆ ಹಾಗೂ ಕಾಲೇಜು ವಿಭಾಗಕ್ಕೆ ಆಯೋಜಿಸಿದ್ದ ಪ್ರಬಂಧ, ರಸಪ್ರಶ್ನೆ ಹಾಗೂ ಪ್ರಹಸನ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಿಸಲಾಯಿತು.


ಬಿಎಲ್‌ಒಗಳಿಗೆ ಗುರುತಿನ ಚೀಟಿ, ಹೊಸ ಮತದಾರರಿಗೆ ನೂತನ ಶೈಲಿಯ ಗುರುತಿನ ಚೀಟಿ ನೀಡಲಾಯಿತು. ಬಳಿಕ ಮತದಾನ ದಿನಾಚರಣೆ ಹಾಗೂ ಮತದಾನದ ಮಹತ್ವದ ಕುರಿತು ಮಾಹಿತಿ ನೀಡಲಾಯಿತು.

 

More from the blog

ಮರು ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸುವುದು ಹೇಗೆ….?​ ಇಲ್ಲಿದೆ ಮಾಹಿತಿ

ಬೆಂಗಳೂರು: ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದ್ದು, ಶೇ 81.15 ಮಂದಿ ಉತ್ತೀರ್ಣಗೊಂಡಿದ್ದಾರೆ. 2024ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ ವಿಭಾಗದಲ್ಲಿ 1,28,448 ವಿದ್ಯಾರ್ಥಿಗಳು ಪಾಸ್ ಆಗಿದ್ದಾರೆ. ವಾಣಿಜ್ಯ ವಿಭಾಗದಲ್ಲಿ...

ದ್ವಿತೀಯ ಪಿಯು ಫಲಿತಾಂಶ ಪ್ರಕಟ : ದಕ್ಷಿಣ ಕನ್ನಡ ಜಿಲ್ಲೆಗೆ ಮೊದಲ ಸ್ಥಾನ

ಬೆಂಗಳೂರು: ಮಾರ್ಚ್ 1ರಿಂದ ಮಾರ್ಚ್ 22ರವರೆಗೆ ನಡೆದಿದ್ದ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಬುಧವಾರ ಪ್ರಕಟಗೊಂಡಿದೆ. ಬೆಂಗಳೂರಿನಲ್ಲಿ ಶಿಕ್ಷಣ ಇಲಾಖೆ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿದೆ. ಈ ಬಾರಿ, ಶೇ 81.15 ಮಂದಿ ಉತ್ತೀರ್ಣರಾಗಿದ್ದಾರೆ....

ಶಾಲಾ ಸಮುದಾಯದತ್ತ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

ಮಾಣಿ: ಶೈಕ್ಷಣಿಕ ವಿಚಾರಗಳ ಸಂಬಂಧಿತವಾದ ಒಳ್ಳೆಯ ಚಚೆ೯ಗಳು ಮೂಡಿಬಂದಾಗ ವಿದ್ಯಾರ್ಥಿಗಳ ಶೈಕ್ಷಣಿಕ ಅಭಿವೃದ್ಧಿಗೆ ಪೂರಕವಾದ ಕೆಲಸಗಳು ಮೂಡಲು ಸಾಧ್ಯ ‌. ಪ್ರತಿಯೊಬ್ಬ ವಿದ್ಯಾರ್ಥಿ, ಪೋಷಕರು,ತನ್ನ ಶಾಲೆಯ ಬಗ್ಗೆ ಒಳ್ಳೆಯ ಭಾವನೆ, ಸಂಬಂಧ ಇರಬೇಕು...

ಮೈಟ್ ಎಜುಕೇಶನ್ ಸಂಸ್ಥೆಯ ವತಿಯಿಂದ 2024ರ ಪ್ರಾಕ್ಟಿಕಲ್ ಪರೀಕ್ಷೆ

ಮಂಗಳೂರು ಹಾಗೂ ಬಿಸಿರೋಡ್ ನಲ್ಲಿ ಕಾರ್ಯನಿರ್ವಹಿಸುತ್ತಿರುವ ಮೈಟ್ ಎಜುಕೇಶನ್ ಸಂಸ್ಥೆಯ ವತಿಯಿಂದ 2024ರ ಪ್ರಾಕ್ಟಿಕಲ್ ಪರೀಕ್ಷೆ ಸೋಮವಾರ ಬಿಸಿರೋಡ್ ಶಾಖೆಯಲ್ಲಿ ನಡೆಯಿತು. ಟೀಚರ್ಸ್ ಟ್ರೈನಿಂಗ್ ವಿಭಾಗದ ವಿದ್ಯಾರ್ಥಿನಿಯರಿಂದ ಪ್ರಸ್ತುತ ವರ್ಷದಲ್ಲಿ ತಯಾರಿಸಿದ ಎಲ್ಲಾ ಕಲಿಕಾ...