Sunday, April 14, 2024

ಕೆಳಹಂತದ ಮೂಲಕ ಬದಲಾವಣೆ ಸಾಧ್ಯವಾದಾಗ ದೇಶದ ಅಭಿವೃದ್ಧಿ : ಸಿಂಧೂ ರೂಪೇಶ್

ಸುಳ್ಯ:ಕೆಳ ಹಂತಗಳಲ್ಲಿ ಬದಲಾವಣೆಗಳು ಆಗಬೇಕು. ಒಂದೊಂದು ಗ್ರಾಮಗಳು ಅಭಿವೃದ್ಧಿಗೊಂಡಾಗ ದೇಶದ ಅಭಿವೃದ್ಧಿ ಸಾಧ್ಯ ಎಂದು ಜಿಲ್ಲಾಧಿಕಾರಿ ಶ್ರೀಮತಿ ಸಿಂಧೂ ರೂಪೇಶ್ ಹೇಳಿದ್ದಾರೆ.

ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಇದರ ನೇತೃತ್ವದಲ್ಲಿ ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗದಲ್ಲಿ ದ.ಕ.ಜಿಲ್ಲಾ ಆಡಳಿತ, ಪೊಲೀಸ್ ಇಲಾಖೆ, ಜಿಲ್ಲಾ ಪಂಚಾಯತ್, ಸುಳ್ಯ ತಾಲೂಕು ಪಂಚಾಯತ್ ಹಾಗೂ ಮಡಪ್ಪಾಡಿ ಗ್ರಾಮ ಪಂಚಾಯತ್ ಸಹಭಾಗಿತ್ವದಲ್ಲಿ ನಡೆದ ಪತ್ರಕರ್ತರ ಗ್ರಾಮವಾಸ್ತವ್ಯ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಜನಸಾಮಾನ್ಯರು ಪತ್ರಕರ್ತರಲ್ಲಿ ಎಲ್ಲ ಸಮಸ್ಯೆಗಳನ್ನು ಹೇಳಿಕೊಳ್ಳುತ್ತಾರೆ. ಹೀಗಾಗಿ ಅವರ ಮೂಲಕ ಇಂಥ ಕಾರ್ಯಕ್ರಮಗಳು ನಡೆಯುತ್ತಿರುವುದು ಔಚಿತ್ಯಪೂರ್ಣ ಎಂದು ಅವರು ಹೇಳಿದರು.

ಮಂಗಳೂರಿನಲ್ಲಿ ನಡೆದ ಘಟನೆಯ ಸಂದರ್ಭ ಮಾಧ್ಯಮಗಳು ಜವಾಬ್ದಾರಿ ಮಾಧ್ಯಮವಾಗಿ ಕೆಲಸ ಮಾಡಿದ್ದೀರಿ ಎಂದು ಅವರು ಪ್ರಶಂಸಿಸಿದರು.

ವೈದ್ಯಕೀಯ ಶಿಬಿರವನ್ನು ಸುಳ್ಯ ಶಾಸಕ ಎಸ್.ಅಂಗಾರ ಉದ್ಘಾಟಿಸಿದರು. ಕುತ್ಲೂರಿನಲ್ಲಿ ನಡೆದ ಗ್ರಾಮ ವಾಸ್ತವ್ಯದ ಮಾಹಿತಿ ಪತ್ರವನ್ನೂ ಅವರು ಬಿಡುಗಡೆಗೊಳಿಸಿದರು.

 

ಮೂಲಭೂತ ಅಗತ್ಯಗಳಿಗೆ ಸಮರ್ಪಕವಾಗಿ ಯೋಜನೆಗಳನ್ನು ಮಾಡದಿರುವುದೇ ಕೆಲಸ ಪೂರ್ಣಗೊಳ್ಳದಿರಲು ಕಾರಣ. ಗ್ರಾಮಾಭಿವೃದ್ದಿಯ ಮೂಲಕ ದೇಶದ ಅಭಿವೃದ್ದಿ ಸಾಧ್ಯವಾಗಲಿ ಎಂದು ಆಶಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ವಹಿಸಿದ್ದರು. ಗ್ರಾಮ ವಾಸ್ತವ್ಯದಲ್ಲಿ ಬಂದ ಮನವಿಗಳನ್ನು ವಿಶೇಷ ಪ್ರಕರಣ ಎಂದು ಭಾವಿಸಿ ಕಾಲಮಿತಿಯಲ್ಲಿ ಪೂರ್ಣಗೊಳಿಸಲು ಅಧಿಕಾರಿಗಳು ಆಸ್ಥೆ ವಹಿಸಬೇಕು ಎಂದು ಅವರು ಹೇಳಿದರು.

