ಬಂಟ್ವಾಳ: ಕಾವಳಪಡೂರು ವಗ್ಗ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಪ್ರೌಢಶಾಲಾ ವಿಭಾಗದಲ್ಲಿ ವಿಶ್ವಮಾನವ ದಿನಾಚರಣಾ ಕಾರ್ಯಕ್ರಮ ಜರಗಿತು.
ಇತ್ತೀಚಿನ ದಿನಗಳಲ್ಲಿ ಕುವೆಂಪು ತತ್ವಗಳು ಎಷ್ಟು ಪ್ರಸ್ತುತ ಎಂಬ ಬಗ್ಗೆ ವಿದ್ಯಾರ್ಥಿಗಳಿಗೆ ತಿಳಿ ಹೇಳಲಾಯಿತು. ಕುವೆಂಪು ಅವರ ವಿಶ್ವಮಾನವ ಪರಿಕಲ್ಪನೆಯ ಬಗ್ಗೆ ವಿದ್ಯಾರ್ಥಿಗಳು ಕೂಡ ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿದರು. ವಿದ್ಯಾರ್ಥಿಗಳಿಗೆ ಕುವೆಂಪು ತತ್ವಗಳ ಬಗ್ಗೆ ಭಾಷಣ ಸ್ಪರ್ಧೆ ಏರ್ಪಡಿಸಲಾಗಿತ್ತು. ಮುಖ್ಯ ಶಿಕ್ಷಕ ಶೇಕ್ ಆದಂ ಸಾಹೇಬ್ ನೆಲ್ಯಾಡಿ ಹಾಗೂ ಶಿಕ್ಷಕರು ಉಪಸ್ಥಿತರಿದ್ದರು.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here