Wednesday, April 10, 2024

ಕುಂಭಶ್ರೀ ಪದವಿ ಪೂರ್ವ ಕಾಲೇಜು: ಬೀಳ್ಕೋಡುಗೆ ಸಮಾರಂಭ

ವೇಣೂರು:  ಕುಂಭಶ್ರೀ ಪದವಿ ಪೂರ್ವ ಕಾಲೇಜಿನಲ್ಲಿ ದ್ವಿತೀಯ ಪಿ.ಯು. ವಿದ್ಯಾರ್ಥಿಗಳಿಗೆ ಬೀಳ್ಕೋಡುಗೆ ಸಮಾರಂಭದ ಜರಗಿತು.  ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕುಂಭಶ್ರೀ ವಿದ್ಯಾ ಸಂಸ್ಥೆಯ ಸಂಚಾಲಕ ಗಿರೀಶ್.ಕೆ.ಹೆಚ್. ಅವರು ವಹಿಸಿ, ಮಾತನಾಡಿ, ವಿದ್ಯಾರ್ಥಿಗಳು ಉತ್ತಮ ಅಂಕದ ಜೊತೆ ಸಂಸ್ಕಾರಯುತ ಜೀವನವನ್ನು ನಡೆಸಿ ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಬೇಕೆಂದು ಹೇಳಿದರು.

ಕುಂಭಶ್ರೀ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ರಕ್ಷಿತ್ ಕುಲಾಲ್ ಅವರು ಮಾತನಾಡಿ, ವಿದ್ಯಾರ್ಥಿ ಜೀವನದ ಅನುಭವಗಳನ್ನು ಮರೆಯದೆ ಸ್ವಷ್ಟ ಗುರಿಯನ್ನಿಟ್ಟು ಸಾಧಿಸುವ ಛಲ ಹೊಂದಬೇಕು ಎಂದರು. ಕಾರ್ಯಕ್ರಮದಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ಸಂಸ್ಥೆಯಲ್ಲಿ ಕಳೆದ ತಮ್ಮ ವಿದ್ಯಾರ್ಥಿ ಜೀವನದ ಅನುಭವಗಳನ್ನು ಹಂಚಿಕೊಂಡರು ಪ್ರಥಮ ಪಿಯುಸಿ ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ವಿವಿಧ ಮನೋರಂಜನಾ ಕ್ರೀಡೆಯನ್ನು ಏರ್ಪಡಿಸಿದ್ದರು.
ಕಾರ್ಯಕ್ರಮದಲ್ಲಿ ಕಾಲೇಜು ವಿಭಾಗದ ಎಲ್ಲಾ ಉಪನ್ಯಾಸಕರು ಉಪಸ್ಥಿತರಿದ್ದರು. ಪ್ರಥಮ ಪಿಯುಸಿ ವಿದ್ಯಾರ್ಥಿ ಚಂದನ್ ಎಸ್.ಎಲ್. ಹಾಗೂ ಸುಜಿತ್ ನಿರೂಪಿಸಿ, ಕಾರ್ತಿಕ್ ಸ್ವಾಗತಿಸಿ, ಕೆನಾಲ್ಡಶಾನ್‌ವೇಗಸ್ ವಂದಿಸಿದರು.

More from the blog

ಮನೆಗೆ‌ ನುಗ್ಗಿ ಚೂರಿ ಇರಿದ ಪ್ರಕರಣ : ಆರೋಪಿ ಅರೆಸ್ಟ್

ಬಂಟ್ವಾಳ: ಮನೆಯೊಳಗೆ ‌ನುಗ್ಗಿ ವ್ಯಕ್ತಿಯೋರ್ವನಿಗೆ ಚೂರಿ ಹಾಕಿ ಪರಾರಿಯಾಗಿದ್ದ ಆರೋಪಿಯನ್ನು ಬಂಟ್ವಾಳ ‌ಗ್ರಾಮಾಂತರ ಪೋಲೀಸ್ ಬಂಧಿಸಿ ನ್ಯಾಯಲಯಕ್ಕೆ ಹಾಜರುಪಡಿಸಿದ್ದು,ನ್ಯಾಯಾಲಯ ಈತನಿಗೆ 15 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದೆ. ಅಬ್ದುಲ್ ರಹಿಮಾನ್ ಎಂಬಾತ ಬಂಧಿತ...

ಏ.10ರಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ…. ರಿಸಲ್ಟ್​ ಚೆಕ್ ಮಾಡೋದು ಹೇಗೆ?

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶವನ್ನು ನಾಳೆ ಪ್ರಕಟಿಸಲಾಗುತ್ತಿದೆ. ಎಲ್ಲ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಮುಕ್ತಾಯವಾದ ಹಿನ್ನಲೆ ನಾಳೆ ಫಲಿತಾಂಶ ಪ್ರಕಟಿಸಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಮುಂದಾಗಿದೆ. ನಾಳೆ...

ಬಿಜೆಪಿ ಬಂಟ್ವಾಳ ಮಂಡಲದ ವತಿಯಿಂದ ನಾರಿಶಕ್ತಿ ಮಹಿಳಾ ಸಮಾವೇಶ

ಬಂಟ್ವಾಳ: ನಾರಿ ಶಕ್ತಿ ಸಶಕ್ತರಾಗಬೇಕು ಎಂಬುದು ಮಹತ್ವದ ಕನಸು ಮತ್ತು ಪರಿಕಲ್ಪನೆಯಾಗಿದ್ದು, ರಾಜಕೀಯವಾಗಿ ಮಹಿಳೆಯರನ್ನು ಸಬಲೀಕರಣ ಮಾಡಿದ ಪಕ್ಷ ಬಿಜೆಪಿಯಾಗಿದ್ದು, ಪ್ರಧಾನಿ ನರೇಂದ್ರ ಮೋದಿಯವರು ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಅಧಿಕಾರದ...

ವಿಕಸಿತ ಭಾರತ ಸಂಕಲ್ಪದೊಂದಿಗೆ ಗ್ರಾಮ, ಮನೆ, ಮನ ಅಭಿಯಾನ ಸಂಪರ್ಕಕ್ಕೆ ಶಾಸಕ ರಾಜೇಶ್ ನಾಯ್ಕ್ ಚಾಲನೆ

ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿಯಾಗಬೇಕು, ದ.ಕ.ಜಿಲ್ಲಾ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಪ್ರಚಂಡ ಬಹುಮತದೊಂದಿಗೆ ಗೆಲುವು ಸಾಧಿಸಬೇಕು ಎಂಬ ಯೋಚನೆಯಿಂದ ಶಾಸಕ ರಾಜೇಶ್ ನಾಯ್ಕ್ ಅವರು ವಿಕಸಿತ ಭಾರತ ಸಂಕಲ್ಪದೊಂದಿಗೆ ಗ್ರಾಮ ,ಮನೆ,...