ಬಂಟ್ವಾಳ: ಶ್ರೀರಾಮ ಪದವಿ ಮಹಾವಿದ್ಯಾಲಯ ಕಲ್ಲಡ್ಕ ಇದರ ದಶಮಾನೋತ್ಸವದ ಅಂಗವಾಗಿ ಪ್ರಭವ ವಿಜ್ಞಾನ ಸಂಘ ಮತ್ತು ಮಂಗಳೂರು ಪ್ರಸಾದ್ ನೇತ್ರಾಲಯ ಇದರ ಜಂಟಿ ಆಶ್ರಯದಲ್ಲಿ ಜ.8 ರಿಂದ 14 ರವರೆಗೆ ಉಚಿತ ನೇತ್ರ ತಪಾಸಣಾ ಶಿಬಿರ ಬೆಳಗ್ಗೆ 9 ಗಂಟೆಯಿಂದ ಸಂಜೆ 4ರವರೆಗೆ ನಡೆಯುತ್ತಿದೆ.
ಆಸಕ್ತ ಸಾರ್ವಜನಿಕರು, ಈ ತಪಾಸಣಾ ಶಿಬಿರದಲ್ಲಿ ಪಾಲ್ಗೊಳ್ಳಬಹುದು ಮತ್ತು ಚಿಕಿತ್ಸೆಯ ನಂತರ ಅಗತ್ಯವಿದ್ದಲ್ಲಿ ಕನ್ನಡಕವನ್ನು ವಿತರಿಸಲಾಗುವುದು. ಹೆಚ್ಚಿನ ಮಾಹಿತಿಗಾಗಿ 9611035321 ಗೆ ಸಂಪರ್ಕಿಸಬಹುದು ಎಂದು ಕಾಲೇಜಿನ ಪ್ರಾಂಶುಪಾಲ ಕೃಷ್ಣಪ್ರಸಾದ ಕಾಯರ್‌ಕಟ್ಟೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here