Saturday, April 6, 2024

ಕೇಪು: ಪ್ರತಿಭಾ ಪುರಸ್ಕಾರ

ವಿಟ್ಲ: ಕೇಪು ಕುದ್ದುಪದವು ಉದಯಗಿರಿ ಸ.ಹಿ.ಪ್ರಾ. ಶಾಲೆಯಲ್ಲಿ ಮಕ್ಕಳ ಪ್ರತಿಭಾ ಪುರಸ್ಕಾರ ಮತ್ತು ವರ್ಗಾವಣೆಗೊಂಡ ಶಿಕ್ಷಕಿಯ ಬೀಳ್ಕೊಡುಗೆ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೇಪು ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಯಶಸ್ವಿನಿ ಶಾಸ್ತ್ರಿ ನೆಕ್ಕರೆ ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ಜಿ.ಪಂ.ಸದಸ್ಯೆ ಜಯಶ್ರೀ ಕೋಡಂದೂರು ಭಾಗವಹಿಸಿ ಶಾಲಾಭಿವೃದ್ಧಿಗೆ ಇನ್ನೂ ಹೆಚ್ಚಿನ ಅನುದಾನವನ್ನು ಒದಗಿಸಿ ಕೊಡುವ ಭರವಸೆ ನೀಡಿದರು.
ಕೇಪು ಪಂಚಾಯತ್ ಮಾಜಿ ಉಪಾಧ್ಯಕ್ಷ ರಾಧಾಕೃಷ್ಣ ಶೆಟ್ಟಿ ಚೆಲ್ಲಡ್ಕ, ಪಂಚಾಯತ್ ಸದಸ್ಯರಾದ ಅಬ್ದುಲ್ ಕರೀಮ್, ಪುಷ್ಪಾಕರ ರೈ ಭಾಗವಹಿಸಿದ್ದರು. ಎಸ್.ಡಿ.ಎಂ.ಸಿ. ಅಧ್ಯಕ್ಷ ಪುಟ್ಟಣ್ಣ ನಾಯ್ಕ ಹಾಗೂ ಮಹಾಲಿಂಗ ಪಾಟಾಳಿ, ಗೋವಿಂದ ನಾಯ್ಕ ನೆಗಳಗುಳಿ, ಶರೀಫ್ ಮೂಸ ಕುದ್ದುಪದವು ಉಪಸ್ಥಿತರಿದ್ದರು.
ಇದೇ ಸಂದರ್ಭದಲ್ಲಿ ಶಾಲೆಯಿಂದ ವರ್ಗಾವಣೆಗೊಂಡ ಶಿಕ್ಷಕಿ ಆರತಿಯವರನ್ನು ಸನ್ಮಾನಿಸಲಾಯಿತು. ಅವರು ಶಾಲೆಗೆ ಕೊಡುಗೆಯಾಗಿ ನೀಡಿದ ಧ್ವನಿವರ್ಧಕವನ್ನು ಶಾಲೆಗೆ ಹಸ್ತಾಂತರಿಸಲಾಯಿತು .
ಮುಖ್ಯ ಶಿಕ್ಷಕಿ ರೇವತಿ ಬಿ.ಸ್ವಾಗತಿಸಿ,ವರದಿ ವಾಚಿಸಿದರು. ವಿಠಲ ಜಿ. ವಂದಿಸಿದರು. ಯತೀಶ್ ಪಿ. ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಕಿ ಪ್ರೇಮ.ಬಿ.ಎಸ್ ಮತ್ತು ಅನ್ನಪೂರ್ಣ ಸಹಕರಿಸಿದರು.

More from the blog

ನೀತಿ ಸಂಹಿತೆ ಉಲ್ಲಂಘನೆ : ಕೋಟಾ ಶ್ರೀನಿವಾಸ್‌ ಪೂಜಾರಿಗೆ ಕೋರ್ಟ್‌ ಸಮನ್ಸ್‌

ಬೆಂಗಳೂರು: ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ್‌ ಪೂಜಾರಿ ಅವರಿಗೆ ಕೋರ್ಟ್‌ ಸಮನ್ಸ್‌ ಜಾರಿ ಮಾಡಿದೆ. ಕೋಟಾ ಶ್ರೀನಿವಾಸ ಪೂಜಾರಿ, ಗುರ್ಮೆ ಸುರೇಶ್ ಶೆಟ್ಟಿ, ಲಾಲಾಜಿ ಮೆಂಡನ್ ಹಾಗೂ ಶಾಲಾ ಆಡಳಿತ ಮಂಡಳಿಗೆ ಜನಪ್ರತಿನಿಧಿಗಳ ವಿಶೇಷ...

