ಬಂಟ್ವಾಳ: ಪಿಲಾತಬೆಟ್ಟು ವ್ಯವಸಾಯ ಸೇವಾ ಸಹಕಾರ ಸಂಘದ ಪ್ರಧಾನ ಕಛೇರಿ ಸುಧನ್ವಕ್ಕೆ ಮಂಡ್ಯ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ನಿಯೋಗದ ತಂಡ ಭೇಟಿ ನೀಡಿ, ಸಂಘದ ಕಾರ್ಯ ಚಟುವಟಿಕೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಕೆ.ಲಕ್ಷೀ ನಾರಾಯನ ಉಡುಪ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮಂಜಪ್ಪ ಮೂಲ್ಯ ಮಾಹಿತಿ ನೀಡಿದರು. ನಿಯೋಗದಲ್ಲಿ ಮಂಡ್ಯ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವನಜಾಕ್ಷಿ, ಬೋರೆಗೌಡ ಹಾಗೂ ವಸಂತ್, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನ ಅಧಿಕಾರಿಗಳಾದ ಗಣೇಶ್ ಭಟ್ ಹಾಗೂ ದೀಪಕ್, ಮೇಲ್ವಿಚಾರಕ ಕೇಶವ ಕಿಣಿ ಹಾಗೂ ಯೋಗೀಶ್ ಹಾಗೂ ಸಂಘದ ಸಿಬ್ಬಂದಿಗಳು ಉಪಸ್ಥಿತರಿದ್ದರು.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here