Tuesday, April 16, 2024

ಕಲಾ ಅಂತರ್ಗತ ಪ್ರಯೋಗದ ಕಲಾಬರಹ ಕಲಾಪತ್ರಿಕೆ   ಬಹುಮುಖಿ ಬಿಡುಗಡೆ

ಬಂಟ್ವಾಳ : ನಿರಂತರ ಓದು ಬರವಣಿಗೆಗೆ ಸ್ಪೂರ್ತಿ ನೀಡುತ್ತದೆ, ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಪಠ್ಯದ ಜೊತೆಗೆ ಇತರ ಮೌಲ್ಯಯುತ ಬರಹಗಳನ್ನು‌ ಓದುವ ಹವ್ಯಾಸ ಬೆಳೆಸಿಕೊಳ್ಳಬೇಕು ಎಂದು ಕವಿಯತ್ರಿ, ಲೇಖಕಿ ಅಕ್ಷತಾರಾಜ್ ಪೆರ್ಲ ಹೇಳಿದರು.  ಇಂಡಿಯಾ ಫೌಂಡೇಶನ್ ಫಾರ್ ದಿ ಆರ್ಟ್ಸ್ ಬೆಂಗಳೂರು, ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ರಾಜ್ಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಇಲಾಖೆ ಬೆಂಗಳೂರು  ಇದರ ಆಶ್ರಯದಲ್ಲಿ ಕಲ್ಲಡ್ಕ ಮಾದರಿ ಹಿ.ಪ್ರಾ.ಶಾಲೆಯಲ್ಲಿ ನಡೆಯುತ್ತಿರುವ ಕಲಿಕಲಿಸು  ಕಲಾ ಅಂತರ್ಗತ ಪ್ರಯೋಗದ ಕಲಾಬರಹ ಕಲಾಪತ್ರಿಕೆ   ಬಹುಮುಖಿ ಯನ್ನು ಬಿಡುಗಡೆಗೊಳಿಸಿ ಮಾತನಾಡಿದರು.

