ಮಂಗಳೂರು: ಸುಮಾರು 10 ವರ್ಷಗಳ ನಿರಂತರ ಪರಿಶ್ರಮದ ನಂತರ ಫ್ಲೈ ಓವರ್ ಸಂಚಾರ ಮುಕ್ತವಾಗಿದೆ. ಇಂದು ಬೆಳಿಗ್ಗೆ ಬಿಜೆಪಿ ರಾಜ್ಯಧ್ಯಕ್ಷ, ಸಂಸದ ನಳಿನ್ ಕುಮಾರ್‍ ಕಟೀಲ್ ಹಾಗೂ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಮಂಗಳೂರು ಪಂಪ್ ವೆಲ್ ಫ್ಲೈ ಲೋಕರ್ಪಾಣೆ ಮಾಡಿದರು. ಉದ್ಘಾಟನಾ ಕಾರ್ಯಕ್ರಮದಲ್ಲಿ ಶಾಸಕ ವೇದವ್ಯಾಸ್ ಕಾಮತ್, ಶಾಸಕ ವೈ ಭರತ್ ಶೆಟ್ಟಿ ಮುಂತಾದವರು ಉಪಸ್ಥಿತರಿದ್ದರು.

600 ಮೀಟರ್ ಉದ್ದ ಹಾಗೂ, 20 ಮೀಟರ್ ಅಗಲ ಹೊಂದಿರುವ ಪಂಪ್‌ವೆಲ್ ಮೇಲ್ಸೇತುವೆ ನಿರ್ಮಾಣಕ್ಕೆ 2010ರಲ್ಲಿ ಚಾಲನೆ ನೀಡಲಾಗಿತ್ತು. ಈ ಮೇಲ್ಸೇತುವೆ ಲೋಕಾರ್ಪಣೆಗೆ ಕಳೆದೆರಡು ವರ್ಷಗಳಿಂದ ಹಲವು ಗಡುವುಗಳನ್ನು ಸಂಸದ ನಳಿನ್‌ಕುಮಾರ್ ಕಟೀಲು ನೀಡಿದ್ದರು. ಅಂತಿಮವಾಗಿ ಇಂದಿನಿಂದ ಪಂಪ್ ವೆಲ್ ಫ್ಲೈ ಓವರ್‍ ಮೂಲಕ ಸಂಚರಿಸಬಹುದಾಗಿದೆ. ಅದ್ದರಿಂದ ಮಂಗಳೂರಿನಲ್ಲಿ ಇನ್ನು ಸ್ವಲ್ಪ ಮಟ್ಟಿಗೆ ಟ್ರಾಫಿಕ್ ಸಮಸ್ಯೆ ಕಡಿಮೆಯಾಗಬಹುದು.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here