Thursday, April 11, 2024

ತುಂಬೆಯಲ್ಲಿ ರಕ್ಷಕ-ಶಿಕ್ಷಕ ಸಮಾವೇಶ ಮತ್ತು ಕ್ರೀಡಾಕೂಟ

ಬಂಟ್ವಾಳ: ರಕ್ಷಕ-ಶಿಕ್ಷಕ ಸಭೆ ಅಥವಾ ಸಮಾವೇಶವೆಂದರೆ ಅದೊಂದು ವ್ಯವಸ್ಥೆಯಾಗಿದೆ. ಮಕ್ಕಳು ಹುಟ್ಟಿ ಬೆಳೆಯುತ್ತಾ ತಂತಮ್ಮ ಮನೆಯಲ್ಲಿ ತಂದೆ-ತಾಯಂದಿರ, ಪೋಷಕರ ಜೊತೆಗೂಡಿ ಸಂಸ್ಕೃತಿಯನ್ನು ಕಲಿಯುತ್ತಾರೆ. ಅದೇ ಮಕ್ಕಳು ಸಮಾಜದಲ್ಲಿ ಇತರರ ಜೊತೆ ಸೇರಿ ಯಾವ ರೀತಿ ಬದುಕಬೇಕೆನ್ನುವ ಜೀವನ ಶಿಕ್ಷಣವನ್ನು ಶಾಲೆ-ಕಾಲೇಜಿನಲ್ಲಿ ಕಲಿಯುತ್ತಾರೆ. ಪೋಷಕರಾದವರೂ ಅಷ್ಟೇ; ತಮ್ಮ ಮಕ್ಕಳ ಕಲಿಕೆ-ನಡತೆಯನ್ನು ಸದಾ ಗಮನಿಸುತ್ತಿರಬೇಕು. ಇಲ್ಲವಾದರೆ ಅವರ ಬೆಳವಣಿಗೆ ಕುಂಠಿತವಾಗುತ್ತದೆ ಎಂದು ಸಹ್ಯಾದ್ರಿ ಶಿಕ್ಷಣ ಸಂಸ್ಥೆಯ ನಿರ್ದೇಶಕರೂ, ಉದ್ಯಮಿಗಳು ಆದ ಜಗನ್ನಾಥ ಚೌಟ ಹೇಳಿದರು.
ಅವರು ತುಂಬೆ ಕಾಲೇಜಿನ ಕ್ರೀಡಾಂಗಣದಲ್ಲಿ ತುಂಬೆ ಆಂಗ್ಲ ಮಾಧ್ಯಮ ಪ್ರೌಢಶಾಲೆ ಮತ್ತು ಪ್ರಾಥಮಿಕ ಶಾಲೆಯ ರಕ್ಷಕ-ಶಿಕ್ಷಕ ಸಮಾವೇಶದಲ್ಲಿ ರಕ್ಷಕ-ಶಿಕ್ಷಕರ ಕ್ರೀಡಾಕೂಟವನ್ನು ವಾಲಿಬಾಲ್‌ ಆಟವಾಡಿ ಉದ್ಘಾಟಿಸಿ ಮಾತನಾಡಿದರು.ಡಾ| ಅಮೀರ್‌ ಅಹ್ಮದ್‌ ತುಂಬೆ ಮಾತನಾಡಿ ಕ್ರೀಡಾಕೂಟಕ್ಕೆ ಶುಭ ಹಾರೈಸಿದರು.
ಸಂಘದ ಕ್ರೀಡಾಕೂಟ ಹಾಗೂ ಸನ್ಮಾನ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ತುಂಬೆ ಕಾಲೇಜಿನ ಪ್ರಾಂಶುಪಾಲ ಕೆ.ಎನ್. ಗಂಗಾಧರ ಆಳ್ವ ಮಾತನಾಡಿ, ಶಿಕ್ಷಕ-ರಕ್ಷಕರು ಒಟ್ಟು ಸೇರಿ ಕಾರ್ಯಪ್ರೌವೃತ್ತರಾದಾಗ ಶಿಕ್ಷಣ ಸಂಸ್ಥೆ ಸಾಧನೆಯನ್ನು ಮಾಡುತ್ತದೆ.