Sunday, April 7, 2024

ಸರಕಾರಿ ಶಾಲೆಯಲ್ಲಿ ಶಿಸ್ತಿನ ಪಾಠ : ರತ್ನಾವತಿ

ಬಂಟ್ವಾಳ: ಸರಕಾರಿ ಪ್ರೌಢ ಶಾಲೆ ಗೋಳ್ತಮಜಲು ಕಲ್ಲಡ್ಕ ಇದರ ಶಾಲಾ ವಾರ್ಷಿಕೋತ್ಸವ ಮತ್ತು “ಬೆಳ್ಳಿ ಹಬ್ಬ 20-20” ವರ್ಷದ ಉದ್ಘಾಟನೆ ನಡೆಯಿತು.
ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ರತ್ನಾವತಿ  ಅವರು ಶಾಲಾ ವಾರ್ಷಿಕೋತ್ಸವ ಹಾಗೂ ಈ ಶಾಲೆ ಆರಂಭವಾಗಿ 24 ವರ್ಷ ಪೂರೈಸಿ 25ನೇ ವರ್ಷಕ್ಕೆ ಕಾಲಿಡುವ ಸಂದರ್ಭ  ಬೆಳ್ಳಿ ಹಬ್ಬ ವರ್ಷ 2020ರ ಲೊಗೋ ಉದ್ಘಾಟನೆ ಕಾರ್ಯಕ್ರಮದ ಸಭಾ ಕಾರ್ಯಕ್ರಮವನ್ನು
ಉದ್ಘಾಟಿಸಿ, ಮಾತನಾಡಿ, ಸರಕಾರಿ ಶಾಲೆಯಲ್ಲಿ ಕಲಿತ ವಿದ್ಯಾರ್ಥಿಗಳು ದೈಹಿಕವಾಗಿ, ಮಾನಸಿಕವಾಗಿ, ಶೈಕ್ಷಣಿಕವಾಗಿ, ಬಲಿಷ್ಟರಾಗಿದ್ದಾರೆ. ಪಾಠದ ಜೊತೆಗೆ ಶಿಸ್ತಿನ ಜೀವನದ ಪಾಠವನ್ನು ಸರಕಾರಿ ಶಾಲೆ ಕಲಿಸಿಕೊಡುತ್ತದೆ. ಪೋಷಕರ ಅಂಕದ ಜೊತೆಗೆ ಮಗುವಿನ ಸರ್ವಾಂಗೀಣ ಅಭಿವೃದ್ಧಿಯ ಬಗ್ಗೆಯೂ ಚಿಂತನೆ ನಡೆಸಬೇಕಾಗಿದೆ. ಉತ್ತಮ ಶಿಕ್ಷಣ ಉಚಿತವಾಗಿ ನೀಡುವ ಸರಕಾರಿ ಶಾಲೆಯ ಉಳಿವಿಗಾಗಿ ಗ್ರಾಮದ ಹಿರಿಯರ ಸೂಕ್ತ ಸಲಹೆ ಸೂಚನೆಯ ಜೊತೆಗೆ ಪೋಷಕರ ಸಹಕಾರ ಅತೀ ಅಗತ್ಯ ಎಂದು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಜಿ.ಪಂ.ಸದಸ್ಯೆ ಕಮಲಾಕ್ಷಿ ಕೆ.ಪೂಜಾರಿ, ಕುಡಿಯುವ ನೀರಿನ ಘಟಕವನ್ನು ಉದ್ಘಾಟಿಸಿ, ಮಾತನಾಡಿದ ಅವರು ಸರಕಾರಿ ಶಾಲೆ ಉಳಿದು ಬೆಳೆಯಲು ಶಿಕ್ಷಕರು, ಎಸ್.ಡಿ.ಎಂ.ಸಿ.