Friday, April 12, 2024

ಕಳೆದುಹೋಗಿದ್ದ ಹಣ ವಾಪಾಸು ವಾರಸುದಾರ ಕೈ ಸೇರಿದೆ: ಮಾನವೀಯತೆ ಮೆರೆದ ಯುವಕನಿಗೆ ಅಭಿನಂದನೆ

ಬಂಟ್ವಾಳ: ಕಳೆದುಕೊಂಡ ಹಣ ವಾಪಾಸು ವಾರಸುದಾರರ ಕೈಗೆ ಸೇರಿಸಿದ ಘಟನೆ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಇಂದು ನಡೆದಿದೆ.
ಪುಂಜಾಲಕಟ್ಟೆ ಪೊಲೀಸ್ ಠಾಣಾ ವ್ಯಾಪ್ತಿಯ ಪುಂಜಾಲಕಟ್ಟೆ ಕಟ್ಟೆ ಬಸವನಗುಡಿ ಎಂಬಲ್ಲಿ ಜ.9 ರಂದು 14250 ರೂ ಹಣದ ಪರ್ಸ್ ಒಂದು ಕೆದಿಲ ನಿವಾಸಿ ಜಯಾನಂದ ಅವರಿಗೆ
ಬಿದ್ದು ಸಿಕ್ಕಿತ್ತು.
ಜಯಾನಂದ ಅವರು ಹಣದ ಪರ್ಸ್ ನ್ನು ಪುಂಜಾಲಕಟ್ಟೆ ಪೊಲೀಸ್ ಠಾಣೆಗೆ ನೀಡಿ ಮಾನವೀಯತೆ ಮೆರೆದಿದ್ದರು.
ಈ ಬಗ್ಗೆ ಸಾಮಾಜಿಕ ಜಾಲತಾಣದ ಮೂಲಕ ಸಂದೇಶಗಳನ್ನು ರವಾನಿಸಲಾಗಿತ್ತು.
ಹಣ ಕಳೆದುಕೊಂಡ ವರು ಸೂಕ್ತ ದಾಖಲೆಗಳ ಬರುವಂತೆಯೂ ತಿಳಿಸಲಾಗಿತ್ತು.
ಮಾಲಾಡಿ ನಿವಾಸಿ ಲಕ್ಷ್ಮಣ ಅವರು ಹಣವನ್ನು ಕಳೆದುಕೊಂಡಿದ್ದು ಸಾಮಾಜಿಕ ಜಾಲತಾಣದ ಸಂದೇಶವನ್ನು ನೋಡಿ ಇಂದು ಜ._14 ರಂದು ಪುಂಜಾಲಕಟ್ಟೆ ಪೊಲೀಸ್ ಠಾಣೆ ಗೆ ಆಗಮಿಸಿ ಎಸ್.ಐ.ಸೌಮ್ಯ ಅವರ ಸಮಕ್ಷಮದಲ್ಲಿ ಹಣ ಪಡೆದುಕೊಂಡರು.
ಬಿದ್ದು ಸಿಕ್ಕಿದ ಹಣವನ್ನು ವಾಪಸು ಹಣ ಕಳೆದುಕೊಂಡವರಿಗೆ ಸಿಗುವಂತೆ ಮಾಡಿ ಮಾನವೀಯತೆ ಮೆರೆದ ಜಯಾನಂದ ಅವರಿಗೆ ಪುಂಜಾಲಕಟ್ಟೆ ಪೊಲೀಸರು ಅಭಿನಂದನೆ ಸಲ್ಲಿಸಿದರು.

