Wednesday, April 17, 2024

ಸಜೀಪಮೂಡ ಪದವಿಪೂರ್ವ ಕಾಲೇಜು, ಪ್ರೌಢಶಾಲಾ ವಿಭಾಗ: ಪ್ರತಿಭಾ ಪುರಸ್ಕಾರ ಸಮಾರಂಭ

ಬಂಟ್ವಾಳ: ಸಜೀಪಮೂಡ ಪದವಿಪೂರ್ವ ಕಾಲೇಜು ಹಾಗೂ ಪ್ರೌಢಶಾಲಾ ವಿಭಾಗ ಇವುಗಳ ಜಂಟಿ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಇತ್ತೀಚಿಗೆ ಬಂಟ್ವಾಳ ವಿಧಾನಸಭಾ ಕ್ಷೇತ್ರ ಶಾಸಕ ರಾಜೇಶ್ ನಾಯ್ಕ ಉಳಿಪ್ಪಾಡಿಗುತ್ತು ಅವರ ಅಧ್ಯಕ್ಷತೆಯಲ್ಲಿ ಜರಗಿತು.

ಸಮಾರಂಭದಲ್ಲಿ ಮಾಜಿ ದ.ಕ.ಜಿ.ಪಂ ಅಧ್ಯಕ್ಷ ಸದಾನಂದ ಪೂಂಜಾ ಬರಂಗರೆ, ಕಾಲೇಜು ಅಭಿವೃದ್ಧಿ ಸಮಿತಿ ಅಧ್ಯಕ್ಷ ಶ್ರೀಕಾಂತ್ ಶೆಟ್ಟಿ ಎಸ್., ತಾಲೂಕು ಪಂಚಾಯತ್ ಸದಸ್ಯ ಸಂಜೀವ ಪೂಜಾರಿ ಕೆ. ಗ್ರಾಮ ಪಂಚಾಯತ್ ಅಧ್ಯಕ್ಷ ವಿಶ್ವನಾಥ ಬೆಲ್ಚಡ, ಕೋಡೂರು ಪ್ರೌಢ ಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷ ಜಯಪ್ರಕಾಶ್, ಸದಸ್ಯರುಗಳಾದ ಎಂ. ಸುಬ್ರಹ್ಮಣ್ಯ ಭಟ್, ಕೆ. ಸುರೇಶ್ ಶೆಟ್ಟಿ, ಮಹಾಬಲ ರೈ ಬರ್ಕೆ ನವೀನ್, ಗ್ರಾಮ ಪಂಚಾಯತ್ ಸದಸ್ಯರಾದ ಸೀತಾರಾಮ, ಶ್ರೀನಾಥ್ ಶೆಟ್ಟಿ ಉಪಸ್ಥಿತರಿದ್ದರು.

ಕಾಲೇಜು ಪ್ರಾಚಾರ್ಯ ಜಯರಾಮ ಶೆಟ್ಟಿ ಸ್ವಾಗತಿಸಿದರು. ಪ್ರೌಢಶಾಲಾ ಮುಖ್ಯೋಪಾಧ್ಯಾಯಿನಿ ಜಯಲಕ್ಷ್ಮಿ ವರದಿ ವಾಚಿಸಿದರು. ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಮಾಜಿ ಕಾರ್ಯದರ್ಶಿ ವಾಸುದೇವ ಬೆಳ್ಳೆ ಕಾರ್ಯಕ್ರಮ ನಿರೂಪಿಸಿದರು ಪ್ರಾಧ್ಯಾಪಕ ಶ್ರೀನಿವಾಸ್ ವಂದಿಸಿದರು. ಸಭಾ ಕಾರ್ಯಕ್ರಮದ ಬಳಿಕ ವಿದ್ಯಾರ್ಥಿಗಳಿಂದ ಯಕ್ಷಗಾನ, ಜಾನಪದ ನೃತ್ಯ ಹಾಗೂ ವಿವಿಧ ವಿನೋದಾವಳಿ ಜರಗಿತ್ತು.

More from the blog

ಬಂಟ್ವಾಳದ ನರಿಕೊಂಬು ಗ್ರಾಮದಲ್ಲಿ ಮತಯಾಚನೆ ನಡೆಸಿದ ಶಾಸಕ ರಾಜೇಶ್ ನಾಯ್ಕ್

2024 ರ ಎ. 26 ರಂದು ನಡೆಯುವ ಲೋಕಸಭಾ ಚುನಾವಣೆಯಲ್ಲಿ ಕ್ಯಾ.ಬ್ರಿಜೇಶ್ ಚೌಟ ಅವರನ್ನು ಬಹುಮತದಿಂದ ಗೆಲ್ಲಿಸಿಕೊಡುವ ನಿಟ್ಟಿನಲ್ಲಿ "ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಗ್ರಾಮ,ಮನೆ,ಮನ ಸಂಪರ್ಕ ಅಭಿಯಾನ" ಎಂಬ...

ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ಆತ್ಮಹತ್ಯೆ

ಬಂಟ್ವಾಳ: ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಫರಂಗಿಪೇಟೆಯಲ್ಲಿ ಮಹಿಳೆಯೊಬ್ಬರು ತಂದೆ ಹಾಗೂ ಪುತ್ರಿಯ ಮುಂದೆಯೇ ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು‌ ನಡೆದಿದೆ. ಕುಮ್ಡೇಲು ನಿವಾಸಿ ಉಮೇಶ್ ಬೆಳ್ಚಡರ ಪತ್ನಿ...

ಲೋಕಸಭಾ ಚುನಾವಣೆ : ದಕ್ಷಿಣ ಕನ್ನಡ ಕ್ಷೇತ್ರದ ಸಂಯೋಜಕರನ್ನಾಗಿ ಅಬ್ದುಲ್ ರೆಹಮಾನ್ ಪಡ್ಪು ನೇಮಕ

ಲೋಕಸಭಾ ಚುನಾವಣೆಯ ದಕ್ಷಿಣ ಕನ್ನಡ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸಲು ಸಂಯೋಜಕರನ್ನಾಗಿ ಅಬ್ದುಲ್ ರೆಹಮಾನ್ ಪಡ್ಪು ಅವರನ್ನು ನೇಮಕ ಮಾಡಲಾಗಿದೆ.    

ವಿಟ್ಲ ಪೇಟೆಯಲ್ಲಿ ಕಾಂಗ್ರೆಸ್ ರೋಡ್ ಶೋ: ಸುಡುಬಿಸಿಲಿಗೂ ಜಗ್ಗದ ಉತ್ಸಾಹ

ವಿಟ್ಲ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಅವರು ಮಂಗಳವಾರ ವಿಟ್ಲ ಪೇಟೆಯಲ್ಲಿ ರೋಡ್ ಶೋ ನಡೆಸಿ, ಪ್ರಚಾರ ಕಾರ್ಯ ನಡೆಸಿದರು. ಧಾರ್ಮಿಕ ಕೇಂದ್ರಗಳಲ್ಲಿ ವಿಶೇಷ ಪ್ರಾರ್ಥನೆ ನಡೆಸಿ, ಬಳಿಕ...