ಹಾಗೂ ಪೋಷಕರ ಸಹಭಾಗಿತ್ವ ಬಹಳ ಪ್ರಾಮುಖ್ಯತೆ ಪಡೆಯುತ್ತದೆ ಎಂದರು. ಇಂತಹ ಶಾಲೆಯಲ್ಲಿ  ಕಲಿಯುವ ವಿದ್ಯಾರ್ಥಿಗಳು ಭಾಗ್ಯವಂತರು. ಮುಚ್ಚುವ ಹಂತದಲ್ಲಿದ್ದ ಈ ಶಾಲೆಯನ್ನು ಪ್ರಗತಿಯ ಹಂತದಲ್ಲಿ ಮುನ್ನಡೆಸುವ, ಸರಕಾರದ ಸವಲತ್ತಿನ ಜೊತೆಗೆ ಸಂಘ ಸಂಸ್ಥೆಗಳು, ಗ್ರಾಮದ ಪ್ರಮುಖರು ಎಸ್.ಡಿ.ಎಂ. ಸೇರಿ ಶಾಲೆಯ ಅಭಿವೃದ್ಧಿಗಾಗಿ ಶ್ರಮಿಸುತ್ತಿರುವುದು ಶ್ಲಾಘನೀಯ ಎಂದು ಹೇಳಿದರು.
ಶಾಲಾ ಮಕ್ಕಳು ರಚಿಸಿದ ವಿಶೇಷ ವಾರ್ಷಿಕ ಸಂಚಿಕೆ “ಮಜಲ್ಮ್ ಣಿಹಾರ”ವನ್ನು ಶಾಲಾ ಕಾರ್ಯಧ್ಯಕ್ಷ ಚಂದ್ರಶೇಖರ್ ಅವರು
ಬಿಡುಗಡೆ ಗೊಳಿಸಿದರು.
ಸ್ಥಳದಾನಿ ಯೂಸೂಫ್ ಅವರು ಬೆಳ್ಳಿಹಬ್ಬ ಕಾರ್ಯಕ್ರಮದ ಲೋಗೋ ಅನಾವರಣ ಗೊಳಿಸಿದರು.
ವೇದಿಕೆಯಲ್ಲಿ ತಾ.ಪಂ.ಸದಸ್ಯ ಮಹಾಬಲ ಶೆಟ್ಟಿ, ಗ್ರಾ.ಪಂ. ಸದಸ್ಯರಾದ ಮೋನಪ್ಪ ದೇವಸ್ಯ, ರಾಜೇಶ್ ಕೊಟ್ಟಾರಿ, ಜಯಶ್ರೀ, ಜಯಂತಿ,  ಹಿರಿಯರಾದ ಸುಂದರ ಶೆಟ್ಟಿ, ನಾರಾಯಣ ಪೂಜಾರಿ, ಚಿ.ರಮೇಶ್, ನವೀನ್ ರಾಜ್ , ಸೀತಾರಾಮ ಮಾಸ್ಟರ್‌,  ಶಾಲಾಭಿವೃದ್ದಿ ಸದಸ್ಯರಾದ ಕೃಷ್ಣಪ್ಪ ಪೂಜಾರಿ, ನಾಗೇಶ್ ಪೂಜಾರಿ ನೆಕ್ಕರಾಜೆ, ನಾರಾಯಣ, ಮುಖ್ಯೋಪಾಧ್ಯಾಯಿನಿ ಸುಜಾತ ಕಲ್ಲಡ್ಕ, ರೈತ ಸೇವಾ ಸಹಕಾರಿ ಬ್ಯಾಂಕ್ ನಿರ್ದೇಶಕಿ ವಿಜಯ ಮತ್ತಿತರರು ಉಪಸ್ಥಿತರಿದ್ದರು.
ಶಿಕ್ಷಕಿ ಸುಜಾತ ವಾರ್ಷಿಕ ವರದಿ ವಾಚಿಸಿದರು. ಕಾರ್ಯಧ್ಯಕ್ಷ ಚಂದ್ರಶೇಖರ್ ಸ್ವಾಗತಿಸಿ, ನಳಿನಿ ವಂದಿಸಿದರು. ಶಿಕ್ಷಕ ಶಂಕರ್
ಕಾರ್ಯಕ್ರಮ ನಿರೂಪಿಸಿದರು.
ಸಭಾ ಕಾರ್ಯಕ್ರಮದಲ್ಲಿ ವಾರ್ಷಿಕೋತ್ಸವ ಅಂಗವಾಗಿ ಏರ್ಪಡಿಸಿದ್ದ ಚಟುವಟಿಕೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ ನಡೆಯಿತು. ಬಳಿಕ ಶಾಲಾ ಮಕ್ಕಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.

