ಬಂಟ್ವಾಳ, ಜ. ೧೦: ಬಂಟ್ವಾಳ ಪುರಸಭೆ ವತಿಯಿಂದ ಶೇ. ೨೪.೧೦ ಯೋಜನೆಯಡಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಬಂಟ್ವಾಳ ಪುರಸಭೆ ವ್ಯಾಪ್ತಿಯ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಣಾ ಕಾರ್ಯಕ್ರಮ ಶುಕ್ರವಾರ ಬಿ.ಸಿ.ರೋಡ್‌ನಲ್ಲಿರುವ ಶಾಸಕರ ಕಚೇರಿಯಲ್ಲಿ ನಡೆಯಿತು.
ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿಗುತ್ತು ಅವರು ಪುರಸಭಾ ವ್ಯಾಪ್ತಿಯ ೪೩ ವಿದ್ಯಾರ್ಥಿಗಳಿಗೆ ಮತ್ತು ವಿದ್ಯಾಸಂಸ್ಥೆಯ ಪ್ರಾಂಶುಪಾಲರಿಗೆ ೨.೬೪ ಲಕ್ಷ ರೂ. ಮೊತ್ತದ ಚೆಕ್ ಅನ್ನು ಹಸ್ತಾತರಿಸಿದರು. ಮನೆ ದುರಸ್ಥಿಗಾಗಿ ಸಹಾಯಧನವನ್ನು ಇದೇ ವೇಳೆ ವಿತರಿಸಲಾಯಿತು.
ಈ ಸಂಧರ್ಭದಲ್ಲಿ ಪುರಸಭಾ ಮುಖ್ಯಾಧಿಕಾರಿ ಲೀನಾ ಬ್ರಿಟ್ಟೊ, ಸಮುದಾಯ ಸಂಘಟನಾಧಿಕಾರಿ ಉಮಾವತಿ ಉಪಸ್ಥಿತರಿದ್ದರು.