Sunday, April 7, 2024

ಪೆನ್ಸಿಲ್ವೇನಿಯಾ ವಿಶ್ವವಿದ್ಯಾಲಯ ವಿದ್ಯಾರ್ಥಿಗಳು ಶ್ರೀ ಕ್ಷೇತ್ರ ಧರ್ಮಸ್ಥಳ ಭೇಟಿ

ಧರ್ಮಸ್ಥಳ: ಪೆನ್ಸಿಲ್ವೇನಿಯಾ ವಿಶ್ವವಿದ್ಯಾಲಯ   ವಿದ್ಯಾರ್ಥಿಗಳು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಆಗಮಿಸಿ ಕ್ಷೇತ್ರದಿಂದ ನಡೆಸುತ್ತಿರುವ ಕಾರ್ಯಕ್ರಮಗಳ ಕುರಿತು ಅಧ್ಯಯನ ನಡಸಿದರು. ಈ ಸಂಧರ್ಭದಲ್ಲಿ ವಿಧ್ಯಾರ್ಥಿಗಳ ಜೊತೆ ಮಾತನಾಡುತ್ತಾ, ಸಮಾಜದಲ್ಲಿ ಅಭಿವೃದ್ಧಿ ಕಾರ್ಯಕ್ರಮಗಳನ್ನು ಕೈಗೊಳ್ಳಲು ಬಹಳ ಅವಕಾಶಗಳಿವೆ. ಧಾರ್ಮಿಕ ಸಂಸ್ಥೆಗಳು ಧರ್ಮ ಸಂರಕ್ಷಣೆಯ ಜೊತೆಗೆ ಪ್ರಸಕ್ತ ಸಮಾಜದಲ್ಲಿ ಇರುವ ಸವಾಲುಗಳನ್ನು ಗುರುತಿಸಿ ಸ್ಪಂದಿಸಿದರೆ ಉತ್ತಮವಾಗುವುದು. ಶ್ರೀ ಕ್ಷೇತ್ರ ಧರ್ಮಸ್ಥಳ ಬಹಳ ವರ್ಷಗಳಿಂದ ಈ ನಿಟ್ಟಿನಲ್ಲಿ ಕರ್ತವ್ಯ ನಿರ್ವಹಿಸುತ್ತಿದೆ. ಪರಂಪರಾಗತವಾಗಿ ಬಂದಿರುವ ಈ ಕೈಂಕರ್ಯ ಸಮಾಜ ಸೇವೆಯನ್ನು ಮಾಡುವ ವಿಫುಲ ಅವಕಾಶವನ್ನು ನಮಗೆ ಒದಗಿಸಿದೆ. ಯೋಜನೆಗಳನ್ನು ಅನುಷ್ಠಾನಿಸುತ್ತಾ ಬಂದಂತೆ ಹೊಸ ಹೊಸ ಚಿಂತನೆಗಳನ್ನು ಕಾರ್ಯ ರೂಪಕ್ಕೆ ತರಲು ಸಾಧ್ಯವಾಯಿತು. ಅಭಿವೃದ್ಧಿ ಕ್ಷೇತ್ರದಲ್ಲಿ ಕೆಲಸ ಮಾಡುವುದು ಬಹಳ ಸಂತೋಷದಾಯಕ ಹಾಗೂ ಸವಾಲುಗಳು ಸಾಮಾನ್ಯ. ಎಂದಿಗೂ ಸವಾಲುಗಳನ್ನು ಎದುರಿಸಿ ಮುನ್ನಡೆದರೆ ಯಶಸ್ಸು ಸಾಧ್ಯ ಎಂದು ಡಾ. ಡಿ. ವಿರೇಂದ್ರ ಹೆಗ್ಗಡೆ ಅವರು ಅಭಿಪ್ರಾಯಪಟ್ಟರು.

ಈ ಸಂಧರ್ಭದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯನ್ನು“ನಾಲೆಡ್ಜ್ ಪಾರ್ಟ್‍ನರ್” ಆಗಿ ಗುರುತಿಸಿದ ಕುರಿತು ಪ್ರಮಾಣ ಪತ್ರವನ್ನು ಹಾಗೂ ಫಲಕವನ್ನು ನೀಡಿ ಡಾ. ಡಿ. ವಿರೇಂದ್ರ ಹೆಗ್ಗಡೆ ಅವರನ್ನು ಪೆನ್ಸಿಲ್ವೇನಿಯಾ ವಿಶ್ವವಿದ್ಯಾಲಯದ ಪರವಾಗಿ ಪ್ರೊ. ಫೆಮಿಡಾ ಅವರು ಗೌರವಿಸಿದರು.

