ಮಂಗಳೂರು : ಮಂಗಳೂರು ಬಜ್ಪೆ ವಿಮಾನ ನಿಲ್ದಾಣದಲ್ಲಿ ಸ್ಫೋಟಕ ಇರಿಸಿದ್ದ ಆರೋಪಿ ಆದಿತ್ಯ ರಾವ್ ಇಂದು ಬೆಳಿಗ್ಗೆ ಬೆಂಗಳೂರಿನಲ್ಲಿ ಪೊಲೀಸರಿಗೆ ಶರಣಾಗಿದ್ದಾನೆ.  ವಿಮಾನ ನಿಲ್ದಾಣದ ಬಳಿಯ ಸಿಸಿ ಟಿವಿಯ ಕೆಲವು ದೃಶ್ಯಾವಳಿಯಗಳನ್ನು ಪರಿಶೀಲಿಸಿ ಪೊಲೀಸರು ತೀವ್ರ ಶೋಧ ನಡೆಸುತ್ತಿದ್ದರು. ಮಂಗಳವಾರ ಆತನ ಚಹರೆ ಪತ್ತೆ ಹಚ್ಚಿದ್ದು, ಆತನ ಶೋಧಕಾರ್ಯ ನಡೆಯುತ್ತಿತ್ತು. ಇಂದು ಬೆಳಿಗ್ಗೆ ಸ್ವತಃ ಆರೋಪಿಯೇ ಡಿಜಿ ಮತ್ತು ಐಜಿಪಿ ನೀಲಮಣಿ ರಾಜು ಎದುರು ಹಾಜರಾಗಿ ಶರಣಾಗಿದ್ದಾನೆ.

ಉಡುಪಿಯ ಮಣಿಪಾಲ ನಿವಾಸಿ ಆದಿತ್ಯ ರಾವ್ (40) ಬೆಂಗಳೂರು ಪೊಲೀಸರಿಗೆ ಶರಣಾಗಿದ್ದಾನೆ. ಈ ವೇಳೆ ಪೊಲೀಸರು ತನಿಖೆ ನಡೆಸಿದ್ದು, ಈ ವೇಳೆ ಆರೋಪಿ ಆದಿತ್ಯ ರಾವ್ ನಾನೇ ಮಂಗಳೂರು ಏರ್ ಪೋರ್ಟ್ ನಲ್ಲಿ ಬಾಂಬ್ ಇಟ್ಟಿದ್ದು ನಾನೇ ಎಂದು ಒಪ್ಪಿಕೊಂಡಿದ್ದಾನೆ. ಮಾರು ವೇಷದಲ್ಲಿ ಲಾರಿಯಲ್ಲಿ ಬಂದು ನಿನ್ನೆ ರಾತ್ರಿ 10.30 ಕ್ಕೆ ಬಂದು ಪೊಲೀಸರಿಗೆ ಶರಣಾಗಿದ್ದನು.

ಆದಿತ್ಯ ರಾವ್ ಮಣಿಪಾಲ ಮಣ್ಣಪಳ್ಳ ಹುಡ್ಕೋ ಕಾಲೋನಿಯ ವಸತಿ ಸಮುಚ್ಚಯವೊಂದರಲ್ಲಿ ವಾಸ ಮಾಡುತ್ತಿದ್ದ. ಈತ ಇಂಜಿನಿಯರಿಂಗ್ ಮತ್ತು ಎಂಬಿಎ ಸ್ನಾತಕೋತ್ತರ ಪದವೀಧರನಾಗಿದ್ದ. ಆದಿತ್ಯ ರಾವ್ 2018ರಲ್ಲಿ ಬೆಂಗಳೂರಿನ ಕೆಂಪೇಗೌಡ ಅಂತರ್ ರಾಷ್ಟ್ರೀಯ ವಿಮಾನ ನಿಲ್ದಾಣ ಹಾಗೂ ಮೆಜಿಸ್ಟಿಕ್‌ ನಲ್ಲಿನ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣವನ್ನು ಸ್ಪೋಟ ನಡೆಸುವುದಾಗಿ ಹುಸಿ ಬೆದರಿಕೆ ಕರೆ ಮಾಡಿ, ಬಂಧನಕ್ಕೆ ಒಳಗಾಗಿದ್ದನು. ಈತ ಒಟ್ಟು ಮೂರು ಹುಸಿ ಬಾಂಬ್ ಬೆದರಿಕೆ ಕರೆಗಳನ್ನು ಮಾಡಿದ್ದ ಆರೋಪದಲ್ಲಿ 2018ರ ಆಗಸ್ಟ್ ನಲ್ಲಿ ಬಂಧಿಸಲಾಗಿತ್ತು. ಬಳಿಕ ಜೈಲುವಾಸ ಅನುಭವಿಸಿದ್ದ. ಕೆಂಪೇಗೌಡ ಅಂತರ್ ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭದ್ರತಾ ಸಿಬ್ಬಂದಿಯ ಹುದ್ದೆಗೆ ತನ್ನನ್ನು ನೇಮಕ ಮಾಡಿಕೊಳ್ಳಲಿಲ್ಲ ಎಂದು ಕೋಪಗೊಂಡು ಕೃತ್ಯ ಎಸಗಿದ್ದ ಎಂದು ಹೇಳಲಾಗಿದೆ.

ಅರೋಪಿ ಆದಿತ್ಯರಾವ್ ಅವರ ತಾಯಿ ತೀರಿಕೊಂಡಿದ್ದು, ತಂದೆ ಮಂಗಳೂರಿನಲ್ಲಿ ನೆಲೆಸಿದ್ದಾರೆ. ನಿರರ್ಗಳವಾಗಿ ಇಂಗ್ಲಿಷ್ ಮಾತನಾಡುವ ಈತ ಬ್ಯಾಂಕ್ ಕೆಲಸ ಬಿಟ್ಟು ಸೆಕ್ಯುರಿಟಿ ಕೆಲಸ ಮಾಡಲು ಬಯಸಿದ್ದ ಎಂದು 2018 ರಲ್ಲಿ ಪೊಲೀಸರ ಎದುರು ಹೇಳಿಕೊಂಡಿದ್ದ.

ಮಂಗಳೂರು ವಿಮಾನ ನಿಲ್ದಾಣದ ಬಳಿ ಬಾಂಬ್ ಪತ್ತೆಯಾದ ಪ್ರಕರಣ ಸಂಬಂಧ ಆರೋಪಿಯನ್ನು ವಶಕ್ಕೆ ಪಡೆಯಲು ಮಂಗಳೂರು ಪೊಲೀಸರು ಬೆಂಗಳೂರಿಗೆ ದೌಡಾಯಿಸಿದ್ದಾರೆ. 

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here