ವಿಟ್ಲ: ಆರ್ಥಿಕ ದುರ್ಬಲ ಕುಟುಂಬಗಳಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರಗಳು ಅತ್ಯಂತ ಪ್ರಯೋಜನಕಾರಿಯಾಗಿದೆ. ಇಂತಹ ಶಿಬಿರಗಳನ್ನು ಸದ್ವಿನಿಯೋಗಿಸುವುದರೊಂದಿಗೆ ಸಮಾಜದ ಸ್ವಾಸ್ಥ್ಯಕ್ಕೂ ಕಾರಣವಾಗುವುದು ಎಂದು ವಿಟ್ಲ ಪಟ್ಟಣ ಪಂಚಾಯಿತಿ ಅಧ್ಯಕ್ಷೆ ದಮಯಂತಿ ತಿಳಿಸಿದರು.
ಅವರು ವಿಟ್ಲ ವಿಠಲ ಪ.ಪೂ. ಕಾಲೇಜಿನ ಸುವರ್ಣ ರಂಗ ಮಂದಿರದಲ್ಲಿ ಭಾನುವಾರ ನಡೆದ ಉಚಿತ ಆರೋಗ್ಯ ತಪಾಸಣಾ ಶಿಬಿರದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದರು.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ವಿಟ್ಲದ ಯೋಜನಾಧಿಕಾರಿ ಮೋಹನ್ ಮಾತನಾಡಿ ನಮ್ಮ ಆರೋಗ್ಯವನ್ನು ಜೀವನದ ಯಾವುದೇ ಸಂದರ್ಭದಲ್ಲಿಯೂ ನಿರ್ಲಕ್ಷಿಸಿಬಾರದು, ಯೋಜನೆ ಇಂತಹ ಆರೋಗ್ಯ ಶಿಬಿರಗಳನ್ನು ಆಗಾಗ ನಡೆಸುತ್ತಿದೆ ಎಂದು ತಿಳಿಸಿದರು.
ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ ವಿಟ್ಲ ರೋಟರಿ ಕ್ಲಬ್ ಅಧ್ಯಕ್ಷ ಜಯರಾಮ ರೈ, ವಿಟ್ಲ ಪ.ಪೂ. ಕಾಲೇಜು ಪ್ರಿನ್ಸಿಪಾಲ್ ಆದರ್ಶ ಚೊಕ್ಕಾಡಿ, ದೇರಳಕಟ್ಟೆ ಕೆ.ಎಸ್. ಹೆಗ್ಡೆ ಆಸ್ಪತ್ರೆಯ ವೈದ್ಯ ಡಾ.ಪ್ರವೀಣ್ ಕುಮಾರ್ ಭಟ್, ವಿಟ್ಲ ಜೆಸಿಐಯ ನಿಕಟಪೂರ್ವ ಅಧ್ಯಕ್ಷ ಬಾಲಕೃಷ್ಣ, ವಿಟ್ಲ ಯುವಕ ಮಂಡಲದ ಅಧ್ಯಕ್ಷ ಸದಾನಂದ ಸೇರಾಜೆ ಭಾಗವಹಿಸಿದ್ದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿಟ್ಲ ವಲಯ ಪ್ರಗತಿಬಂಧು-ಸ್ವಸಹಾಯ ಸಂಘಗಳ ಒಕ್ಕೂಟದ ಅಧ್ಯಕ್ಷ ಜನಾರ್ದನ ಪದ್ಮಶಾಲಿ ವಹಿಸಿದ್ದರು.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ವಿಟ್ಲ ತಾಲೂಕು, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ವಿಟ್ಲ ವಲಯ, ವಿಟ್ಲ ಲಯನ್ಸ್ ಕ್ಲಬ್, ವಿಟ್ಲ ರೋಟರಿ ಕ್ಲಬ್, ವಿಟ್ಲ ಜೆಸಿಐ, ಪ್ರಶಸ್ತಿ ವಿಜೇತ ಯುವಕ ಮಂಡಲ ವಿಟ್ಲ ಆಶ್ರಯದಲ್ಲಿ ದೇರಳಕಟ್ಟೆ ಕೆ.ಎಸ್.ಹೆಗ್ಡೆ ಆಸ್ಪತ್ರೆಯ ಸಹಯೋಗದಲ್ಲಿ ನಡೆದ ಶಿಬಿರದಲ್ಲಿ ೧೫೦ ಮಂದಿ ನೋಂದಾಯಿಸಿ ನಾನಾ ವಿಭಾಗಗಳಲ್ಲಿ ತಪಾಸಣೆಗೊಳಪಟ್ಟರು.
ಯೋಜನೆಯ ವಿಟ್ಲ ’ಬಿ’ ಒಕ್ಕೂಟದ ಸೇವಾ ಪ್ರತಿನಿಧಿ ಸರಿತಾ ಸ್ವಾಗತಿಸಿದರು. ಉಕ್ಕುಡ ಕಾರ್ಯಕ್ಷೇತ್ರದ ಸೇವಾಪ್ರತಿನಿಧಿ ಹೇಮಲತಾ ವಂದಿಸಿದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ವಿಟ್ಲ ವಲಯದ ಮೇಲ್ವೀಚಾರಕ ರಮೇಶ್.ಎಸ್. ಕಾರ್ಯಕ್ರಮ ನಿರೂಪಿಸಿದರು.

 

 

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here