ಜಿ.ಪಂ. ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಸೆಲ್ವಮಣಿ, ತಾಲೂಕು ಪಂಚಾಯತ್ ಅಧ್ಯಕ್ಷ ಚನಿಯ ಕಲ್ತಡ್ಕ, ಮಡಪ್ಪಾಡಿ ಗ್ರಾ.ಪಂ. ಅಧ್ಯಕ್ಷೆ ಶಕುಂತಲಾ ಕೇವಳ, ಉಪಾಧ್ಯಕ್ಷ ಎಂಟಿ. ಹೊನ್ನಪ್ಪ, ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷ ನಿತ್ಯಾನಂದ ಮುಂಡೋಡಿ, ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ವಿಕ್ರಂ ಅಮ್ಟೆ, ಸಹಾಯಕ ಕಮೀಷನರ್ ಡಾ.ಯತೀಶ್ ಉಳ್ಳಾಲ್, ತಹಶೀಲ್ದಾರ್ ಎನ್.ಎ.ಕುಂಞಿ ಮಹಮ್ಮದ್, ಜಿ. ಪಂ.ಸದಸ್ಯರಾದ ಆಶಾ ತಿಮ್ಮಪ್ಪ, ಪುಷ್ಪಾವತಿ ಬಾಳಿಲ, ಎಸ್.ಎನ್.ಮನ್ಮಥ, ತಾ.ಪಂ.ಉಪಾಧ್ಯಕ್ಷೆ ಶುಭದಾ ರೈ, ತಾ.ಪಂ.ಸದಸ್ಯ ಉದಯಕುಮಾರ್ ಕೊಪ್ಪಡ್ಕ, ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಭವಾನಿಶಂಕರ , ಜಿಲ್ಲಾ ಆರೋಗ್ಯಾಧಿಕಾರಿ ಡಾ.ರಾಮಕೃಷ್ಣ, ಎ.ಪಿ.ಎಂ.ಸಿ.‌ ನಿರ್ದೇಶಕ ವಿನಯಕುಮಾರ್ ಮುಳುಗಾಡು, ಮಡಪ್ಪಾಡಿ ಸೊಸೈಟಿ ಅಧ್ಯಕ್ಷ ಪಿ.ಸಿ.ಜಯರಾಂ ಸುಳ್ಯ ತಾಲೂಕು‌ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಮುರಳೀಧರ ಅಡ್ಡನಪಾರೆ, ಕಾರ್ಯದರ್ಶಿ ಗಿರೀಶ್ ಅಡ್ಪಂಗಾಯ ಮೊದಲಾದವರು ಉಪಸ್ಥಿತರಿದ್ದರು. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಕಾರ್ಯಕಾರಿಣಿ ಸಮಿತಿ ಸದಸ್ಯ ಗಂಗಾಧರ ಕಲ್ಲಪಳ್ಳಿ ಸ್ವಾಗತಿಸಿದರು.

ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ಆಶಯ ಭಾಷಣ ಮಾಡಿದರು. ಈ ಕಾರ್ಯಕ್ರಮದ ಮೂಲಕ ಮಡಪ್ಪಾಡಿಯಲ್ಲಿ ಅಂತರ್ಜಲ ಸಂರಕ್ಷಣೆ, ಪ್ಲಾಸ್ಟಿಕ್ ಮುಕ್ತ ಗ್ರಾಮವನ್ನಾಗಿ ಮಾಡುವ ಯೋಜನೆ ಇದೆ ಎಂದು ಅವರು ಹೇಳಿದರು.

ಜಿಲ್ಲಾ ಕಾರ್ಯಕಾರಣಿ ಸದಸ್ಯ ಲೋಕೇಶ್ ಪೆರ್ಲಂಪಾಡಿ ಕಾರ್ಯಕ್ರಮ ನಿರೂಪಿಸಿದರು. ಜಿಲ್ಲಾ ಪತ್ರಕರ್ತರ ಸಂಘದ ಸಂಘದ ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ ವಂದಿಸಿದರು.

ಕಳೆದ ಬಾರಿ ಗ್ರಾಮವಾಸ್ತವ್ಯ ನಡೆದ ಕುತ್ಲೂರಿನ ಶಾಲಾ ಎಸ್.ಡಿ.ಎಂ.ಸಿ.ಅಧ್ಯಕ್ಷ ರಾಮಚಂದ್ರ ಭಟ್, ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಮನೋಹರ ಬಳಂಜ ಅವರನ್ನು ಗೌರವಿಸಲಾಯಿತು. ರಾಮಚಂದ್ರ ಭಟ್ ಅನುಭವ ವ್ಯಕ್ತಪಡಿಸಿದರು.

