ಬಂಟ್ವಾಳ: ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಹಾಗೂ ತಾಲೂಕು ಬಾಲ ಭವನ ಸಮಿತಿ ಬಂಟ್ವಾಳ ಇದರ ಸಂಯುಕ್ತ ಆಶ್ರಯ ದಲ್ಲಿ ಗಣರಾಜ್ಯೋತ್ಸವದ ಅಂಗವಾಗಿ ಚಿತ್ರಕಲೆ ಮತ್ತು ವೇಷಭೂಷಣ ಸ್ಪರ್ಧೆ ಭಾನುವಾರ ಬಿ.ಸಿ.ರೋಡಿನ ಸ್ತ್ರೀಶಕ್ತಿ ಸಭಾಭವನದಲ್ಲಿ ನಡೆಯಿತು.
ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ದೀಪ ಪ್ರಜ್ವಲಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ಸಂದರ್ಭ ತಾ.ಪಂ. ಉಪಾಧ್ಯಕ್ಷ ಅಬ್ಬಾಸ್ ಅಲಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಪ್ರಭಾರ ಶಿಶು ಅಭಿವೃದ್ದಿ ಅಧಿಕಾರಿ ಗಾಯತ್ರಿ ಕಂಬಳಿ, ಹಿರಿಯ ಮೇಲ್ವಿಚಾರಕಿ ಭಾರತಿ ಕುಂದರ್ ಉಪಸ್ಥಿತರಿದ್ದರು. ಪತ್ರಕರ್ತ ಸಂದೀಪ್ ಸಾಲ್ಯಾನ್, ಶಿಕ್ಷಕರಾದ ಚೆನ್ನಕೇಶವ ಡಿ.ಆರ್, ಮುರಳೀಕೃಷ್ಣ, ಸ್ವಾತಿಶ್ರಿ ವಿ. ಬಂಗೇರ ತೀರ್ಪುಗಾರರಾಗಿ ಸಹಕರಿಸಿದರು. ಇಲಖಾಧಿಕಾರಿಗಳಾದ ಸವಿತಾ, ಸಿಂಧು, ಸರೋಜಾ, ನೀತಾ, ಸುಜಾತ ಸಹಕರಿಸಿದರು.
ಕಿರಿಯ ವಿದ್ಯಾರ್ಥಿಗಳಿಗೆ ನಾನು ಕಂಡ ದೃಶ್ಯ ಹಾಗೂ ಹಿರಿಯ ವಿದ್ಯಾರ್ಥಿಗಳಿಗೆ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ವಿಷಯದಲ್ಲಿ ಚಿತ್ರಕಲಾ ಸ್ಪರ್ಧೆ ನಡೆಯಿತು. ಎರಡು ವಿಭಾಗದಲ್ಲಿ ವೇಷಭೂಷಣ ಸ್ಪರ್ಧೆ ನಡೆಯಿತು. ಸಮಾರೋಪ ಸಮಾರಂಭದಲ್ಲಿ ವಿಜೇತರಿಗೆ ನಗದು ಬಹುಮಾನ ಹಾಗೂ ಪ್ರಶಸ್ತಿ ಪತ್ರ ವಿತರಿಸಲಾಯಿತು.