Saturday, April 6, 2024

ಕರ್ತವ್ಯಕ್ಕೆ ಅಡ್ಡಿಪಡಿಸಿದರೆ ಪ್ರಕರಣ ದಾಖಲಿಸಿ ಕ್ರಮಕೈಗೊಳ್ಳಿ: ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ: ಆಶಾ ಕಾರ್ಯಕರ್ತೆಯರಿಗೆ ಕರ್ತವ್ಯ ಕ್ಕೆ ಅಡ್ಡಿಪಡಿಸುವ ಬಗ್ಗೆ ದೂರುಗಳು ಬಂದಿದ್ದು ಅಂತವರ ಮೇಲೆ ಪ್ರಕರಣ ದಾಖಲಿಸಿ ಸೂಕ್ತವಾದ ಕಾನೂನು ಕ್ರಮಕೈಗೊಳ್ಳುವಂತೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಮಂಗಳೂರು ಎಸ್.ಪಿ.ಲಕ್ಮೀಪ್ರಸಾದ್ ಅವರಿಗೆ ತಿಳಿಸಿದ್ದಾರೆ.
ಆಶಾ ಕಾರ್ಯಕರ್ತೆ ಯರು ಸರಕಾರದ ಮಾಹಿತಿ ನೀಡಲು ಮನೆಮನೆಗೆ ತೆರಳುವ ವೇಳೆ ಇವರ ಕರ್ತವ್ಯ ಕ್ಕೆ ಅಡ್ಡಿಪಡಿಸುವುದು ಮತ್ತು ಸಾಮಾಜಿಕ ಜಾಲತಾಣದ ಮೂಲಕ ಸಂದೇಶಗಳನ್ನು ಹರಿಯಬಿಡುವುದರ ಬಗ್ಗೆ ದೂರು ಬರುತ್ತಿದ್ದು, ಅಂತಹ ವರ ಮೇಲೆ ಕಾನೂನು ಕ್ರಮಕೈಗೊಳ್ಳಿ ಎಂದು ಅವರು ತಿಳಿಸಿದ್ದಾರೆ.
ಗುರುವಾರ ಆರೋಗ್ಯ ಇಲಾಖೆಯ ವತಿಯಿಂದ ಡೆಂಗ್ಯೂ ಮತ್ತು ಮಲೇರಿಯಾ ಜ್ವರದ ಬಗ್ಗೆ ಮಾಹಿತಿ ನೀಡಲು ಆಶಾ ಕಾರ್ಯಕರ್ತೆ ಯರು ಬಿಸಿರೋಡಿನ ಗೂಡಿನಬಳಿಗೆ ತೆರಳಿದ ವೇಳೆ ಅವರ ಕರ್ತವ್ಯ ಕ್ಕೆ ಅಡ್ಡಿಪಡಿಸಲಾಗಿದೆ ಎಂದು ದೂರು ನೀಡಲಾಗಿದೆ.‌ಜೊತೆಗೆ ಮಂಗಳವಾರ ಮಂಚಿಯ ಆರೋಗ್ಯ ಕೇಂದ್ರ ದಲ್ಲಿ ಸಿ.ಡಿ.ಪಿ.ಒ.ಇಲಾಖೆ ಹಾಗೂ ಆರೋಗ್ಯ ಇಲಾಖೆಯ ಜಂಟಿ ಆಶ್ರಯದಲ್ಲಿ ಬೇಟಿ ಬಚಾವೋ ಬೇಟಿ ಪಡಾವೋ ಯೋಜನೆಯನ್ನು ಪಡೆದ ಫಲಾನುಭವಿಗಳ ದಾಖಲೆಗಳನ್ನು ಪರಿಶೀಲನೆ ನಡೆಸುವವ ವೇಳೆ ಕೇಂದ್ರ ದ ಒಳಗೆ ಅಕ್ರಮವಾಗಿ ಪ್ರವೇಶ ಮಾಡಿ ಅಲ್ಲಿಯೂ ಕರ್ತವ್ಯ ಕ್ಕೆ ಅಡ್ಡಿಪಡಿಸಿದ್ದಾರೆ ಎಂಬ ದೂರನ್ನು ಬಂಟ್ವಾಳ ಆರೋಗ್ಯಾಧಿಕಾರಿ ಯವರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರಿಗೆ ನೀಡಿದ್ದಾರೆ.
ಈ ಎರಡು ದೂರಿನ‌ ಹಿನ್ನೆಲೆಯಲ್ಲಿ ಶಾಸಕ ರಾಜೇಶ್ ನಾಯ್ಕ್ ಅವರು ಎಸ್.ಪಿ.ಅವರಲ್ಲಿ ಕರ್ತವ್ಯ ಕ್ಕೆ ಅಡ್ಡಿಪಡಿಸುವವರ ಮೇಲೆ ಪ್ರಕರಣ ದಾಖಲಿಸುವಂತೆ ತಿಳಿಸಿದ್ದಾರೆ.
ಕರ್ತವ್ಯ ಕ್ಕೆ ಅಡ್ಡಿಪಡಿಸುವವರ ಬಗ್ಗೆ ಸೂಕ್ತ ತನಿಖೆ ನಡೆಸಿ ಕ್ರಮಕೈಗೊಳ್ಳುವುದಾಗಿ ಎಸ್.ಪಿ.ಭರವಸೆ ನೀಡಿದ್ದಾರೆ ಎಂದು ಅವರು ತಿಳಿಸಿದ್ದಾರೆ.