ಇವತ್ತು ತುಂಬೆ ಸಂಸ್ಥೆಯ ರಕ್ಷಕ-ಶಿಕ್ಷಕ ಸಂಘವು ಸ್ವತಹ ಆಟೋಟ ಮುಂತಾದ ಕಾರ್ಯಕ್ರಮಗಳನ್ನು ಮಾಡುತ್ತ ವಿದ್ಯಾರ್ಥಿಗಳಿಗೆ ಪ್ರೇರಣೆಯಾಗುತ್ತಿರುವುದು ಅಭಿನಂದನಾರ್ಹ ಎಂದರು.ಇವತ್ತಿನ ವೇಗದ ಮತ್ತು ಯಾಂತ್ರಿಕ ಬದುಕಿನಲ್ಲಿ ವಿದ್ಯಾರ್ಥಿಗಳಿಗೆ ಹೆತ್ತವರು ಮತ್ತು ಪೋಷಕರು ಮಾಡೆಲ್‌ ಆಗಬೇಕಾದ ಅನಿವಾರ್ಯತೆ ಇದೆ ಎಂದರು.ಸಜೀಪ ಮುನ್ನೂರು ಜಿಲ್ಲಾ ಪಂಚಾಯತ್ ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ ಕಾರ್ಯಕ್ರಮಕ್ಕೆ ಆಗಮಿಸಿ ಶುಭ ಹಾರೈಸಿದರು.
ಸಮಾವೇಶದ ಸಭಾ ಕಾರ್ಯಕ್ರಮದಲ್ಲಿ ಎಲ್‌ ಡಿ ಬ್ಯಾಂಕ್ ನಿರ್ದೇಶಕ ಪ್ರಕಾಶ್ ಶೆಟ್ಟಿ ಶ್ರೀಶೈಲ ತುಂಬೆ, ಉಪಾಧ್ಯಕ್ಷ ನಿಸಾರ್‌ಅಹ್ಮದ್, ಎಫ್.ಎ.ಖಾದರ್, ಪುದುಕೊಡ್ಮಾಣ್‌ ಗ್ರಾಮದ ನಾಗರಿಕ ಕ್ರಿಯಾ ಸಮಿತಿ ಅಧ್ಯಕ್ಷ ವಿ. ಹೆಚ್. ಕರೀಂ, ನಿವೃತ್ತ ಪ್ರಾಧ್ಯಾಪಕ ಫಲೂಲ್, ಪಿ.ಟಿ.ಎ.ಯ ಮಾಜಿ ಅಧ್ಯಕ್ಷರುಗಳಾದ ಗೋಪಾಲಕೃಷ್ಣ ಸುವರ್ಣ, ದೇವದಾಸ್, ನಿಯಾಝ್‌ಎಸ್. ಬಿ.,ಕಾರ್ಯಕಾರಿ ಸಮಿತಿ ಸದಸ್ಯರಾದ ಸುಜಾತ, ಶಾಲಿನಿ, ಸುರೇಶ್ ನೆತ್ತರಕೆರೆ, ಮ್ಯಾಕ್ಷಿಮ್‌ ಕುವೆಲ್ಲೊ, ವಳವೂರು ಇಬ್ರಾಹಿಂ ಮುಂತಾದವರು ಉಪಸ್ಥಿತರಿದ್ದರು.
ತುಂಬೆ ಪ್ರೌಢಶಾಲಾ ವಿದ್ಯಾರ್ಥಿನಿಯರು ಪ್ರಾರ್ಥಿಸಿದರು. ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷ ಬಶೀರ್ ತಂಡೆಲ್ ಸ್ವಾಗತಿಸಿ, ಕಛೇರಿ ಅಧೀಕ್ಷಕ ಅಬ್ದುಲ್‌ ಕಬೀರ್ ಬಿ. ಕಾರ್ಯಕ್ರಮ ನಿರೂಪಿಸಿದರು.

