ಬಂಟ್ವಾಳ: ಬಂಟ್ವಾಳ ತಾಲೂಕು ಕಾವಳಮೂಡೂರು ಸರಕಾರಿ ಪ್ರೌಢಶಾಲೆ ಮತ್ತು ಕಾವಳಮೂಡೂರು ಸರಕಾರಿ ಪ್ರಾಥಮಿಕ ಶಾಲೆ ಇವರ ಸಂಯುಕ್ತ ಆಶ್ರಯದಲ್ಲಿ ಶಾಲಾ ವಾರ್ಷಿಕೋತ್ಸವ ಚಿಣ್ಣರ ಕಲರವ-2019 ಕಾರ್ಯಕ್ರಮ ಜರಗಿತು.
ಮಾಜಿ ಸಚಿವ ಬಿ. ರಮಾನಾಥ ರೈ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಪೋಷಕರು, ಶಿಕ್ಷಕರು ಮಕ್ಕಳಲ್ಲಿರುವ ಪ್ರತಿಭೆಯನ್ನು ಗುರುತಿಸಿ ಅವರಿಗೆ ಅವಕಾಶ ನೀಡಿ ಪ್ರೋತ್ಸಾಹಿಸಬೇಕು. ಮಕ್ಕಳ ಆಸಕ್ತಿಯನ್ನು ಗಮನಿಸಿ ಮಕ್ಕಳ ಸರ್ವಾಂಗೀಣ ವಿಕಸನಕ್ಕೆ ವೇದಿಕೆ ಕಲ್ಪಿಸಬೇಕು ಎಂದು ಹೇಳಿದರು.
ತಾ.ಪಂ. ಅಧ್ಯಕ್ಷ ಚಂದ್ರಹಾಸ ಕರ್ಕೇರ ಅವರು ಅಧ್ಯಕ್ಷತೆ ವಹಿಸಿ ಶುಭ ಹಾರೈಸಿದರು. ಜಿ.ಪಂ. ಸದಸ್ಯ ಬಿ.ಪದ್ಮಶೇಖರ್ ಜೈನ್, ತಾ.ಪಂ. ಉಪಾಧ್ಯಕ್ಷ ಅಬ್ಬಾಸ್ ಆಲಿ, ಸದಸ್ಯೆ ಧನಲಕ್ಷ್ಮೀ ಸಿ. ಬಂಗೇರ, ಗ್ರಾಮ ಪಂಚಾಯತ್ ಅಧ್ಯಕ್ಷ ಸಂತೋಷ್ ಕುಮಾರ್, ಸದಸ್ಯರಾದ ಇಸ್ಮಾಯಿಲ್ ಸಿದ್ದಿಕ್, ಸತೀಶ್ ಕುಮಾರ್ ಪಡಂತ್ರಬೆಟ್ಟು , ಅಬ್ದುಲ್ ನಜೀರ್ ಕಾವಳಕಟ್ಟೆ, ಚಂಪಾ, ಪೂವಕ್ಕ, ರಾಷ್ಟ್ರಪ್ರಶಸ್ತಿ ಪುರಸ್ಕೃತ ಶಿಕ್ಷಕ ರಮೇಶ್ ನಾಯಕ್ ರಾಯಿ, ಬಂಟ್ವಾಳ ತಾಲೂಕು ಅಮೆಚೂರು ಕಬಡ್ಡಿ ಅಸೋಸಿಯೇಶನ್ ಅಧ್ಯಕ್ಷ ಬೇಬಿ ಕುಂದರ್, ಮೂಡೂರು ಫ್ರೆಂಡ್ಸ್ ಅಧ್ಯಕ್ಷ ಪ್ರಮೋದ್ ಕುಮಾರ್, ಗ್ರಾ.ಪಂ. ಮಾಜಿ ಅಧ್ಯಕ್ಷ ಬಾಲಕೃಷ್ಣ ಅಂಚನ್, ಪ್ರೌಢಶಾಲಾ ಮುಖ್ಯಶಿಕ್ಷಕಿ ಪುಷ್ಪಲತಾ, ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕಿ ಪ್ರೇಮಾ ಕೆ.ಕೆ., ಶಾಲಾಭಿವೃದ್ಧಿ ಸಮಿತಿ ಮಾಜಿ ಅಧ್ಯಕ್ಷ ವಸಂತ ಶೆಟ್ಟಿ, ಶಾಲಾ ಶಿಕ್ಷಕ ವೃಂದ, ಶಾಲಾಭಿವೃದ್ಧಿ ಸಮಿತಿ ಸದಸ್ಯರು ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ವರ್ಗಾವಣೆಗೊಂಡ ಪ್ರೌಢಶಾಲಾ ಶಿಕ್ಷಕಿಯರನ್ನು ಸಮ್ಮಾನಿಸಲಾಯಿತು. ರಾಷ್ಟ್ರಮಟ್ಟದ ಮಾಸ್ಟರ್ ಅಥ್ಲೆಟಿಕ್ಸ್ ನಲ್ಲಿ ಭಾಗವಹಿಸುವ ಶಿಕ್ಷಕಿ ಕ್ಯಾರೆಲ್ ರೊಜಾರಿಯೋ ಅವರನ್ನು ಮತ್ತು 2018ನೇ ಸಾಲಿನ ಎಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು. ವಿವಿಧ ಸ್ಪರ್ಧೆಗಳಲ್ಲಿ ಬಹುಮಾನ ಪಡೆದ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.
ಪ್ರಾಥಮಿಕ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಸದಾನಂದ ಶೆಟ್ಟಿ ಸ್ವಾಗತಿಸಿದರು. ದೈಹಿಕ ಶಿಕ್ಷಣ ಶಿಕ್ಷಕ ಜಯರಾಮ್ ಕಾರ್ಯಕ್ರಮ ನಿರೂಪಿಸಿದರು. ಪ್ರೇಮಾ ಕೆ.ಕೆ. ವಂದಿಸಿದರು. ಬಳಿಕ ವಿದ್ಯಾರ್ಥಿಗಳು ಸಾಂಸ್ಕೃತಿಕ ಕಾರ್ಯಕ್ರಮ ಪ್ರದರ್ಶಿಸಿದರು.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here