ಬಂಟ್ವಾಳ: ಪುಂಜಾಲಕಟ್ಟೆ ಸಮೀಪದ ಮಂಜಲಪಲ್ಕೆ ಜೈ ಹನುಮಾನ್ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಬೆಳ್ತಂಗಡಿ ತಾ. ಅಮೆಚೂರ್ ಕಬಡ್ಡಿ ಎಸೋಸಿಯೇಷನ್ ಸಹಕಾರದಲ್ಲಿ 6 ನೇ ವರ್ಷದ ಹೊನಲು ಬೆಳಕಿನ ಪ್ರೋ ಕಬಡ್ಡಿ ಮಾದರಿಯ ಮ್ಯಾಟ್ ಪುರುಷರ ಮುಕ್ತ ಕಬಡ್ಡಿ ಪಂದ್ಯಾಟ ಮತ್ತು ಕುಕ್ಕಳ ಗ್ರಾಮ ವಲಯ ಮಟ್ಟದ ಪುರುಷರ ಕಬಡ್ಡಿ ಪಂದ್ಯಾಟ ಜ.26 ರಂದು ಮಂಜಲಪಲ್ಕೆ ಜೈ ಹನುಮಾನ್ ಭಜನ ಮಂದಿರದ ವಠಾರದಲ್ಲಿ ಜರಗಲಿದೆ.
ಉದ್ಯಮಿ ಗಣೇಶ್ ಮೂಲ್ಯ ಅನಿಲಡೆ ಪಂದ್ಯಾಟವನ್ನು ಉದ್ಘಾಟಿಸಲಿರುವರು. ಕುಕ್ಕಳ ಗ್ರಾ.ಪಂ. ಅಧ್ಯಕ್ಷ ಗೋಪಾಲಕೃಷ್ಣ ಅಧ್ಯಕ್ಷತೆ ವಹಿಸಲಿರುವರು ಎಂದು ಸಂಘಟಕ ಸತೀಶ್ ಶೆಟ್ಟಿ ಕುರ್ಡುಮೆ ಪ್ರಕಟನೆಯಲ್ಲಿ ತಿಳಿಸಿದ್ದಾರೆ.