Thursday, April 11, 2024

ಕಲ್ಲಡ್ಕ ಶ್ರೀರಾಮ ಪದವಿಪೂರ್ವ ವಿದ್ಯಾಲಯ: ಪ್ರತಿಭಾ ಪುರಸ್ಕಾರ

ಕಲ್ಲಡ್ಕ: ಜೀವನ ಶಿಕ್ಷಣವನ್ನು ಕಲಿಸುವ ಶಿಕ್ಷಣ ಸಂಸ್ಥೆ ಸಮಾಜಕ್ಕೆ ಅವಶ್ಯಕ. ಶಿಕ್ಷಣದ ಜೊತೆಗೆ ಪಠ್ಯೇತರ ಚಟುವಟಿಕೆಗಳಿಗೆ ಒತ್ತು ನೀಡುತ್ತಾ, ಸಂಸ್ಕಾರಯುತ ಸಮಾಜಕ್ಕಾಗಿ ಸಂಸ್ಕಾರಯುತ ಶಿಕ್ಷಣವನ್ನು ನೀಡುವ ಸಂಸ್ಕೃತಿಯನ್ನು ಶ್ರೀರಾಮ ವಿದ್ಯಾಸಂಸ್ಥೆಗಳು ಅಳವಡಿಸಿಕೊಂಡಿದೆ ಎಂದು ಉಡುಪಿ ಜಿಲ್ಲೆಯ ನಿವೃತ ದೈಹಿಕ ಶಿಕ್ಷಣ ಅಧಿಕಾರಿ ಶ್ರೀ ಸೀತಾನದಿ ವಿಠಲ ಶೆಟ್ಟಿ ಹೇಳಿದರು.
ಅವರು ಕಲ್ಲಡ್ಕದ ಶ್ರೀರಾಮ ಪದವಿಪೂರ್ವ ವಿದ್ಯಾಲಯದ 2019-20ನೇ ಸಾಲಿನ ಪ್ರತಿಭಾ ಪುರಸ್ಕಾರ ಕಾರ್‍ಯಕ್ರಮದಲ್ಲಿ ಮಾತನಾಡಿದರು.
ಶ್ರೀರಾಮ ವಿದ್ಯಾಕೇಂದ್ರದ ಸಂಚಾಲಕ ವಸಂತ ಮಾಧವ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಪುತ್ತೂರಿನ ನ್ಯಾಯವಾದಿ ವಿಜಯಾನಂದ, ವಿದ್ಯಾಕೇಂದ್ರದ ಸಹಸಂಚಾಲಕ ರಮೇಶ್, ಆಡಳಿತ ಮಂಡಳಿ ಸದಸ್ಯರಾದ ನಾಗೇಶ್ ಹಾಗೂ ಮಲ್ಲಿಕಾ ಶೆಟ್ಟಿ ಮತ್ತು ಶಿಕ್ಷಕ-ರಕ್ಷಕ ಸಂಘದ ಕಾರ್ಯದರ್ಶಿ ಹರಣಿ ಉಪಸ್ಥಿತರಿದ್ದರು.
ಶೈಕ್ಷಣಿಕ, ವಿಜ್ಞಾನ, ಸಂಸ್ಕೃತ, ಕ್ರೀಡೆ ಹಾಗೂ ಸಾಂಸ್ಕೃತಿಕ ವಿಭಾಗಗಳಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಪುರಸ್ಕರಿಸಲಾಯಿತು. ಪುರಸ್ಕರಿಸಿದ ವಿದ್ಯಾರ್ಥಿಗಳ ಪಟ್ಟಿಯನ್ನು ಉಪನ್ಯಾಸಕರು ವಾಚಿಸಿದರು.
ಕಾಲೇಜಿನ ಪ್ರಾಂಶುಪಾಲ ವಸಂತ ಬಲ್ಲಾಳ್ ಸ್ವಾಗತಿಸಿ, ಇತಿಹಾಸ ಉಪನ್ಯಾಸಕ ತಿರುಮಲೇಶ್ವರ ಪ್ರಶಾಂತ್ ವಂದಿಸಿದರು. ಗಣಿತಶಾಸ್ತ್ರ ಉಪನ್ಯಾಕಿ ಜಯಲಕ್ಷ್ಮೀ ಕೆ. ಕಾರ್ಯಕ್ರಮ ನಿರೂಪಿಸಿದರು.