More from the blog

ಎಳನೀರು ಕುಡಿದು ಅಸ್ವಸ್ಥ ಪ್ರಕರಣ : ಫ್ಯಾಕ್ಟರಿಗೆ ಅಧಿಕಾರಿಗಳ ತಂಡ ಭೇಟಿ ನೀಡಿ ಪರಿಶೀಲನೆ

ಮಂಗಳೂರು: ನಗರದ ಹೊರವಲಯದ ಎಳನೀರು ಫ್ಯಾಕ್ಟರಿಯೊಂದರಿಂದ ತಂದ ಎಳನೀರು ಕುಡಿದು ಕೆಲವರು ಅಸ್ವಸ್ಥರಾಗಿದ್ದಾರೆ ಎಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ ವರದಿ ಆಧಾರದಲ್ಲಿ ದ.ಕ ಜಿಲ್ಲಾ ಆರೋಗ್ಯಾಧಿಕಾರಿ ಡಾ| ತಿಮ್ಮಯ್ಯ ಅವರು ಫ್ಯಾಕ್ಟರಿಗೆ ಭೇಟಿ...

ಹಿತೈಷಿ ತರಬೇತಿ ಕೇಂದ್ರದ ಎಲ್ಲಾ ವಿದ್ಯಾರ್ಥಿಗಳು ಉತ್ತಮ ಫಲಿತಾಂಶದೊಂದಿಗೆ ತೇರ್ಗಡೆ

2023-24ನೇ ಸಾಲಿನ ದ್ವಿತೀಯ ಪಿ.ಯು.ಸಿ ಪರೀಕ್ಷೆಯಲ್ಲಿ ಪಾಣೆಮಂಗಳೂರು, ನರಿಕೊಂಬುವಿನಲ್ಲಿರುವ ಹಿತೈಷಿ ತರಬೇತಿ ಕೇಂದ್ರದ ಎಲ್ಲಾ ವಿದ್ಯಾರ್ಥಿಗಳು ಉತ್ತಮ ಅಂಕಗಳೊಂದಿಗೆ ತೇರ್ಗಡೆಯಾಗಿದ್ದಾರೆ. ಕು.ಕೀರ್ತನ ಶೇ.95.6% ಅಂಕಗಳೊಂದಿಗೆ ಅತ್ಯುತ್ತಮ ಶ್ರೇಣಿಯಲ್ಲಿ ತೇರ್ಗಡೆಯಾಗಿರುತ್ತಾರೆ ಎಂದು ಸಂಸ್ಥೆಯ ಪ್ರಕಟನೆಯಲ್ಲಿ ತಿಳಿಸಲಾಗಿದೆ. 2024-25ನೇ...

ಬಂಟ್ವಾಳದ ಉಳಿ ಗ್ರಾಮದಲ್ಲಿ ಮತದಾರರ ಮನೆಗೆ ಭೇಟಿ ನೀಡಿ ಮತಯಾಚನೆ ನಡೆಸಿದ ಶಾಸಕ ರಾಜೇಶ್ ನಾಯ್ಕ್

ಲೋಕ ಸಭಾ ಚುನಾವಣೆಯ ಹಿನ್ನಲೆಯಲ್ಲಿ ಕ್ಯಾ.ಬ್ರಿಜೇಶ್ ಚೌಟ ಅವರ ಗೆಲುವಿಗಾಗಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರ ಗ್ರಾಮ,ಮನೆ,ಮನ ಅಭಿಯಾನದ ಅಂಗವಾಗಿ ಬಂಟ್ವಾಳದ ಉಳಿ ಗ್ರಾಮದಲ್ಲಿ ಮತದಾರರ ಮನೆಗೆ ಬೇಟಿ ನೀಡಿ...

ವಿಟ್ಲ ಕೇಂದ್ರ ಜುಮಾ ಮಸೀದಿ, ಈದುಲ್ ಫಿತರ್

ವಿಟ್ಲ; ವಿಟ್ಲ ಕೇಂದ್ರ ಜುಮಾ ಮಸೀದಿಯಲ್ಲಿ ಈದುಲ್ ಫಿತರ್ ನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಖತೀಬ್ ಮಹಮ್ಮದ್ ನಸೀಹ್ ದಾರಿಮಿ ಉಸ್ತಾದ್ ರವರು ಖುತುಬಾ ಹಾಗೂ ಈದ್ ನಮಾಝ್ ನಿರ್ವಹಿಸಿದರು. ಈದ್ ಸಂಸೇಶ ನೀಡಿದ ಖತೀಬರು "...