Saturday, April 6, 2024

ಹಿರಿಯ ಪತ್ರಕರ್ತ ರವಿರಾಜ್ ವಳಲಂಬೆ ನಿಧನ

ಉಡುಪಿ: ಹಿರಿಯ ಪರ್ತಕರ್ತ ರವಿರಾಜ್ ವಳಲಂಬೆ ನಿನ್ನೆ ರಾತ್ರಿ ಹೃದಯಘಾತದಿಂದ ನಿಧನ ಹೊಂದಿದ್ದಾರೆ. ಕಿನ್ನಿಮುಲ್ಕಿಯ ಅವರ ನಿವಾಸದಲ್ಲಿ ಎದೆನೋವು ಕಾಣಿಸಿಕೊಂಡ ಹಿನ್ನೆಲೆ ಕೂಡಲೇ ಆದರ್ಶ ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗ ದಾರಿ ಮಧ್ಯೆಯೇ ಅಸುನೀಗಿದ್ದಾರೆ.

ಹಲವು ವರ್ಷಗಳ ಕಾಲ ಉಡುಪಿಯಲ್ಲಿ ಈಟಿವಿ ವರದಿಗಾರನಾಗಿ ಸೇವೆ ಸಲ್ಲಿಸಿದ ಇವರು, ನಂತರ ಸುವರ್ಣನ್ಯೂಸ್ ನಲ್ಲಿ ಪೋಲೊಟಿಕಲ್ ವರದಿಗಾರನಾಗಿ ಕೆಲಸ ಮಾಡಿ ಬಳಿಕ ಉಡುಪಿಯಲ್ಲಿ ಪ್ರೈಮ್ ಟಿವಿ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿದ್ದರು.
ರವಿರಾಜ್ ಅವರು ಪತ್ನಿ, ಇಬ್ಬರು ಪುತ್ರಿಯರನ್ನು ಹಾಗೂ ಅಪಾರ ಬಂಧುಮಿತ್ರರನ್ನು ಅಗಲಿದ್ದಾರೆ.

More from the blog

ನೀತಿ ಸಂಹಿತೆ ಉಲ್ಲಂಘನೆ : ಕೋಟಾ ಶ್ರೀನಿವಾಸ್‌ ಪೂಜಾರಿಗೆ ಕೋರ್ಟ್‌ ಸಮನ್ಸ್‌

ಬೆಂಗಳೂರು: ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ್‌ ಪೂಜಾರಿ ಅವರಿಗೆ ಕೋರ್ಟ್‌ ಸಮನ್ಸ್‌ ಜಾರಿ ಮಾಡಿದೆ. ಕೋಟಾ ಶ್ರೀನಿವಾಸ ಪೂಜಾರಿ, ಗುರ್ಮೆ ಸುರೇಶ್ ಶೆಟ್ಟಿ, ಲಾಲಾಜಿ ಮೆಂಡನ್ ಹಾಗೂ ಶಾಲಾ ಆಡಳಿತ ಮಂಡಳಿಗೆ ಜನಪ್ರತಿನಿಧಿಗಳ ವಿಶೇಷ...

ಸಾವು ಗೆದ್ದು ಬಂದ ಸಾತ್ವಿಕ್ ; ಸತತ 20 ಗಂಟೆಗಳ ಕಾರ್ಯಾಚರಣೆ ಯಶಸ್ವಿ

ವಿಜಯಪುರ: ಕೊಳವೆ ಬಾವಿಗೆ ಬಿದ್ದಿರುವ 2 ವರ್ಷದ ಕಂದ ಸಾತ್ವಿಕ್​​ನನ್ನು ಕೊನೆಗೂ ರಕ್ಷಣಾ ಪಡೆಯ ಸಿಬ್ಬಂದಿ ಹೊರ ತೆಗೆಯುವಲ್ಲಿ ಯಶಸ್ವಿಯಾಗಿದ್ದಾರೆ. ಇಂಡಿಯ ಲಚ್ಯಾನ ಗ್ರಾಮದ ತೋಟದಲ್ಲಿ ಆಟವಾಡುತ್ತಿದ್ದಾಗ ಮಗು ಕೊಳವೆ ಬಾವಿಗೆ ಬಿದ್ದಿತ್ತು. ಈ ಸಂಬಂಧ...

ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬೃಜೇಶ್ ಚೌಟ ನಾಮಪತ್ರ ಸಲ್ಲಿಕೆ

ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬೃಜೇಶ್ ಚೌಟ ಅವರು ದ.ಕ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು. ನಾಮಪತ್ರ ಸಲ್ಲಿಕೆಗೆ ಪೂರ್ವಭಾವಿಯಾಗಿ ವಿವಿಧ ದೇವಾಲಯಗಳಿಗೆ ಭೇಟಿ ನೀಡಿ ಅವರು ಪೂಜೆ...

ದೇವರ ರಥ ಹೋಗುವ ದಾರಿಯಲ್ಲಿ ಇದ್ದ ವಾಹನಗಳನ್ನ ಜಖಂಗೊಳಿಸಿದ ಭಕ್ತರು

ಮುಲ್ಕಿ: ದೇವರ ರಥ ಹೋಗುವ ದಾರಿಯಲ್ಲಿದ್ದ ವಾಹನಗಳನ್ನು ಭಕ್ತರು ಜಖಂ ಗೊಳಿಸಿದ ಘಟನೆ ಮುಲ್ಕಿಯ ಬಪ್ಪನಾಡು ದುರ್ಗಾಪರಮೇಶ್ವರಿ ಜಾತ್ರೆಯಲ್ಲಿ ಇತ್ತೀಚೆಗೆ ನಡೆದಿದ್ದು, ಇದೀಗ ಈ ವಿಡಿಯೋ ವೈರಲ್ ಆಗುತ್ತಿದೆ. ಜಾತ್ರೆಯಲ್ಲಿ ದೇವರ ರಥ ಹೋಗುವ...