ವಾಮದಪದವು: ಸರಕಾರಿ ಪ್ರಥಮ ದರ್ಜೆ ಕಾಲೇಜ್ ನ ರಾಜ್ಯಶಾಸ್ತ್ರ ಸಂಘ, ಚುನಾವಣಾ ಸಾಕ್ಷರತಾ ಕ್ಲಬ್ ಹಾಗೂ ಮತದಾರರ ಜಾಗೃತಿ ವೇದಿಕೆಯ ಜಂಟಿ ಆಶ್ರಯದಲ್ಲಿ ರಾಷ್ಟ್ರೀಯ ಮತದಾರರ ದಿನಾಚರಣೆ ಹಾಗೂ ಪ್ರತಿಜ್ಞಾವಿಧಿ ಸ್ವೀಕಾರ ಕಾರ್ಯಕ್ರಮ ನಡೆಯಿತು.
ಕಾಲೇಜಿನ ಪ್ರಾಂಶುಪಾಲ ಪ್ರೊ. ಹರಿಪ್ರಸಾದ್ ಬಿ.ಶೆಟ್ಟಿ ಅವರು ಪ್ರತಿಜ್ಞಾ ವಿಧಿಯನ್ನು ಬೋಧಿಸಿ, ನಂತರ ಪ್ರಜಾಪ್ರಭುತ್ವದಲ್ಲಿ ಮತದಾನದ ಮಹತ್ವ, ಮತದಾರರ ಪಾತ್ರದ ಬಗ್ಗೆ ಮಾಹಿತಿ ನೀಡಿದರು. ಮತದಾರ ಸಾಕ್ಷರತಾ ಸಂಘದ ಸಂಚಾಲಕ ಪ್ರೊ.ರೊನಾಲ್ಡ್ ಪ್ರವೀಣ್ ಕೊರೆಯ ಅವರು ಮಾತನಾಡುತ್ತಾ, ನಾಗರಿಕರು ಯಾಕೆ ಕಡ್ಡಾಯವಾಗಿ ಮತದಾನ ಮಾಡಬೇಕು? ಯೋಗ್ಯ ಅಭ್ಯರ್ಥಿಗಳನ್ನು ಆಯ್ಕೆ ಮಾಡಿದಲ್ಲಿ ಸ್ಥಿರ ಹಾಗೂ ಭ್ರಪ್ಠಾಚಾರ ರಹಿತ ಸರಕಾರಗಳನ್ನು ನಾವು ನಿರೀಕ್ಷೆ ಮಾಡಬಹುದು. ಜನಪರ ಕಾಳಜಿ ಇರುವ, ದೇಶದ ಮುಂಬರುವ ಪೀಳಿಗೆಯ ಬಗ್ಗೆ ಆಸಕ್ತಿ ಇರುವ ಜನರನ್ನು ರಾಜಕೀಯ ಕ್ಷೇತ್ರಕ್ಕೆ ಆಯ್ಕೆ ಮಾಡಲು ಕರೆ ನೀಡಿದರು. ದ್ವಿತೀಯ ಬಿ. ಎ ವಿದ್ಯಾರ್ಥಿಗಳಾದ ಸಂದರಿ ಮತ್ತು ಶ್ವೇತಾ ಪ್ರಾರ್ಥಿಸಿದರು. ಯಶಸ್ವಿನಿ ಸ್ವಾಗತಿಸಿ, ಜಯಶ್ರೀ ವಂದಿಸಿದರು. ಕೆ. ಶ್ವೇತಾ ನಾಯಕ್ ಕಾರ್ಯಕ್ರಮ ನಿರೂಪಿಸಿದರು.