More from the blog

ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ : ವಾರಸುದಾರರ ಪತ್ತೆಗೆ ಮನವಿ

ಬಂಟ್ವಾಳ: ಅಪರಿಚಿತ ವ್ಯಕ್ತಿಯೋರ್ವನ‌ ಮೃತದೇಹವೊಂದು ಸಜೀಪ ನಡು ಎಂಬಲ್ಲಿ ರಿಕ್ಷಾ ನಿಲ್ದಾಣದಲ್ಲಿ ಪತ್ತೆಯಾಗಿದೆ. ಸಜೀಪ ನಡು ಗ್ರಾಮದಲ್ಲಿ ನ ರಿಕ್ಷಾ ನಿಲ್ದಾಣದಲ್ಲಿ ಸುಮಾರು 45 ವರ್ಷದ ಗಂಡಸಿನ ಮೃತದೇಹ ಪತ್ತೆಯಾಗಿದ್ದು ಯಾವ ಕಾರಣದಿಂದ ಈತ...

ಮತದಾರರ ಜಾಗೃತಿ ಕಾರ್ಯಕ್ರಮ, ಕಾಲ್ನಡಿಗೆ ಜಾಥಾ ಹಾಗೂ ಬೀದಿನಾಟಕ

ತಾಲೂಕು ಪಂಚಾಯತ್‌ ಬಂಟ್ವಾಳ, ತಾಲೂಕು ಸ್ವೀಪ್‌ ಸಮಿತಿ, ಕಂದಾಯ ಇಲಾಖೆ, ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಆರೋಗ್ಯ ಇಲಾಖೆ, ಬಂಟ್ವಾಳ ಪುರಸಭೆ, ರಾಷ್ಟ್ರೀಯ ಸೇವಾ ಯೋಜನೆ, ಮತದಾರರ ಸಾಕ್ಷರತಾ...

ಕಾಸರಗೋಡು ಜಿಲ್ಲೆಯಲ್ಲಿ ರಾಜಕೀಯ ಲಾಭಕ್ಕಾಗಿ ಬ್ರಹ್ಮ ಶ್ರೀ ನಾರಾಯಣ ಗುರುಗಳ ಪೋಟೋ ಬಳಕೆ ಖಂಡನೀಯ-ಜಗದೀಶ್ ಕೊಯಿಲ

ಬಂಟ್ವಾಳ: ಕಾಸರಗೋಡು ಜಿಲ್ಲೆಯಲ್ಲಿ ರಾಜಕೀಯ ಲಾಭಕ್ಕಾಗಿ ಬ್ರಹ್ಮ ಶ್ರೀ ನಾರಾಯಣ ಗುರುಗಳ ಪೋಟೋ ಬಳಕೆ ಮಾಡಿದ್ದು ಖಂಡನೀಯ ಎಂದು ಜಗದೀಶ್ ಕೊಯಿಲ ತಿಳಿಸಿದ್ದಾರೆ. ಅವರು ಬಿಸಿರೋಡಿನ ಪ್ರೆಸ್ ಕ್ಲಬ್ ನಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ರಾಷ್ಟ್ರೀಯ...

ಕೆ.ಎಸ್.ಆರ್.ಟಿ.ಸಿ.ಬಸ್ ಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಬೈಕ್ : ಮೂವರಿಗೆ ಗಾಯ

ಬಂಟ್ವಾಳ: ಕೆ.ಎಸ್.ಆರ್.ಟಿ.ಸಿ.ಬಸ್ ಗೆ ಹಿಂಬದಿಯಿಂದ ಬೈಕ್ ಡಿಕ್ಕಿಯಾಗಿ ಬೈಕಿನಲ್ಲಿದ್ದ ಮೂವರು ಗಾಯಗೊಂಡ ಘಟನೆ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ತುಂಬೆ ಸಮೀಪದ ಕಡೆಗೋಳಿ ಎಂಬಲ್ಲಿ ನಡೆದಿದೆ. ಮಂಗಳೂರಿನಿಂದ ಬರುತ್ತಿದ್ದ ಕೆ.ಎಸ್.ಆರ್.ಟಿ‌.ಸಿ.ಬಸ್ ಗೆ ಹೆಲ್ಮೆಟ್ ಧರಿಸಿದೆ...