ಕಲ್ಲಡ್ಕ: ಇಟಲಿಯಲ್ಲಿ ನಡೆದ 2019ರ ವಿಂಟರ್ ಡೆಫಾಲಿಂಪಿಕ್ಸ್‌ನ ಚೆಸ್ ಚಾಂಪಿಯನ್‌ಶಿಪ್‌ನಲ್ಲಿ ಪದವಿಪೂರ್ವ ಕಾಲೇಜಿನ ಪ್ರಥಮ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ಕು. ಯಶಸ್ವಿ ಕೆ. ಭಾಗವಹಿಸಿ, ಭಾರತವನ್ನು ಪ್ರತಿನಿಧಿಸಿ ಮೂರನೇ ಸ್ಥಾನ ಪಡೆದಿದ್ದಾರೆ. ಇವರಿಗೆ ಶ್ರೀರಾಮ ವಿದ್ಯಾಕೇಂದ್ರದ ಅಧ್ಯಕ್ಷರು, ಆಡಳಿತ ಮಂಡಳಿ ಹಾಗೂ ಉಪನ್ಯಾಸಕರು, ಉಪನ್ಯಾಸಕೇತರರು ಅಭಿನಂದನೆಯನ್ನು ಸಲ್ಲಿಸಿರುತ್ತಾರೆ.