ಈ ಸಂಧರ್ಭದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯ ಕಾರ್ಯನಿರ್ವಾಹಕ ನಿರ್ದೇಶಕ ಡಾ.ಎಲ್. ಹೆಚ್.ಮಂಜುನಾಥ್‍ ಅವರು ಗ್ರಾಮೀಣಾಭಿವೃದ್ಧಿ ಯೋಜನೆಯ ಕುರಿತು ವಿವರಿಸಿದರು. ಸಿರಿಗ್ರಾಮೊದ್ಯೋಗ ಸಂಸ್ಥೆಗೆ ಭೇಟಿ ನೀಡಲಾಯಿತು. ಕ್ಷೇತ್ರದ ವಿವಿಧ ವಿಭಾಗಗಳನ್ನು ಭೇಟಿ ಮಾಡಲಾಯಿತು. ತಂಡದಲ್ಲಿ ಪ್ರೊ.ಫೆಮಿಡಾ, ವಿನೋದ್ ದೀಕ್ಷೀತ್‍ ಅವರು ತಂಡವನ್ನು ಪ್ರತಿನಿಧಿಸಿದರು. ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ನಿರ್ದೇಶಕಿ ಮಮತಾ ಹರೀಶ್‍ ರಾವ್, ಉಪನ್ಯಾಸಕಿ ಚೈತನ್ಯಾ ಉಪಸ್ಥಿತರಿದ್ದರು.

More from the blog

ರಾಜ್ಯದಲ್ಲಿ 60 ಮಂದಿಯ ನಾಮಪತ್ರ ತಿರಸ್ಕೃತ

ಬೆಂಗಳೂರು: ಲೋಕಸಭಾ ಚುನಾವಣೆಗೆ ರಾಜ್ಯದ ಮೊದಲ ಹಂತದ 14 ಕ್ಷೇತ್ರಗಳಲ್ಲಿ 358 ಅಭ್ಯರ್ಥಿಗಳು 492 ನಾಮಪತ್ರ ಸಲ್ಲಿಸಿದ್ದು, ಇದರಲ್ಲಿ 13 ಕ್ಷೇತ್ರದಲ್ಲಿ ಪರಿಶೀಲನೆ ಕಾರ್ಯ ಮುಗಿದಿದೆ. 276 ನಾಮಪತ್ರಗಳು ಕ್ರಮಬದ್ಧವಾಗಿದ್ದು, 60 ನಾಮಪತ್ರಗಳು...

ಹೆರಿಗೆ ವೇಳೆ ವಿಪರೀತ ರಕ್ತಸ್ರಾವ : ಲಾಯಿಲದ ಮಹಿಳೆ ಸಾವು

ಬೆಳ್ತಂಗಡಿ: ಹೆರಿಗೆಗೆಂದು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆಯೊಬ್ಬರು ತೀವ್ರ ರಕ್ತ ಸ್ರಾವದಿಂದ ಸಾವನ್ನಪ್ಪಿದ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಬದ್ಯಾರ್ ಖಾಸಗಿ ಆಸ್ಪತ್ರೆಯಲ್ಲಿ ಲಾಯಿಲ ಗ್ರಾಮದ ಗಾಂಧಿನಗರ ನಿವಾಸಿ ಗಾಯತ್ರಿ ಎಂಬವರು ಎರಡನೇ...

ಆಭರಣ ಪ್ರಿಯರಿಗೆ ಗುಡ್‌ನ್ಯೂಸ್‌ : ವಾರಾಂತ್ಯದಲ್ಲಿ ಚಿನ್ನದ ದರ ತುಸು ಇಳಿಕೆ…

ಬೆಂಗಳೂರು: ಚಿನ್ನದ ದರದಲ್ಲಿ ಮತ್ತೆ ಹಾವು ಏಣಿಯಾಟ ಶುರುವಾಗಿದೆ. ಕಳೆದೆರಡು ದಿನಗಳಿಂದ ನಿರಂತರ ಏರಿಕೆ ಕಂಡಿದ್ದ ಬಂಗಾರದ ಬೆಲೆ ಇದೀಗ ಇಳಿಕೆಯಾಗಿದೆ. ನಿನ್ನೆಯ ದರಕ್ಕೆ ಹೋಲಿಸಿದರೆ 10ಗ್ರಾಂ ಚಿನ್ನದ ಮೇಲೆ 450 ರೂ...

ನೀತಿ ಸಂಹಿತೆ ಇರುವಾಗ ಆಶ್ಲೇಷ ಬಲಿ ಮಂಟಪ ಕಾಮಗಾರಿ ಆರಂಭ ಸಮರ್ಪಕವಲ್ಲ- ಹರೀಶ್ ಇಂಜಾಡಿ

ಸುಬ್ರಹ್ಮಣ್ಯ: ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಈ ಹಿಂದಿನ ಆಡಳಿತ ಮಂಡಳಿಯ ಕೊನೇ ದಿನಗಳಲ್ಲಿ ದಾನಿಗಳು ಕ್ಷೇತ್ರದಲ್ಲಿ ಆಶ್ಲೇಷ ಬಲಿ ಮಂಟಪ ನಿರ್ಮಿಸಲು ಮುಂದೆ ಬಂದರು. ಇದು ಸ್ವಾಗತಾರ್ಹ ಬೆಳವಣಿಗೆ. ಆದರೆ...