ಬಂಟ್ವಾಳ: ಇರಾ ಗ್ರಾಮ ಪಂಚಾಯತ್ ವತಿಯಿಂದ 2019-20ನೇ ಸಾಲಿನ ಮಕ್ಕಳ ಗ್ರಾಮ ಸಭೆ ಇರಾ-ತಾಳಿತ್ತಬೆಟ್ಟು ದ.ಕ.ಜಿ.ಪಂ ಉನ್ನತಿಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿ ಎಸ್. ಚಿನ್ಮಯ್ ಕುಮಾರ್ ಅಧ್ಯಕ್ಷತೆಯಲ್ಲಿ ನಡೆಯಿತು.
ಅಂಗನವಾಡಿ ಮೇಲ್ವಿಚಾರಕಿ ಗುಣವತಿ ಪ್ರಾಸ್ತವಿಕ ಮಾತುಗಳನ್ನಾಡಿ, ಮಕ್ಕಳ ಹಕ್ಕುಗಳ ಮತ್ತು ರಕ್ಷಣೆಯ ಬಗ್ಗೆ ಮಾಹಿತಿ ನೀಡಿದರು. ಗ್ರಾಮ ಪಂಚಾಯತ್ ಅಧ್ಯಕ್ಷ ಅಬ್ದುಲ್ ರಝಾಕ್ ಕುಕ್ಕಾಜೆ ಮಾತನಾಡಿ, ಗ್ರಾಮ ಮಟ್ಟದ ಮಕ್ಕಳ ಶೈಕ್ಷಣಿಕ ಹಾಗೂ ಇನ್ನಿತರ ಸಮಸ್ಯೆಗಳಿಗೆ ಸೂಕ್ತವಾಗಿ ಸ್ಪಂದಿಸುವ ಭರವಸೆ ನೀಡಿದರು.
ಶಿಕ್ಷಣ ಇಲಾಖೆಯ ಪರವಾಗಿ ತಾಳಿತ್ತಬೆಟ್ಟು ಶಾಲಾ ಮುಖ್ಯ ಶಿಕ್ಷಕಿ ಸುಜಾತ ಟಿ.ಎಸ್. ಉಪಸ್ಥಿತರಿದ್ದರು. ಆರೋಗ್ಯ ಇಲಾಖೆಯ ಪರವಾಗಿ ಹಿರಿಯ ಮಹಿಳಾ ಆರೋಗ್ಯ ಸಹಾಯಕಿ ರಾಧ ಇಲಾಖಾ ಮಾಹಿತಿ ನೀಡಿದರು.
ಗ್ರಾಮ ಪಂಚಾಯತ್ ಸದಸ್ಯರಾದ ಮೊಯಿದಿನ್ ಕುಂಞಿ, ಪಾರ್ವತಿ ಉಪಸ್ಥಿತರಿದ್ದರು. ವಿವಿದ ಶಾಲಾ ಮುಖ್ಯ ಶಿಕ್ಷಕ ಶಿಕ್ಷಕಿಯರು ಮತ್ತು ಅದ್ಯಾಪಕರು, ಅಂಗನವಾಡಿ ಕಾರ್ಯಕರ್ತರು, ಆಶಾ ಕಾರ್ಯಕರ್ತರು ಹಾಗೂ ಗ್ರಾಮದ ಎಲ್ಲಾ ಶಾಲಾ ಮಕ್ಕಳು ಪಾಲ್ಗೊಂಡಿದ್ದರು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸುಶೀಲಾ ಸ್ವಾಗತಿಸಿ, ಪಂಚಾಯತ್ ಸಿಬ್ಬಂದಿ ಗಿರಿಯಪ್ಪ ವಂದಿಸಿದರು.