More from the blog

ಲೋಕಸಭಾ ಚುನಾವಣೆಯ ಹಿನ್ನೆಲೆ : ಚಾರ್ಮಾಡಿಯ ಮೂವರು ಗಡಿಪಾರು

ಬೆಳ್ತಂಗಡಿ: ಚುನಾವಣ ಸಂದರ್ಭದಲ್ಲಿ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವ ಹಾಗೂ ಕೋಮು ಗಲಭೆಗಳಲ್ಲಿ ಭಾಗವಹಿಸುವ ಸಾಧ್ಯತೆ ಇರುವ ಕಾರಣ ಮೂವರು ರೌಡಿಶೀಟರ್‌ಗಳನ್ನು ಧರ್ಮಸ್ಥಳ ಪೊಲೀಸರು ಗಡಿಪಾರು ಮಾಡಿದ್ದಾರೆ. ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಗ್ರಾಮದ ನಿವಾಸಿಗಳಾದ...

ಹಿತೈಷಿ ತರಬೇತಿ ಕೇಂದ್ರದ ಎಲ್ಲಾ ವಿದ್ಯಾರ್ಥಿಗಳು ಉತ್ತಮ ಫಲಿತಾಂಶದೊಂದಿಗೆ ತೇರ್ಗಡೆ

2023-24ನೇ ಸಾಲಿನ ದ್ವಿತೀಯ ಪಿ.ಯು.ಸಿ ಪರೀಕ್ಷೆಯಲ್ಲಿ ಪಾಣೆಮಂಗಳೂರು, ನರಿಕೊಂಬುವಿನಲ್ಲಿರುವ ಹಿತೈಷಿ ತರಬೇತಿ ಕೇಂದ್ರದ ಎಲ್ಲಾ ವಿದ್ಯಾರ್ಥಿಗಳು ಉತ್ತಮ ಅಂಕಗಳೊಂದಿಗೆ ತೇರ್ಗಡೆಯಾಗಿದ್ದಾರೆ. ಕು.ಕೀರ್ತನ ಶೇ.95.6% ಅಂಕಗಳೊಂದಿಗೆ ಅತ್ಯುತ್ತಮ ಶ್ರೇಣಿಯಲ್ಲಿ ತೇರ್ಗಡೆಯಾಗಿರುತ್ತಾರೆ ಎಂದು ಸಂಸ್ಥೆಯ ಪ್ರಕಟನೆಯಲ್ಲಿ ತಿಳಿಸಲಾಗಿದೆ. 2024-25ನೇ...

ಬಂಟ್ವಾಳದ ಉಳಿ ಗ್ರಾಮದಲ್ಲಿ ಮತದಾರರ ಮನೆಗೆ ಭೇಟಿ ನೀಡಿ ಮತಯಾಚನೆ ನಡೆಸಿದ ಶಾಸಕ ರಾಜೇಶ್ ನಾಯ್ಕ್

ಲೋಕ ಸಭಾ ಚುನಾವಣೆಯ ಹಿನ್ನಲೆಯಲ್ಲಿ ಕ್ಯಾ.ಬ್ರಿಜೇಶ್ ಚೌಟ ಅವರ ಗೆಲುವಿಗಾಗಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರ ಗ್ರಾಮ,ಮನೆ,ಮನ ಅಭಿಯಾನದ ಅಂಗವಾಗಿ ಬಂಟ್ವಾಳದ ಉಳಿ ಗ್ರಾಮದಲ್ಲಿ ಮತದಾರರ ಮನೆಗೆ ಬೇಟಿ ನೀಡಿ...

ವಿಟ್ಲ ಕೇಂದ್ರ ಜುಮಾ ಮಸೀದಿ, ಈದುಲ್ ಫಿತರ್

ವಿಟ್ಲ; ವಿಟ್ಲ ಕೇಂದ್ರ ಜುಮಾ ಮಸೀದಿಯಲ್ಲಿ ಈದುಲ್ ಫಿತರ್ ನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಖತೀಬ್ ಮಹಮ್ಮದ್ ನಸೀಹ್ ದಾರಿಮಿ ಉಸ್ತಾದ್ ರವರು ಖುತುಬಾ ಹಾಗೂ ಈದ್ ನಮಾಝ್ ನಿರ್ವಹಿಸಿದರು. ಈದ್ ಸಂಸೇಶ ನೀಡಿದ ಖತೀಬರು "...