ಉಜಿರೆ: ಪತ್ರಿಕೆಗಳಲ್ಲಿ ವಾಸ್ತವಿಕ ವಿಚಾರ ಮತ್ತುಆಸಕ್ತಿಯ ಲೇಖನಗಳು, ವರದಿಗಳು ಇದ್ದಾಗಓದುಗರ ಸಂಖ್ಯೆ ಹೆಚ್ಚಾಗುತ್ತದೆಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಹೇಳಿದರು.
ಅವರು ಶನಿವಾರ ಧರ್ಮಸ್ಥಳದಲ್ಲಿ ವಸಂತ ಮಹಲ್‌ನಲ್ಲಿ, ಮುಂದಿನ ತಿಂಗಳು ಮಂಗಳೂರಿನಲ್ಲಿ ನಡೆಯಲಿರುವ ರಾಜ್ಯಮಟ್ಟದ ಪತ್ರಕರ್ತರ ಸಮ್ಮೇಳನದ ಲಾಂಛನ ಬಿಡುಗಡೆಗೊಳಿಸಿ ಶುಭ ಹಾರೈಸಿದರು.
ಪತ್ರಕರ್ತರಿಗೆ ಒತ್ತಡ ಇರುವುದು ಸಹಜ.ಆದರೆ ಓದುಗರಿಗೆ ನೀಡುವ ವರದಿ, ಮಾಹಿತಿ ಉಪಯುಕ್ತ ಹಾಗೂ ಪರಿಣಾಮಕಾರಿಯಾಗಿರಬೇಕು ಎಂದು ಸಲಹೆ ನೀಡಿದರು.
ಇಂದು ಸಾವಿರಾರು ಪತ್ರಕರ್ತರು ತೆರೆಮರೆಯಲ್ಲಿ ಕೆಲಸ ಮಾಡುತ್ತಾರೆ. ಅವರನ್ನು ಸಮಾಜಕ್ಕೆ ಪರಿಚಯಿಸಬೇಕು ಹಾಗೂ ಅವರಿಗೆ ಸಿಗಬೇಕಾದ ವೇತನ, ವಿಮಾ ಭದ್ರತೆ, ವೃದ್ಧಾಪ್ಯ ವೇತನಇತ್ಯಾದಿ ಸೌಲಭ್ಯಗಳು ದೊರಕಲು ರಾಜ್ಯಮಟ್ಟದ ಪತ್ರಕರ್ತರ ಸಮ್ಮೇಳನ ಸಹಕಾರಿಯಾಗಲಿ ಎಂದು ಹೆಗ್ಗಡೆಯವರು ಹಾರೈಸಿದರು.
ಶಾಸಕ ಹರೀಶ್ ಪೂಂಜ ಮಾತನಾಡಿ, ರಾಜ್ಯಮಟ್ಟದ ಪತ್ರಕರ್ತರ ಸಮ್ಮೇಳನಕ್ಕೆ ತಾನು ಪೂರ್ಣ ಸಹಕಾರ ನೀಡುವುದಾಗಿ ಭರವಸೆ ನೀಡಿದರು.
ರಾಜ್ಯ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಮಾತನಾಡಿ, ಪತ್ರಕರ್ತರು ಆತ್ಮಾವಲೋಕನ ಮಾಡಿಕೊಳ್ಳಬೇಕು. ಮಾಧ್ಯಮಗಳು ಜನರಲ್ಲಿ ಸಂಶಯ ಬರುವಂತೆ ವರ್ತಿಸಬಾರದು ಎಂದು ಹೇಳಿದರು.
ದ,ಕ, ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ಇಂದಾಜೆ ಪ್ರಾಸ್ತಾವಿಕವಾಗಿ ಮಾತನಾಡಿ ಗ್ರಾಮ ವಾಸ್ತವ್ಯದ ಮಹತ್ವ ವಿವರಿಸಿದರು.
ಜಿಲ್ಲಾ ವಾರ್ತಾಧಿಕಾರಿ ಖಾದರ್ ಶಾ, ಮತ್ತು ರಾಜ್ಯ ಪತ್ರಕರ್ತರ ಸಂಘದ ಕಾರ್ಯದರ್ಶಿ ಲೋಕೇಶ್, ಡಿ.ಪಿ. ಹರೀಶ್‌ರೈ, ಇಬ್ರಾಹಿಂ ಅಡ್ಕಸ್ಥಳ ಉಪಸ್ಥಿತರಿದ್ದರು.