ಉಜಿರೆ: ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಮತ್ತು ಹೇಮಾವತಿ ವೀ. ಹೆಗ್ಗಡೆಯವರ ಮಾರ್ಗದರ್ಶನದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಆಶ್ರಯದಲ್ಲಿ ಇದೇ ಜ.7 ರಿಂದ 13ರ ವರೆಗೆ ರಾಜ್ಯದೆಲ್ಲೆಡೆ ಬಸದಿಗಳು, ಚರ್ಚ್‌ಗಳು, ಮಸೀದಿಗಳು ಹಾಗೂ ದೇವಸ್ಥಾನಗಳು ಸೇರಿದಂತೆ ಎಲ್ಲಾ ಧಾರ್ಮಿಕ ಶ್ರದ್ಧಾ ಕೇಂದ್ರಗಳ ಸ್ವಚ್ಛತಾ ಅಭಿಯಾನ ಸಪ್ತಾಹ ಆಯೋಜಿಸಲಾಗಿದೆ.
ಕಳೆದ ನಾಲ್ಕು ವರ್ಷಗಳಿಂದ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಆಶ್ರಯದಲ್ಲಿ ರಾಜ್ಯದೆಲ್ಲೆಡೆ ಸ್ವ-ಸಹಾಯ ಸಂಘಗಳ ಸದಸ್ಯರು ಧಾರ್ಮಿಕ ಶ್ರದ್ಧಾ ಕೇಂದ್ರಗಳ ಸ್ವಚ್ಛತಾ ಅಭಿಯಾನ ಹಮ್ಮಿಕೊಂಡಿದ್ದು, ಈ ವರ್ಷ ಇದೇ 14 ರಂದು ಮಕರ ಸಂಕ್ರಾಂತಿಯ ಮೊದಲು ಅಂದರೆ 13 ರೊಳಗೆ ಸ್ವಚ್ಛತಾ ಅಭಿಯಾನ ಸಪ್ತಾಹದ ಮೂಲಕ ಎಲ್ಲಾ ಶ್ರದ್ಧಾ ಕೇಂದ್ರಗಳನ್ನು ಸ್ವಚ್ಛಗೊಳಿಸಲು ಉದ್ದೇಶಿಸಲಾಗಿದೆ.
ಸ್ವಚ್ಛತಾ ಅಭಿಯಾನದಿಂದ ಶ್ರದ್ಧಾ ಕೇಂದ್ರಗಳಲ್ಲಿ ಪಾವಿತ್ರ್ಯತೆ ಹೆಚ್ಚಾಗಿ ಸಾನ್ನಿಧ್ಯ ವೃದ್ಧಿಯೊಂದಿಗೆ ಭಕ್ತರ ಅಭೀಷ್ಟಗಳು ನೆರವೇರುತ್ತಿವೆ. ಊರಿನಲ್ಲಿ ಸುಖ-ಶಾಂತಿ, ನೆಮ್ಮದಿಯೊಂದಿಗೆ ಸಮಾಜದ ಸಂಘಟನೆ ಹಾಗೂ ಸಾಮರಸ್ಯ ಉಂಟಾಗಿದೆ ಎಂದು ಗ್ರಾಮಾಭಿವೃದ್ಧಿ ಯೋಜನೆಯ ಫಲಾನಿಭವಿಗಳು ಅನಿಸಿಕೆ ವ್ಯಕ್ತಪಡಿಸುತ್ತಾರೆ.
ರಾಜ್ಯದ 34 ಜಿಲ್ಲೆಗಳ 170 ತಾಲ್ಲೂಕುಗಳಲ್ಲಿ 9,037 ಶ್ರದ್ಧಾ ಕೇಂದ್ರಗಳಲ್ಲಿ 2,99,863 ಸ್ವಯಂ ಸೇವಕರು ಸ್ವಚ್ಛತಾ ಅಭಿಯಾನದಲ್ಲಿ ಭಾಗವಹಿಸಲಿದ್ದಾರೆ.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here