Thursday, April 18, 2024

ಮಂಚಿ ಕುಕ್ಕಾಜೆ ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ ಆಡಳಿತ ಮಂಡಳಿ ಚುನಾವಣೆ: ಕಾಂಗ್ರೆಸ್ ಬೆಂಬಲಿತರ ಜಯಬೇರಿ

ಮಂಚಿ: ಕುಕ್ಕಾಜೆ ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ ಆಡಳಿತ ಮಂಡಳಿಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು 13 ಸ್ಥಾನಗಳ ಪೈಕಿ 9 ಸ್ಥಾನಗಳನ್ನು ಗೆಲ್ಲುವುದರೊಂದಿಗೆ ಮತ್ತೆ ಅಧಿಕಾರ ಉಳಿಸಿಕೊಂಡಿದ್ದಾರೆ. ಮಂಚಿ ಮತ್ತು ಇರಾ ವ್ಯಾಪ್ತಿಗೊಳಪಟ್ಟ ತಾಲೂಕಿನ ಪ್ರತಿಷ್ಠಿತ ಸಹಕಾರಿ ಸಂಸ್ಥೆಯಾಗಿರುವ ಮಂಚಿ ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ ಮಂಚಿ ಕುಕ್ಕಾಜೆಯ ಆಡಳಿತ ಮಂಡಳಿ ಚುನಾವಣೆಯಲ್ಲಿ ಸ್ಪರ್ಧಿಸಿ ಗೆದ್ದ ಕಾಂಗ್ರೆಸ್ ಬೆಂಬಲಿತರ ಬಂಟ್ವಾಳ ತಾಲೂಕು ಪಂಚಾಯತ್ ಅಧ್ಯಕ್ಷ ಚಂದ್ರಹಾಸ ಕರ್ಕೇರ, ಉಮ್ಮರ್ ಮಂಚಿ ಸಹಿತ ಆಯ್ಕೆಗೊಂಡ ಎಲ್ಲಾ ಅಭ್ಯರ್ಥಿಗಳನ್ನು ಮಾಜಿ ಸಚಿವ ರಮಾನಾಥ ರೈ, ಯು.ಟಿ.ಖಾದರ್, ತಾಲೂಕು ಪಂಚಾಯತ್ ಉಪಾಧ್ಯಕ್ಷ ಅಬ್ಬಾಸ್ ಆಲಿ, ಮುಡಿಪು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಶಾಂತ್ ಕಾಜವ, ಇರಾ ಗ್ರಾಮ ಪಂಚಾಯತ್ ಅಧ್ಯಕ್ಷ ಅಬ್ದುಲ್ ರಝಾಕ್ ಕುಕ್ಕಾಜೆ, ಅಭಿನಂದನೆ ಸಲ್ಲಿಸಿ, ಸಂಸ್ಥೆ ಇನ್ನಷ್ಟು ಅಭಿವೃದ್ಧಿ ಪಥದಲ್ಲಿ ಮುನ್ನಡೆಯಲೆಂದು ಹಾರೈಸಿದರು. ಬಂಟ್ವಾಳ ಸಹಕಾರಿ ಅಭಿವೃದ್ಧಿ ಅಧಿಕಾರಿ ತ್ರಿವೇಣಿ ರಾವ್ ಕೆ. ಚುನಾವಣಾ ಪ್ರಕ್ರಿಯೆಯನ್ನು ನಡೆಸಿಕೊಟ್ಟರು.

