Saturday, April 6, 2024

ಪುಣಚ ಬಳಂತಿಮೊಗರು ಶ್ರೀ ದೈವಗಳ ಬ್ರಹ್ಮಕಲಶೋತ್ಸವ, ನೇಮೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ

ವಿಟ್ಲ: ಪ್ರತಿಯೊಬ್ಬರ ಸಹಕಾರ, ಕೂಡುವಿಕೆಯಿಂದ ಬ್ರಹ್ಮಕಲಶೋತ್ಸವ ಯಶಸ್ವಿಯಾಗುವುದು. ಪ್ರತಿಯೊಬ್ಬರು ಏಕ ಮನಸ್ಸಿನಿಂದ ಸಹಭಾಗಿಗಳಾಗಬೇಕು. ತಮ್ಮ ಜವಾಬ್ದಾರಿಯನ್ನು ಸಮರ್ಪಕವಾಗಿ ನಿಭಾಯಿಸಬೇಕೆಂದು ಬಳಂತಿಮೊಗರು ಶ್ರೀ ದೈವಗಳ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ರಾಮಚಂದ್ರ ಮಣಿಯಾಣಿ ತಿಳಿಸಿದರು.

ಅವರು ಗುರುವಾರ ಎ.15 ರಿಂದ 20ರ ತನಕ ನಡೆಯುವ ಪುಣಚ ಗ್ರಾಮದ ಬಳಂತಿಮೊಗರು ಶ್ರೀಮಲರಾಯ, ಮಹಿಷಂದಾಯ, ಧೂಮಾವತಿ, ಪಂಜುರ್ಲಿ, ಕಲ್ಲುರ್ಟಿ, ಕಲ್ಕುಡ, ನೆತ್ತರ್‌ಕಣ ಮತ್ತು ಪರಿವಾರ ದೈವಗಳ ದೈವಸ್ಥಾನಗಳ ಪುನ: ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಮತ್ತು ನೇಮೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಬಜ್ಪೆ ಏರ್‌ಪೋರ್ಟ್‌ನ ಸಹಾಯಕ ಪೊಲೀಸ್ ಉಪ ನಿರೀಕ್ಷಕ ಪದ್ಮನಾಭ ಪಿ.ಎಸ್. ಮಾತನಾಡಿ ಎಲ್ಲರೂ ಕಾರ್ಯಕರ್ತರಂತೆ ದುಡಿದಾಗ ಬ್ರಹ್ಮಕಲಶೋತ್ಸವದಂತಹ ದೊಡ್ಡ ಕಾರ್ಯಗಳೂ ನಿರಾಳವಾಗಿ ನಡೆಯುವುದು ಎಂದರು.
ಮೂಡಂಬೈಲು ಸಿ.ಗೋಪಾಲಕೃಷ್ಣ ಶಾಸ್ತ್ರಿ ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷ ಸಿ. ರಾಮಕೃಷ್ಣ ಶಾಸ್ತ್ರಿ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿದರು. ಗೋಪಾಲ ಕೆಮ್ಮಿಂಜೆ, ಮಾರ್ಗದರ್ಶಕ ಮಂಡಳಿಯ ವಿಶ್ವನಾಥ ಭಟ್ ಮುಂಡೋವು, ಬ್ರಹ್ಮ ಕಲಶೋತ್ಸವ ಸಮಿತಿ ಅಧ್ಯಕ್ಷ ಗಣೇಶ ಪೂಜಾರಿ ಉಪಸ್ಥಿತರಿದ್ದರು.
ಸಮಿತಿಯ ರಾಮಕೃಷ್ಣ ಮೂಡಂಬೈಲು ಸ್ವಾಗತಿಸಿದರು. ಅಭಿಷೇಕ್ ವಂದಿಸಿದರು. ರವಿಚಂದ್ರ ಬಳಂತಿಮೊಗರು ಕಾರ್ಯಕ್ರಮ ನಿರೂಪಿಸಿದರು.

