Saturday, April 6, 2024

ಕಥೋಲಿಕ್ ಮಹಾ ಸಮಾವೇಶ. ಜ.2: ಕಚೇರಿ ಉದ್ಘಾಟನೆ

ಬಂಟ್ವಾಳ: ಕಥೋಲಿಕ್ ಸಭಾ ಮಂಗಳೂರು ಪ್ರದೇಶ ಇದರ ಆಶ್ರಯದಲ್ಲಿ ಫೆಬ್ರವರಿ 2 ರಂದು ಮಡಂತ್ಯಾರು ಚರ್ಚ್ ಮೈದಾನದಲ್ಲಿ ನಡೆಯಲಿರುವ ಕಥೋಲಿಕ್ ಮಹಾ ಸಮಾವೇಶದ ಪೂರ್ವಭಾವಿ ಯಾಗಿ ಸಮಾವೇಶದ ಕಚೇರಿ ಉದ್ಘಾಟನಾ ಸಮಾರಂಭ ಜನವರಿ 2ರಂದು ಪೂರ್ವಾಹ್ನ 10 ಗಂಟೆಗೆ ಮಡಂತ್ಯಾರು ಚರ್ಚ್ ಬಿಲ್ಡಿಂಗ್ ನಲ್ಲಿ ನಡೆಯಲಿದೆ.

ಮಂಗಳೂರು ಧರ್ಮಪ್ರಾಂತ್ಯದ ಶ್ರೇಷ್ಠ ಧರ್ಮಗುರು ಅತೀ ವಂದನೀಯ ಮ್ಯಾಕ್ಸಿಂ ನೊರೋನ್ಹಾ ಉದ್ಘಾಟನೆ ನೆರವೇರಿಸುವರು. ಬೆಳ್ತಂಗಡಿ ವಲಯದ ಪ್ರಧಾನ ಧರ್ಮಗುರುಗಳಾದ ಅತೀ ವಂದನೀಯ ಬೊನವೆಂಚರ್ ನಜರೆತ್, ಮಡಂತ್ಯಾರು ಸೇಕ್ರೆಡ್ ಹಾರ್ಟ್ ಚರ್ಚಿನ ಧರ್ಮಗುರುಗಳಾದ ವಂದನೀಯ ಬಾಜಿಲ್ ವಾಸ್, ಲೈಟಿ ಕಮಿಷನ್ ಬೆಳ್ತಂಗಡಿ ಇದರ ನಿರ್ದೇಶಕರಾದ ವಂದನೀಯ ಬಿನೊಯ್ ಜೋಸೆಫ್, ಮಂಗಳೂರು ಧರ್ಮಪ್ರಾಂತ್ಯದ ಐಸಿವೈಎಂ ನಿರ್ದೇಶಕರಾದ ವಂದನೀಯ ರೊನಾಲ್ಡ್‌ ಡಿಸೋಜ , ಸೂರಿಕುಮೇರು ಚರ್ಚಿನ ಉಪಾಧ್ಯಕ್ಷರಾದ ರೋಷನ್ ಬೊನಿಫಾಸ್ ಮಾರ್ಟಿಸ್ ಹಾಗೂ ಇತರ ಗಣ್ಯರು ಭಾಗವಹಿಸಲಿದ್ದಾರೆ ಎಂದು ಮಂಗಳೂರು ಪ್ರದೇಶದ ಕಥೋಲಿಕ್ ಸಭಾದ ಅಧ್ಯಕ್ಷ ಪಾವ್ಲ್ ರೊಲ್ಫಿ ಡಿಕೋಸ್ತಾ ತಿಳಿಸಿದ್ದಾರೆ.