More from the blog

ನರಿಕೊಂಬು: ನವಜೀವನ ವ್ಯಾಯಾಮ ಶಾಲೆ: 21ರಂದು ಹನುಮಾನ್ ಮಂದಿರ ಲೋಕಾರ್ಪಣೆ

ಬಂಟ್ವಾಳ: ಇಲ್ಲಿನ ನರಿಕೊಂಬು ಗ್ರಾಮದ ನವಜೀವನ ವ್ಯಾಯಾಮ ಶಾಲೆ ವತಿಯಿಂದ ರೂ 1 ಕೋಟಿ ವೆಚ್ಚದಲ್ಲಿ ಪುನರ್ ನಿಮರ್ಾಣಗೊಂಡ ಶ್ರೀ ಹನುಮಾನ್ ಮಂದಿರ ಲೋಕಾರ್ಪಣೆ ಮತ್ತು ಶ್ರೀ ಆಂಜನೇಯ ಬಿಂಬ ಪುನರ್ ಪ್ರತಿಷ್ಠೆ...

ಹಿಂದೂ ಸಂಘಟನೆ ಮುಖಂಡನಿಗೆ ಚೂರಿ ಇರಿದ ಪ್ರಕರಣ : ಆರೋಪಿ ಅರೆಸ್ಟ್

ಬಂಟ್ವಾಳ: ಹಿಂದೂ ಸಂಘಟನೆಯ ಮುಖಂಡನೋರ್ವನಿಗೆ ಚೂರಿ ಇರಿದು ಪರಾರಿಯಾಗಿದ್ದ ಆರೋಪಿಯನ್ನು ಬಂಟ್ವಾಳ ನಗರ ಠಾಣೆಯ ಪೋಲೀಸರು ಬಂಧಿಸಿದ ಘಟನೆ ಇಂದು ನಡೆದಿದೆ. ಬಂಟ್ವಾಳ ನಿವಾಸಿ ರವಿ ಯಾನೆ ರವೀಂದ್ರ ಬಂಧಿತ ಆರೋಪಿಯಾಗಿದ್ದಾನೆ. ಎ.14 ರಂದು ಆದಿತ್ಯವಾರ...

ಬಂಟ್ವಾಳ: ಕರ್ಪೆ ಗ್ರಾಮದ ಮನೆಗಳಿಗೆ ಭೇಟಿ ನೀಡಿ ಮತಯಾಚನೆ ನಡೆಸಿದ ಶಾಸಕ ರಾಜೇಶ್ ನಾಯ್ಕ್

ಲೋಕಸಭಾ ಚುನಾವಣೆಯಲ್ಲಿ ಕ್ಯಾ.ಬ್ರಿಜೇಶ್ ಚೌಟ ಅವರನ್ನು ಬಹುಮತದಿಂದ ಗೆಲ್ಲಿಸಿಕೊಡುವಂತೆ "ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಹಾಗೂ ಜಿ.ಪಂ.ಮಾಜಿ ಸದಸ್ಯ ಎಂ.ತುಂಗಪ್ಪ ಬಂಗೇರ ಅವರು ಗ್ರಾಮ,ಮನೆ,ಮನ ಸಂಪರ್ಕ ಅಭಿಯಾನ" ಕಾರ್ಯಕ್ರಮದ ಮೂಲಕ ಬಂಟ್ವಾಳದ...

ವೈದ್ಯರ ಎಡವಟ್ಟು : ಕುಡಿದ ಮತ್ತಿನಲ್ಲಿ ರೈಲ್ವೆ ಗೇಟ್ ಗೆ ಡಿಕ್ಕಿ

ಮಂಗಳೂರಿನ ಹೆಸರಾಂತ ಮನೋರೋಗ ತಜ್ಞರೊಬ್ಬರು ಕುಡಿದ ಮತ್ತಿನಲ್ಲಿ ರೈಲ್ವೆ ಗೇಟ್ ಗೆ ಡಿಕ್ಕಿ ಹೊಡೆದು ಆವಾಂತರ ಸೃಷ್ಟಿಸಿದ ಘಟನೆ ನಗರ ಹೊರ ವಲಯದ ಪರಂಗಿಪೇಟೆ ಬಳಿಯ ಅರ್ಕುಳ ಎಂಬಲ್ಲಿ ನಿನ್ನೆ ರಾತ್ರಿ ಸಂಭವಿಸಿದೆ. ಕುಡಿದ...