ಮಂಗಳೂರು: ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಮಾ. 7 ಮತ್ತು 8 ರಂದು ಮಂಗಳೂರಿನ ಪುರಭವನದಲ್ಲಿ ನಡೆಯಲಿರುವ ಪತ್ರಕರ್ತರ 35 ನೇ ರಾಜ್ಯ ಸಮ್ಮೇಳನದ ಕೈಪಿಡಿ ಬಿಡುಗಡೆ ಜ.21ರಂದು ಬೆಳಿಗ್ಗೆ 11 ಗಂಟೆಗೆ ಮಂಗಳೂರು ಪ್ರೆಸ್ ಕ್ಲಬ್ ನಲ್ಲಿ ನಡೆಯಲಿದೆ.
ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ಡಿ.ವೇದವ್ಯಾಸ್ ಕಾಮತ್ ಸಮ್ಮೇಳನ ದ ಕೈಪಿಡಿಯನ್ನು ಬಿಡುಗಡೆಗೊಳಿಸಲಿರುವರು.
ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ಅಧ್ಯಕ್ಷತೆ ವಹಿಸಲಿದ್ದಾರೆ. ಮಂಗಳೂರು ಉತ್ತರ ಕ್ಷೇತ್ರದ ಶಾಸಕ ಡಾ.ಭರತ್ ಶೆಟ್ಟಿ ವೈ, ವಿಧಾನ ಪರಿಷತ್ ಸದಸ್ಯ ಐವನ್ ಡಿ ಸೋಜ, ಸಿಟಿ ಬಸ್ ಮಾಲೀಕರ ಸಂಘದ ಅಧ್ಯಕ್ಷ ದಿಲ್ ರಾಜ್ ಆಳ್ವ, ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಅನ್ನು ಮಂಗಳೂರು, ಪತ್ರಿಕಾಭವನ ಟ್ರಸ್ಟ್ ಅಧ್ಯಕ್ಷ ಕೆ.ಆನಂದ ಶೆಟ್ಟಿ ಮುಖ್ಯ ಅತಿಥಿಯಾಗಿ ಭಾಗವಹಿಸಲಿರುವರು ಎಂದು ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ .