Wednesday, April 10, 2024

ನೇರಳಕಟ್ಟೆ: ಸಹಕಾರಿ ವ್ಯವಸಾಯಿಕ ಸಂಘದ ವತಿಯಿಂದ ಶುದ್ಧ ಕುಡಿಯುವ ನೀರಿನ ಫಿಲ್ಟರ್ ಕೊಡುಗೆ

ಬಂಟ್ವಾಳ: ನೇರಳಕಟ್ಟೆ ಸಹಕಾರಿ ವ್ಯವಸಾಯಿಕ ಸಂಘದ ವತಿಯಿಂದ ಮಾಣಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಶುದ್ಧ ಕುಡಿಯುವ ನೀರಿನ ಫಿಲ್ಟರ್ ಅನ್ನು ಇತ್ತೀಚೆಗೆ ಹಸ್ತಾಂತರಿಸಲಾಯಿತು. ಈ ಸಂದರ್ಭದಲ್ಲಿ ಜಿ.ಪಂ.ಸದಸ್ಯೆ ಮಂಜುಳಾ ಮಾಧವಮಾವೆ, ನೇರಳಕಟ್ಟೆ ಸಹಕಾರಿ ವ್ಯವಸಾಯಿಕ ಸಂಘದ ಅಧ್ಯಕ್ಷ ನರೇಂದ್ರ ರೈ, ನಿರ್ದೇಶಕರಾದ ತನಿಯಪ್ಪ ಗೌಡ, ಜಯರಾಮ ರೈ, ಗಣೇಶ ರೈ, ಪುಷ್ಪಾ, ಭಾರತಿ,‌ ಬ್ಯಾಂಕಿನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸಂಜೀವ ಪೂಜಾರಿ, ಮಾಣಿ ಗ್ರಾ.ಪಂ.ಅಧ್ಯಕ್ಷೆ ಮಮತಾ ಶೆಟ್ಟಿ, ಸದಸ್ಯ ಇಬ್ರಾಹಿಂ ಮಾಣಿ, ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಶಶಿಕಲಾ ಮತ್ತು ಸಿಬ್ಬಂದಿವರ್ಗದವರು ಉಪಸ್ಥಿತರಿದ್ದರು.

More from the blog

ಮೈಟ್ ಎಜುಕೇಶನ್ ಸಂಸ್ಥೆಯ ವತಿಯಿಂದ 2024ರ ಪ್ರಾಕ್ಟಿಕಲ್ ಪರೀಕ್ಷೆ

ಮಂಗಳೂರು ಹಾಗೂ ಬಿಸಿರೋಡ್ ನಲ್ಲಿ ಕಾರ್ಯನಿರ್ವಹಿಸುತ್ತಿರುವ ಮೈಟ್ ಎಜುಕೇಶನ್ ಸಂಸ್ಥೆಯ ವತಿಯಿಂದ 2024ರ ಪ್ರಾಕ್ಟಿಕಲ್ ಪರೀಕ್ಷೆ ಸೋಮವಾರ ಬಿಸಿರೋಡ್ ಶಾಖೆಯಲ್ಲಿ ನಡೆಯಿತು. ಟೀಚರ್ಸ್ ಟ್ರೈನಿಂಗ್ ವಿಭಾಗದ ವಿದ್ಯಾರ್ಥಿನಿಯರಿಂದ ಪ್ರಸ್ತುತ ವರ್ಷದಲ್ಲಿ ತಯಾರಿಸಿದ ಎಲ್ಲಾ ಕಲಿಕಾ...

ಬಂಟ್ವಾಳ ತಾಲೂಕಿನಾದ್ಯಂತ ಸಂಭ್ರಮದ ಈದ್ ಉಲ್ ಫಿತ್ರ್ ಆಚರಣೆ

ಬಂಟ್ವಾಳ ತಾಲೂಕಿನಾದ್ಯಂತ ಸಂಭ್ರಮದ ಈದ್ ಉಲ್ ಫಿತ್ರ್ ಆಚರಣೆ ನಡೆಯಿತು. ಬುಡೋಳಿ ಏನಾಜೆ ಬಿಲಾಲ್ ಮಸ್ಜಿದ್ ಏನಾಜೆ ಬುಡೋಳಿಯಲ್ಲಿ ಮಸೀದಿ ಖತೀಬರಾದ ಅಬ್ದುಲ್ ಮಜೀದ್ ದಾರಿಮೀ ಉಸ್ತಾದ್ ಜುಮ್ಮಾ ನೇತೃತ್ವ ವಹಿಸಿ ಈದ್ ಸಂದೇಶವನ್ನು...

ಮನೆಗೆ‌ ನುಗ್ಗಿ ಚೂರಿ ಇರಿದ ಪ್ರಕರಣ : ಆರೋಪಿ ಅರೆಸ್ಟ್

ಬಂಟ್ವಾಳ: ಮನೆಯೊಳಗೆ ‌ನುಗ್ಗಿ ವ್ಯಕ್ತಿಯೋರ್ವನಿಗೆ ಚೂರಿ ಹಾಕಿ ಪರಾರಿಯಾಗಿದ್ದ ಆರೋಪಿಯನ್ನು ಬಂಟ್ವಾಳ ‌ಗ್ರಾಮಾಂತರ ಪೋಲೀಸ್ ಬಂಧಿಸಿ ನ್ಯಾಯಲಯಕ್ಕೆ ಹಾಜರುಪಡಿಸಿದ್ದು,ನ್ಯಾಯಾಲಯ ಈತನಿಗೆ 15 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದೆ. ಅಬ್ದುಲ್ ರಹಿಮಾನ್ ಎಂಬಾತ ಬಂಧಿತ...

ಏ.10ರಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ…. ರಿಸಲ್ಟ್​ ಚೆಕ್ ಮಾಡೋದು ಹೇಗೆ?

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶವನ್ನು ನಾಳೆ ಪ್ರಕಟಿಸಲಾಗುತ್ತಿದೆ. ಎಲ್ಲ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಮುಕ್ತಾಯವಾದ ಹಿನ್ನಲೆ ನಾಳೆ ಫಲಿತಾಂಶ ಪ್ರಕಟಿಸಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಮುಂದಾಗಿದೆ. ನಾಳೆ...