  ಶಾಲೆಗಳಲ್ಲಿ ದೊರಕುವ ಅವಕಾಶಗಳೇ ನಮ್ಮನ್ನು ಎತ್ತರಕ್ಕೆ ಬೆಳೆಸಬಲ್ಲುದು ಎಂದ ಅವರು ತಮ್ಮ‌ಬಾಲ್ಯದ ಶಾಲೆಯ ದಿನಗಳನ್ನು ಸ್ಮರಿಸಿಕೊಂಡರು. ಕತೆ,ಕವನ, ನಾಟಕದ ಬರವಣಿಗೆಯ ಜೊತೆಗೆ ಕಲೆಗಳನ್ನು‌ ವಿಮರ್ಶೆ ಮಾಡುವ ಚಟುವಟಿಕೆಗಳು ಯೋಚನಾ ಲಹರಿಯನ್ನು ವಿಸ್ತಾರಗೊಳಿಸುತ್ತದೆ, ಇಂತಹಾ ಚಟುವಟಿಕೆ ಕಲ್ಲಡ್ಕ ಶಾಲೆಯಲ್ಲಿ ನಡೆಯುತ್ತಿರುವುದು ಅಭಿಮಾನದ ಸಂಗತಿ ಎಂದರು. ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ರಾಜೇಶ್ ಕೊಟ್ಟಾರಿ ಅಧ್ಯಕ್ಷತೆ ವಹಿಸಿದ್ದರು. ಅವರು ಮಾತನಾಡಿ , ನಮ್ಮ ಶಾಲೆ ಶತಮಾನೋತ್ತರ ಬೆಳ್ಳಿಹಬ್ಬದ ಸಂಭ್ರಮದಲ್ಲಿರುವ ವರ್ಷದಲ್ಲೇ ಸೃಜನಶೀಲತೆಯನ್ನು ಹೆಚ್ಚಿಸುವ ಐಎಫ್ ಎ ಚಟುವಟಿಕೆಗಳು ನಡೆಯುತ್ತಿರುವುದು ಖುಷಿ ತಂದಿದೆ ಎಂದರು.    ಬಂಟ್ವಾಳ ರೋಟರಿ ಕ್ಲಬ್ ಪೂರ್ವಾಧ್ಯಕ್ಷ ಮಂಜುನಾಥ ಆಚಾರ್ಯ ರು ಮಾತನಾಡಿ, ಯಾವುದೇ ಚಟುವಟಿಕೆಗಳಲ್ಲಿ ಕ್ರಿಯಾಶೀಲವಾಗಿ ತೊಡಗಿಸಿಕೊಂಡಾಗ ಅದರಲ್ಲಿ ಯಶಸ್ಸು ಕಾಣುತ್ತೇವೆ. ಸುಂದರವಾಗಿ ಮೂಡಿಬಂದಿರುವ ಬಹುಮುಖಿ ಪತ್ರಿಕೆಯ ಮಕ್ಕಳ ಬರಹಗಳೇ ಇದಕ್ಕೆ ಸಾಕ್ಷಿ ಎಂದರು. ಪತ್ರಕರ್ತ ಕಿರಣ್ ಸರಪಾಡಿ ಮಾತನಾಡಿ, ಸರ್ಕಾರಿ ಪ್ರಾಥಮಿಕ ಶಾಲೆಯ ಮಕ್ಕಳು ಅತ್ಯುತ್ತಮ ಬರಹಗಳನ್ನು ಬರೆಯಬಲ್ಲರು ಎಂಬುದನ್ನು  ಕಲ್ಲಡ್ಕ ಶಾಲೆಯ ಮಕ್ಕಳು ಸಾಬೀತು ಪಡಿಸಿದ್ದಾರೆ, ಪತ್ರಿಕೋದ್ಯಮದ ತರಬೇತಿ ಪಡೆದ ವಿದ್ಯಾರ್ಥಿಗಳ ಬರಹಗಳ ಸಾಲಿಗೆ ಸೇರುವಷ್ಟು ಉತ್ತಮ ಬರಹ ಇದಾಗಿದೆ ಎಂದವರು ಮೆಚ್ಚುಗೆ ವ್ಯಕ್ತಪಡಿಸಿದರು. ಬಂಟ್ವಾಳ ಪ್ರೆಸ್ ಕ್ಲಬ್ ಅಧ್ಯಕ್ಷ ಪ್ರಶಾಂತ ಪೂಂಜಾಲಕಟ್ಟೆ,  ಶಾಲಾಭಿವೃದ್ಧಿ ಸಮಿತಿ ಉಪಾಧ್ಯಕ್ಷೆ ಜಯಶ್ರೀ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಐಎಫ್ಎ ಗ್ರ್ಯಾಂಟಿ ಮೌನೇಶ ವಿಶ್ವಕರ್ಮ ಪ್ರಸ್ತಾವನೆಯೊಂದಿಗೆ ಸ್ವಾಗತಿಸಿದರು. ಬಹುಮುಖಿ ಬಳಗದ  ವಿದ್ಯಾರ್ಥಿಗಳಾದ ಈಶನ್, ನತನ್ಯ,ದೀಕ್ಷಿತ್ ಅನಿಸಿಕೆ ವ್ಯಕ್ತಪಡಿಸಿದರು.  ಶಾಲಾ ಮುಖ್ಯಶಿಕ್ಷಕ ಅಬೂಬಕರ್ ಅಶ್ರಫ್ ವಂದಿಸಿದರು. ಮಾರ್ಗದರ್ಶಿ ಶಿಕ್ಷಕಿ ಸೌಮ್ಯ ಎ ಕಾರ್ಯಕ್ರಮ ನಿರೂಪಿಸಿದರು.ಶಾಲಾ ಶಿಕ್ಷಕವೃಂದ ಸಹಕರಿಸಿತು.