More from the blog

ರಾಜ್ಯದಲ್ಲಿ 60 ಮಂದಿಯ ನಾಮಪತ್ರ ತಿರಸ್ಕೃತ

ಬೆಂಗಳೂರು: ಲೋಕಸಭಾ ಚುನಾವಣೆಗೆ ರಾಜ್ಯದ ಮೊದಲ ಹಂತದ 14 ಕ್ಷೇತ್ರಗಳಲ್ಲಿ 358 ಅಭ್ಯರ್ಥಿಗಳು 492 ನಾಮಪತ್ರ ಸಲ್ಲಿಸಿದ್ದು, ಇದರಲ್ಲಿ 13 ಕ್ಷೇತ್ರದಲ್ಲಿ ಪರಿಶೀಲನೆ ಕಾರ್ಯ ಮುಗಿದಿದೆ. 276 ನಾಮಪತ್ರಗಳು ಕ್ರಮಬದ್ಧವಾಗಿದ್ದು, 60 ನಾಮಪತ್ರಗಳು...

ಮಂಗಳೂರು: ‘ಸ್ವೀಟ್ ಸಿಂಫನಿ ಇನ್ಸ್ಟಿಟ್ಯೂಟ್ ಆಫ್ ಮ್ಯೂಸಿಕ್’ ಸಂಸ್ಥೆಯ ಸಂಗೀತ ಕ್ಷೇತ್ರದಲ್ಲಿ ಸಂಪುಟ 2′ ರ ನೂತನ ಕೃತಿ ಲೋಕಾರ್ಪಣೆ

ಮಂಗಳೂರು: ಮಂಗಳೂರಿನ ಕುಲಶೇಖರದಲ್ಲಿರುವ 'ಸ್ವೀಟ್ ಸಿಂಫನಿ ಇನ್ಸ್ಟಿಟ್ಯೂಟ್ ಆಫ್ ಮ್ಯೂಸಿಕ್' ಸಂಸ್ಥೆಯ ಪ್ರಕಾಶನದಲ್ಲಿ ಇಂಗ್ಲಿಷ್, ಹಿಂದಿ ಮತ್ತು ಕನ್ನಡದ ಜನಪ್ರಿಯ ಹಾಡುಗಳನ್ನು ಪಾಶ್ಚಿಮಾತ್ಯ ನೊಟೇಶನ್ ಮೂಲಕ ವಯಲಿನ್, ಗಿಟಾರ್ ಮತ್ತು ಕೀಬೋರ್ಡ್ ನಲ್ಲಿ...

ಆಭರಣ ಪ್ರಿಯರಿಗೆ ಗುಡ್‌ನ್ಯೂಸ್‌ : ವಾರಾಂತ್ಯದಲ್ಲಿ ಚಿನ್ನದ ದರ ತುಸು ಇಳಿಕೆ…

ಬೆಂಗಳೂರು: ಚಿನ್ನದ ದರದಲ್ಲಿ ಮತ್ತೆ ಹಾವು ಏಣಿಯಾಟ ಶುರುವಾಗಿದೆ. ಕಳೆದೆರಡು ದಿನಗಳಿಂದ ನಿರಂತರ ಏರಿಕೆ ಕಂಡಿದ್ದ ಬಂಗಾರದ ಬೆಲೆ ಇದೀಗ ಇಳಿಕೆಯಾಗಿದೆ. ನಿನ್ನೆಯ ದರಕ್ಕೆ ಹೋಲಿಸಿದರೆ 10ಗ್ರಾಂ ಚಿನ್ನದ ಮೇಲೆ 450 ರೂ...

ನೀತಿ ಸಂಹಿತೆ ಇರುವಾಗ ಆಶ್ಲೇಷ ಬಲಿ ಮಂಟಪ ಕಾಮಗಾರಿ ಆರಂಭ ಸಮರ್ಪಕವಲ್ಲ- ಹರೀಶ್ ಇಂಜಾಡಿ

ಸುಬ್ರಹ್ಮಣ್ಯ: ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಈ ಹಿಂದಿನ ಆಡಳಿತ ಮಂಡಳಿಯ ಕೊನೇ ದಿನಗಳಲ್ಲಿ ದಾನಿಗಳು ಕ್ಷೇತ್ರದಲ್ಲಿ ಆಶ್ಲೇಷ ಬಲಿ ಮಂಟಪ ನಿರ್ಮಿಸಲು ಮುಂದೆ ಬಂದರು. ಇದು ಸ್ವಾಗತಾರ್ಹ ಬೆಳವಣಿಗೆ. ಆದರೆ...