ಸಾವು ಗೆದ್ದು ಬಂದ ಸಾತ್ವಿಕ್ ; ಸತತ 20 ಗಂಟೆಗಳ ಕಾರ್ಯಾಚರಣೆ ಯಶಸ್ವಿ

ವಿಜಯಪುರ: ಕೊಳವೆ ಬಾವಿಗೆ ಬಿದ್ದಿರುವ 2 ವರ್ಷದ ಕಂದ ಸಾತ್ವಿಕ್​​ನನ್ನು ಕೊನೆಗೂ ರಕ್ಷಣಾ ಪಡೆಯ ಸಿಬ್ಬಂದಿ ಹೊರ ತೆಗೆಯುವಲ್ಲಿ ಯಶಸ್ವಿಯಾಗಿದ್ದಾರೆ. ಇಂಡಿಯ ಲಚ್ಯಾನ ಗ್ರಾಮದ ತೋಟದಲ್ಲಿ ಆಟವಾಡುತ್ತಿದ್ದಾಗ ಮಗು ಕೊಳವೆ ಬಾವಿಗೆ ಬಿದ್ದಿತ್ತು. ಈ ಸಂಬಂಧ...

ಕಲ್ಲಡ್ಕ: ಖಾಸಗಿ ಬಸ್ಸಿಗೆ ಪಿಕಪ್ ಢಿಕ್ಕಿ: ಹಲವರಿಗೆ ಗಾಯ

ವಿಟ್ಲ: ವಿಟ್ಲ ಕಲ್ಲಡ್ಕ ರಸ್ತೆಯ ಗೋಳ್ತಮಜಲು ಎಂಬಲ್ಲಿ ಬಸ್ಸಿಗೆ ಪಿಕಪ್ ಮುಖಾಮುಖಿ ಢಿಕ್ಕಿಯಾಗಿ ಹಲವರು ಗಾಯಗೊಂಡಿದ್ದಾರೆ. ವಿಟ್ಲ ಕಡೆಗೆ ಕಾಂಕ್ರೀಟ್ ಮಿಕ್ಸರ್ ಯಂತ್ರವನ್ನು ಒಯ್ಯುತ್ತಿದ್ದ ಪಿಕಪ್ ಆಕಸ್ಮಿಕವಾಗಿ ವಿಟ್ಲದಿಂದ ಮಂಗಳೂರಿಗೆ ಸಾಗುತ್ತಿದ್ದ ಖಾಸಗಿ ಬಸ್ಸಿಗೆ...

ಕೊಳವೆ ಬಾವಿಗೆ ಬಿದ್ದ 2 ವರ್ಷದ ಕಂದಮ್ಮ : ರಕ್ಷಣೆಗೆ ಅರ್ಧ ಅಡಿಯಷ್ಟೇ ಬಾಕಿ

ವಿಜಯಪುರ: ಕೊಳವೆ ಬಾವಿಗೆ ಬಿದ್ದಿರುವ ಮಗು ಸಾತ್ವಿಕ ಸುರಕ್ಷಿತವಾಗಿದ್ದು, ರಕ್ಷಣಾ ಕಾರ್ಯಾಚರಣೆ ಅಂತಿಮ ಹಂತಕ್ಕೆ ಬಂದಿದೆ. ಮಗು ಸುರಕ್ಷಿತವಾಗಿದ್ದು, ಕಾರ್ಯಾಚರಣೆ ಆಶಾದಾಯಕವಾಗಿದೆ. 16 ಅಡಿ ಆಳದಲ್ಲಿರುವ ಸಾತ್ವಿಕ್ ರಕ್ಷಣೆಗಾಗಿ 22 ಅಡಿ ಆಳದವರೆಗೆ ಸುರಂಗ...