More from the blog

ದಿನದಿಂದ ದಿನಕ್ಕೆ ಏರುತ್ತಿದೆ ತಾಪಮಾನ : ಕಡಬ, ಅಜೆಕಾರಿನಲ್ಲಿ ದಾಖಲೆಯ ಉಷ್ಣಾಂಶ

ಮಂಗಳೂರು: ಮುಂದಿನ ಎರಡು ದಿನಗಳ ಕಾಲ ಬಿಸಿಲಿನ ಶಾಕ ಮತ್ತಷ್ಟು ಹೆಚ್ಚಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ ಕರಾವಳಿ ಭಾಗದಲ್ಲಿ ತಾಪಮಾನ ದಿನದಿಂದ ದಿನಕ್ಕೆ ಏರಿಕೆ ಕಾಣುತ್ತಿದ್ದು, ಎ. 4ರಿಂದ 5ರ...

ಕಡಬ: ಚೇರು ಪ್ರದೇಶದ ಮನೆಗೆ ಶಂಕಿತರ ಭೇಟಿ : ಊಟ ಮಾಡಿ, ಸಾಮಗ್ರಿ ಪಡೆದು ತೆರಳಿದ ಶಂಕಿತರು

ಸುಬ್ರಹ್ಮಣ್ಯ: ಕಡಬ ಪೊಲೀಸ್‌ ಠಾಣಾ ವ್ಯಾಪ್ತಿಯ ಮನೆಯೊಂದಕ್ಕೆ ಗುರುವಾರ ರಾತ್ರಿ ವೇಳೆ ಶಂಕಿತರ ತಂಡ ಆಗಮಿಸಿ ಊಟ, ಮಾಡಿ ದಿನಸಿ ಸಾಮಾಗ್ರಿಗಳನ್ನು ಪಡೆದು ತೆರಳಿರುವ ವಿಷಯ ಶುಕ್ರವಾರ ಸಂಜೆ ವೇಳೆಗೆ ಬೆಳಕಿಗೆ ಬಂದಿದೆ. ತಾಲೂಕಿನ...

ಮತದಾನ ಜಾಗೃತಿ ಅಂಗವಾಗಿ ಸೆಲ್ಫಿ, ಸಹಿ ಅಭಿಯಾನಕ್ಕೆ ಚಾಲನೆ

ಮತದಾರರರಲ್ಲಿ ಮತದಾನ ಜಾಗೃತಿ ಮೂಡಿಸುವ ಸಲುವಾಗಿ ಬಂಟ್ವಾಳ ತಾಲೂಕು ಪಂಚಾಯತ್, ತಾಲೂಕು ಆಡಳಿತ ಮತ್ತು ತಾಲೂಕು ಸ್ವೀಪ್ ಸಮಿತಿ ವತಿಯಿಂದ ಎ‌.5ರಂದು ಸೆಲ್ಫಿ, ಸಹಿ ಅಭಿಯಾನಕ್ಕೆ ಚಾಲನೆ ನೀಡಲಾಯಿತು. ...

ಬಂಟ್ವಾಳ ವಿಧಾನಸಭಾ ಕ್ಷೇತ್ರದ ಪ್ರಮುಖರ ಮನೆಗೆ ಲೋಕಸಭಾ ಅಭ್ಯರ್ಥಿ ಬ್ರಿಜೇಶ್ ಚೌಟ ಭೇಟಿ

ಬಂಟ್ವಾಳ: ರಾಷ್ಟ್ರದ ಹಿತಾಸಕ್ತಿಯ ದೃಷ್ಟಿಯಿಂದ, ವಿಕಸಿತ ಭಾರತದ ಸಂಕಲ್ಪಕ್ಕೆ ಮತ್ತೊಮ್ಮೆ ಮೋದಿಯವರು ಪ್ರಧಾನಿಯಾಗಬೇಕು, ಈ ನಿಟ್ಟಿನಲ್ಲಿ ರಾಜ್ಯದ ಪ್ರತಿಯೊಂದು ಕ್ಷೇತ್ರದಲ್ಲಿ ಬಿಜೆಪಿಯ ಅಭ್ಯರ್ಥಿ ಗೆಲುವು ಸಾಧಿಸಬೇಕಾಗಿದೆ ಎಂದು ಮಂಗಳೂರು ಲೋಕಸಭಾ ಅಭ್ಯರ್ಥಿ ಬ್ರಿಜೇಶ್...