More from the blog

ಅಪಘಾತ ವಿಚಾರದಲ್ಲಿ ಗಂಡ ಹೆಂಡತಿಗೆ ನಾಲ್ವರು ಹಲ್ಲೆ : ಬಜರಂಗದಳ, ವಿ.ಹಿಂ.ಪರಿಷತ್ ಕಲ್ಲಡ್ಕ ಪ್ರಖಂಡದಿಂದ ಖಂಡನೆ

ಬಂಟ್ವಾಳ: ಅಪಘಾತ ವಿಚಾರದಲ್ಲಿ ಗಂಡ ಹೆಂಡತಿಗೆ ನಾಲ್ವರು ಹಲ್ಲೆ ನಡೆಸಿದ ಘಟನೆ ಕಲ್ಲಡ್ಕದ ಕರಿಂಗಾನ ಕ್ರಾಸ್ ಎಂಬಲ್ಲಿ ಸಂಜೆ ವೇಳೆ ನಡೆದಿದೆ. ಪುತ್ತೂರು ಏರ್ಮುಂಜ ಪಲ್ಲ ನಿವಾಸಿಗಳಾದ ಮಂಜುನಾಥ್ ಮತ್ತು ಅವರ ಪತ್ನಿ ಪೂರ್ಣಿಮಾ...

ಪುಣಚ ವಲಯ ಕಾಂಗ್ರೆಸ್ ಸಮಿತಿ ಕಾರ್ಯಕರ್ತರ ಸಭೆ

ವಿಟ್ಲ - ಪುಣಚ ವಲಯ ಕಾಂಗ್ರೆಸ್ ಸಮಿತಿ ಕಾರ್ಯಕರ್ತರ ಸಭೆ ನೀರುಮಜಲು ಬ್ರಹ್ಮ ಬೈದರ್ಕಳ ಗರಡಿ ಕ್ಷೇತ್ರದ ವಠಾರದಲ್ಲಿ ನಡೆಯಿತು. ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಮಾತನಾಡಿ ಕಳೆದ...

ಕೆನರಾ ರೊಬೆಕೋ ಸಂಸ್ಥೆಯಿಂದ ಕೊಯಿಲ ಶಾಲಾ ವಿದ್ಯಾರ್ಥಿಗಳಿಗೆ ಬೈಸಿಕಲ್ ಕೊಡುಗೆ

ಬಂಟ್ವಾಳ: ತಾಲೂಕಿನ ಕೊಯಿಲ ಸರ್ಕಾರಿ ಪ್ರೌಢಶಾಲೆ ಇಲ್ಲಿನ ವಿದ್ಯಾರ್ಥಿಗಳಿಗೆ ಕೆನರಾ ರೊಬೆಕೋ ಸಂಸ್ಥೆಯ ವತಿಯಿಂದ 45 ಬೈಸಿಕಲ್ ಗಳನ್ನು ವಿತರಿಸಲಾಯಿತು. ಕೆನರಾ ರೊಬೆಕೋ ಸಂಸ್ಥೆಯ ಮಂಗಳೂರು ವಿಭಾಗದ ವ್ಯವಸ್ಥಾಪಕರಾದ ಮುರಳೀಧರ ಶೆಣೈ, ಅಧಿಕಾರಿ ರಾಜೇಶ್...

ಹಿಂದುಳಿದ ವರ್ಗದ ಶ್ರೇಯೋಭಿವೃದ್ಧಿಗಾಗಿ ಕೆಲಸ- ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ

ಸುರತ್ಕಲ್: ರಾಜಕೀಯವಾಗಿ ಸಿಕ್ಕ ಅವಕಾಶವನ್ನು ಸಾಮಾಜಿಕ ಶ್ರೇಯೋಭಿವೃದ್ಧಿಗೆ ಬಳಸಿಕೊಳ್ಳಲಾಗುವುದು ಎಂದು ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್ ಪೂಜಾರಿ ಹೇಳಿದರು. ಪಣಂಬೂರು ಸುಂದರಿ ಲಕ್ಷ್ಮಣ್ ಬಂಗೇರ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದರು. ...