More from the blog

ಆಯತಪ್ಪಿ ಬಾವಿಗೆ‌ ಬಿದ್ದ ಮಹಿಳೆ… ಅಗ್ನಿಶಾಮಕ ಸಿಬ್ಬಂದಿಗಳಿಂದ ರಕ್ಷಣೆ

ಮಂಗಳೂರು: ಬಾವಿಯಿಂದ ನೀರು ಸೇದುತ್ತಿದ್ದಾಗ ಆಯತಪ್ಪಿ ಬಾವಿಗೆ ಬಿದ್ದ ಮಹಿಳೆಯೋರ್ವರನ್ನು ಗುರುವಾರ ಕದ್ರಿ ಅಗ್ನಿಶಾಮಕ ಠಾಣೆಯವರು ರಕ್ಷಿಸಿದ್ದಾರೆ ಬಿಕ್ಕರ್ನಕಟ್ಟೆ ಸಮೀಪದ ನಿವಾಸಿ ಟ್ರೆಸ್ಸಿ ಡಿಸೋಜಾ ಅಗ್ನಿಶಾಮಕ ದಳದ ಸಿಬ್ಬಂದಿಯಿಂದ ರಕ್ಷಿಸಲ್ಪಟ್ಟ ಮಹಿಳೆ. ಸಂಜೆ 5 ಗಂಟೆ...

ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನ ವಾರ್ಷಿಕ ಜಾತ್ರೆ..ಮಹಾರಥೋತ್ಸವ ಕಣ್ಣುಂಬಿಕೊಂಡ ಸಾವಿರಾರು ಭಕ್ತರು

ಬಂಟ್ವಾಳ: ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರೆಯಲ್ಲಿ ಎ. ೧೧ರಂದು ಸಂಜೆ ರಥೋತ್ಸವ ನಡೆಯಿತು. ಜಾತ್ರೆಯಲ್ಲಿ ಸಹಸ್ರಾರು ಭಕ್ತರು ಪಾಲ್ಗೊಂಡಿದ್ದರು. ಮಹಾಪೂಜೆಯ ಬಳಿಕ ದೇವರು ರಥಾರೋಹಣಗೊಂಡು ಸಾಂಕೇತಿಕವಾಗಿ ರಥವನ್ನು ಎಳೆಯಲಾಯಿತು. ಮಧ್ಯಾಹ್ನ ರಥಕ್ಕೆ...

ಬಂಟ್ವಾಳದ ಬಡಗಕಜೆಕಾರು, ತೆಂಕಕಜೆಕಾರು ಗ್ರಾಮದಲ್ಲಿ ಮತದಾರರ ಮನೆಗೆ ಭೇಟಿ ನೀಡಿ ಮತಯಾಚನೆ ನಡೆಸಿದ ಶಾಸಕ ರಾಜೇಶ್ ನಾಯ್ಕ್

ಲೋಕ ಸಭಾ ಚುನಾವಣೆಯ ಹಿನ್ನಲೆಯಲ್ಲಿ ಕ್ಯಾ.ಬ್ರಿಜೇಶ್ ಚೌಟ ಅವರ ಗೆಲುವಿಗಾಗಿ "ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರ ಗ್ರಾಮ,ಮನೆ,ಮನ ಸಂಪರ್ಕ ಅಭಿಯಾನ"ದ ಅಂಗವಾಗಿ ಬಂಟ್ವಾಳದ ಬಡಗಕಜೆಕಾರು, ತೆಂಕಕಜೆಕಾರು ಗ್ರಾಮದಲ್ಲಿ ಮತದಾರರ ಮನೆಗೆ...

ಲೋಕಸಭಾ ಚುನಾವಣೆಯ ಹಿನ್ನೆಲೆ : ಚಾರ್ಮಾಡಿಯ ಮೂವರು ಗಡಿಪಾರು

ಬೆಳ್ತಂಗಡಿ: ಚುನಾವಣ ಸಂದರ್ಭದಲ್ಲಿ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವ ಹಾಗೂ ಕೋಮು ಗಲಭೆಗಳಲ್ಲಿ ಭಾಗವಹಿಸುವ ಸಾಧ್ಯತೆ ಇರುವ ಕಾರಣ ಮೂವರು ರೌಡಿಶೀಟರ್‌ಗಳನ್ನು ಧರ್ಮಸ್ಥಳ ಪೊಲೀಸರು ಗಡಿಪಾರು ಮಾಡಿದ್ದಾರೆ. ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಗ್ರಾಮದ ನಿವಾಸಿಗಳಾದ...