ಬಂಟ್ವಾಳ: ಶ್ರೀರಾಮ ಪದವಿ ಕಾಲೇಜು ಇದರ ಪ್ರದೀಪ್ತ ಸಾಂಸ್ಕೃತಿಕ ಸಂಘದ ವತಿಯಿಂದ ಪ್ರಥಮ ವರ್ಷದ ಪದವಿ ವಿದ್ಯಾರ್ಥಿಗಳ ಪ್ರಕೃತಿ ಎಂಬ ವಿಷಯದ ಕುರಿತು ಸಾಂಸ್ಕೃತಿಕ ಕಾರ್ಯಕ್ರಮವು ಅಜಿತ ಕುಮಾರ ಸಭಾಭವನದಲ್ಲಿ ನಡೆಯಿತು.
ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಕನ್ನಡಪ್ರಭ ಪತ್ರಿಕೆಯ ವರದಿಗಾರ ಮೌನೇಶ್ ವಿಶ್ವಕರ್ಮ ಅವರು ಆಗಮಿಸಿ ವಿದ್ಯಾರ್ಥಿಗಳ ಪ್ರತಿಭೆಗೆ ಪ್ರೋತ್ಸಾಹಿಸಿದರು.
ಕಾರ್ಯಕ್ರಮದಲ್ಲಿ ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ ಭಟ್ ಕಲ್ಲಡ್ಕ, ಹಿರಿಯರಾದ ಕಮಲಾ ಪ್ರಭಾಕರ ಭಟ್, ಪ್ರಾಂಶುಪಾಲ ಕೃಷ್ಣಪ್ರಸಾದ ಕಾಯರ್‌ಕಟ್ಟೆ ಉಪಸ್ಥಿತರಿದ್ದರು.


ವಿದ್ಯಾರ್ಥಿಗಳು ನೃತ್ಯ, ನಾಟಕ, ಗೀತೆ, ಮೂಕಾಭಿನಯ, ಮಿಮಿಕ್ರಿ, ಯಕ್ಷಗಾನ, ಭರತನಾಟ್ಯ, ಶ್ಯಾಡೋ ಪ್ಲೇಗಳ ಮೂಲಕ ಪ್ರಕೃತಿಯ ಉಳಿವಿನ ಜಾಗೃತಿಯನ್ನು ಮೂಡಿಸಿದರು. ವಿದ್ಯಾರ್ಥಿಗಳಾದ ಹರ್ಷಿತಾ ಪ್ರಥಮ ಬಿಕಾಂ ಸ್ವಾಗತಿಸಿ, ನಿರೂಪಿಸಿ, ಹಿತೇಶ್ ವಂದಿಸಿದರು.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here