More from the blog

ಬಂಟ್ವಾಳ: ನಿಯಮ ಮೀರಿ ಚಾಲನೆ ಮಾಡಿ ಪೋಲೀಸರ ಕೈಗೆ ಸಿಕ್ಕಿಬಿದ್ದರೆ ದಂಡ ಗ್ಯಾರಂಟಿ….

ಬಂಟ್ವಾಳ: ರಸ್ತೆಯಲ್ಲಿ ಟ್ರಾಫಿಕ್ ಪೋಲೀಸರು ದಂಡ ವಸೂಲಿ ಮಾಡುವ ವೇಳೆ ಸುಳ್ಳು ಹೇಳಿಬಚಾವಾಗಲು ಸಾಧ್ಯವಿಲ್ಲ, ಜೊತೆಗೆ ಅಸಭ್ಯ ವರ್ತನೆ ಮಾಡಿದರೆ ಜೋಕೆ, ಅವರ ಶರೀರದಲ್ಲಿ ಕಣ್ಗಾವಲು ಕ್ಯಾಮರಾ ಅಳವಡಿಸಿಲಾಗಿದ್ದು, ಸೂಕ್ಷ್ಮವಾಗಿ ಎಲ್ಲವನ್ನು ಸೆರೆ...

ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ : ಚೆಂಡಿನ ಗದ್ದೆಯಲ್ಲಿ ಪ್ರಥಮ ಚೆಂಡು

ಇತಿಹಾಸ ಪ್ರಸಿದ್ಧ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವದ ಅಂಗವಾಗಿ ದೇವಳದ ಚೆಂಡಿನ ಗದ್ದೆಯಲ್ಲಿ ಇಂದು ಪ್ರಥಮ ಚೆಂಡು ನಡೆಯಿತು. ‌ ಇವತ್ತಿನಿಂದ ಮುಂದಿನ ಐದು ದಿನಗಳ ಕಾಲ ಇಲ್ಲಿ ಚೆಂಡು...

ಏಪ್ರಿಲ್ 7ರಂದು ಕರ್ನಾಟಕ ಜಾನಪದ ಪರಿಷತ್ತು ದ.ಕ.ಜಿಲ್ಲಾ ಬಂಟ್ವಾಳ ತಾಲೂಕು ಘಟಕದ ಉದ್ಘಾಟನೆ ಹಾಗೂ ಪದಗ್ರಹಣ ಸಮಾರಂಭ

ಬಂಟ್ವಾಳ: ಏಪ್ರಿಲ್ 7ರಂದು ಅಪರಾಹ್ನ 3 ಗಂಟೆಗೆ ಬಿ.ಸಿ.ರೋಡು ರಂಗೋಲಿ ಸಭಾಂಗಣದಲ್ಲಿ ಕರ್ನಾಟಕ ಜಾನಪದ ಪರಿಷತ್ತು ದ.ಕ.ಜಿಲ್ಲಾ ಬಂಟ್ವಾಳ ತಾಲೂಕು ಘಟಕದ ಉದ್ಘಾಟನೆ ಹಾಗೂ ಪದಗ್ರಹಣ ಸಮಾರಂಭ ನಡೆಯಲಿದೆ ಎಂದು ತಾಲೂಕು ಘಟಕದ...

ದ್ವಿಚಕ್ರ ವಾಹನಕ್ಕೆ ರಿಕ್ಷಾ ಡಿಕ್ಕಿ : ಸಹಸವಾರ ಸ್ಥಳದಲ್ಲೇ ಮೃತ್ಯು

ಬಂಟ್ವಾಳ: ರಿಕ್ಷಾ ಡಿಕ್ಕಿಯಾಗಿ ದ್ವಿಚಕ್ರ ವಾಹನದಲ್ಲಿ ಸಂಚಾರ ಮಾಡುತ್ತಿದ್ದ ಸಹಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ನರಿಕೊಂಬು ಎಂಬಲ್ಲಿ ನಡೆದಿದೆ. ನರಿಕೊಂಬು ನಿವಾಸಿ ನೀಲಪ್ಪ ಪೂಜಾರಿ ಅವರ ಮಗ ಪವನ್ ( 17) ಮೃತಪಟ್ಟ ಬಾಲಕ. ಮನೆಯಿಂದ...