More from the blog

ಆಭರಣ ಪ್ರಿಯರಿಗೆ ಗುಡ್‌ನ್ಯೂಸ್‌ : ವಾರಾಂತ್ಯದಲ್ಲಿ ಚಿನ್ನದ ದರ ತುಸು ಇಳಿಕೆ…

ಬೆಂಗಳೂರು: ಚಿನ್ನದ ದರದಲ್ಲಿ ಮತ್ತೆ ಹಾವು ಏಣಿಯಾಟ ಶುರುವಾಗಿದೆ. ಕಳೆದೆರಡು ದಿನಗಳಿಂದ ನಿರಂತರ ಏರಿಕೆ ಕಂಡಿದ್ದ ಬಂಗಾರದ ಬೆಲೆ ಇದೀಗ ಇಳಿಕೆಯಾಗಿದೆ. ನಿನ್ನೆಯ ದರಕ್ಕೆ ಹೋಲಿಸಿದರೆ 10ಗ್ರಾಂ ಚಿನ್ನದ ಮೇಲೆ 450 ರೂ...

ನೀತಿ ಸಂಹಿತೆ ಇರುವಾಗ ಆಶ್ಲೇಷ ಬಲಿ ಮಂಟಪ ಕಾಮಗಾರಿ ಆರಂಭ ಸಮರ್ಪಕವಲ್ಲ- ಹರೀಶ್ ಇಂಜಾಡಿ

ಸುಬ್ರಹ್ಮಣ್ಯ: ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಈ ಹಿಂದಿನ ಆಡಳಿತ ಮಂಡಳಿಯ ಕೊನೇ ದಿನಗಳಲ್ಲಿ ದಾನಿಗಳು ಕ್ಷೇತ್ರದಲ್ಲಿ ಆಶ್ಲೇಷ ಬಲಿ ಮಂಟಪ ನಿರ್ಮಿಸಲು ಮುಂದೆ ಬಂದರು. ಇದು ಸ್ವಾಗತಾರ್ಹ ಬೆಳವಣಿಗೆ. ಆದರೆ...

ಪ್ರಧಾನಿ ಮೋದಿ ಕರೆ : ಪ್ರತಿಯೊಬ್ಬರ ಕೈ ಮೇಲೆ ಕಮಲದ ಹಚ್ಚೆ ಹಾಕಿ

ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ  ಬಿಜೆಪಿ ಕಾರ್ಯಕರ್ತರಿಗೆ ಕರೆ ನೀಡಿರುವ ಪ್ರಧಾನಿ ನರೇಂದ್ರ ಮೋದಿ ಪ್ರತಿಯೊಬ್ಬರ ಕೈ ಮೇಲೆ ಕಮಲದ ಹಚ್ಚೆ ಹಾಕಿ “ಮೆಹಂದಿ ಅಭಿಯಾನ" ನಡೆಸುವಂತೆ ಸೂಚನೆ ನೀಡಿದ್ದಾರೆ. ಜತೆಗೆ ಮೋದಿ...

ದಿನದಿಂದ ದಿನಕ್ಕೆ ಏರುತ್ತಿದೆ ತಾಪಮಾನ : ಕಡಬ, ಅಜೆಕಾರಿನಲ್ಲಿ ದಾಖಲೆಯ ಉಷ್ಣಾಂಶ

ಮಂಗಳೂರು: ಮುಂದಿನ ಎರಡು ದಿನಗಳ ಕಾಲ ಬಿಸಿಲಿನ ಶಾಕ ಮತ್ತಷ್ಟು ಹೆಚ್ಚಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ ಕರಾವಳಿ ಭಾಗದಲ್ಲಿ ತಾಪಮಾನ ದಿನದಿಂದ ದಿನಕ್ಕೆ ಏರಿಕೆ ಕಾಣುತ್ತಿದ್ದು, ಎ. 4ರಿಂದ 5ರ...