Saturday, April 6, 2024

ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದ ಬಡ ಮಹಿಳೆಯನ್ನು ದಾಖಲು ಮಾಡಲು ನಿರಾಕರಣೆ: ವೆನ್ ಲಾಕ್ ಆಸ್ಪತ್ರೆಯಲ್ಲಿ ಮಲತಾಯಿ ಧೋರಣೆ

ಬಂಟ್ವಾಳ: ಡೆಂಗ್ಯೂ ಜ್ವರ ಬಾಧಿತ ಬಡ ಮಹಿಳೆಯೋರ್ವರಿಗೆ ಚಿಕಿತ್ಸೆ ನೀಡಲು ನಿರಾಕರಣೆ ಮಾಡಿ ವಾಪಾಸು ಕಳುಹಿಸಿದ ಘಟನೆ ಮಂಗಳೂರು ವೆನ್ಲಾಕ್ ಆಸ್ಪತ್ರೆಯಲ್ಲಿ ನಡೆದಿದೆ.
ಸಂಗಬೆಟ್ಟು ನಿವಾಸಿ ವಸಂತಿ ಎಂಬ ಮಹಿಳೆ ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಬಂಟ್ವಾಳ ಸಮುದಾಯ ಆಸ್ಪತ್ರೆಯಿಂದ ಮಂಗಳೂರು ವೆನ್ಲಾಕ್ ಆಸ್ಪತ್ರೆಗೆ ಇಂದು ಬೆಳಿಗ್ಗೆ ಹೋದಾಗ ಚಿಕಿತ್ಸೆ ನೀಡಲು ನಿರಾಕರಿಸಿದ ಹಿನ್ನೆಲೆಯಲ್ಲಿ ಖಾಸಗಿ ಆಸ್ಪತ್ರೆಗೆ ದಾಖಲಾದ ಪ್ರಸಂಗ ನಡೆಯಿತು.
ಡೆಂಗ್ಯೂ ಜ್ವರ ಬಾಧಿತರಾದ ಸಿದ್ದಕಟ್ಟೆ ನಿವಾಸಿ ವಸಂತಿ ಅವರು ಸೋಮವಾರ ಸಂಜೆ ಸ್ಥಳೀಯ ವೈದ್ಯರ ಸಲಹೆಯ ಮೇರೆಗೆ ಬಂಟ್ವಾಳ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಾಗುತ್ತಾರೆ. ಆದರೆ ಮಂಗಳವಾರ ಬೆಳಿಗ್ಗೆ ಇವರ ದೇಹದಲ್ಲಿ ಪ್ಲೇಟ್ ಲೆಟ್ನ ಅಂಶ ಕಡಿಮೆಯಾದ ಹಿನ್ನೆಲೆಯಲ್ಲಿ ಹೆಚ್ಚಿನ ಚಿಕಿತ್ಸೆ ಗಾಗಿ ಮಂಗಳೂರು ವೆನ್ಲಾಕ್ ಆಸ್ಪತ್ರೆಗೆ ದಾಖಲಾಗುವಂತೆ ಬಂಟ್ವಾಳ ಸಮುದಾಯ ಆರೋಗ್ಯ ಕೇಂದ್ರ ದ ವೈದ್ಯರು ಕಳುಹಿಸಿ ಕೊಡುತ್ತಾರೆ.

ಆದರೆ ಅಲ್ಲಿನ ವೈದ್ಯರು ನೀವು ಅಲ್ಲಿಂದ ಇಲ್ಲಿ ಯಾಕೆ ಬಂದಿರಿ ವಾಪಾಸು ಅಲ್ಲಿಯೇ ಚಿಕಿತ್ಸೆ ಪಡೆಯುವಂತೆ ಹೇಳಿ ದಾಖಲಾತಿ ಮಾಡದೆ ವಾಪಸು ಕಳುಹಿಸಿದ್ದಾರೆ.
ವಾಪಾಸು ಬಂಟ್ವಾಳ ವೈದ್ಯರನ್ನು ಸಂಪರ್ಕಿಸಿದಾಗ ಬಂಟ್ವಾಳ ಸರಕಾರಿ ಆಸ್ಪತ್ರೆ ಯಲ್ಲಿ ಬೇಕಾದ ಕೆಲವು ವ್ಯವಸ್ಥೆಗಳಿಲ್ಲದ ಕಾರಣ ನಾವು ಅಲ್ಲಿಗೆ ಕಳುಹಿಸಿ ದ್ದೇವೆ. ವಾಪಾಸು ದಾಖಲಾತಿ ಮಾಡುವುದಕ್ಕೆ ಯಾವುದೇ ತೊಡಕಿಲ್ಲ ಅದರೆ ಮತ್ತೆ ಪ್ಲೇಟ್ ಲೆಟ್ ಕಡಿಮೆಯಾದರೆ ನಾವು ವಾಪಾಸು ಮಂಗಳೂರಿಗೆ ಕಳುಹಿಸಬೇಕಾಗುತ್ತದೆ. ಮುಂಜಾಗ್ರತಾ ದೃಷ್ಟಿಯಿಂದ ನಾವು ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲು ಸೂಚಿಸಿದ್ದೆವು  ಎಂದು ತಿಳಿಸಿದರು. ‌

ಬೆಳಿಗ್ಗೆಯಿಂದ ಸಂಜೆವರೆಗೂ ದಾಖಲಾತಿ ಮಾಡದ ಹಿನ್ನಲೆಯಲ್ಲಿ ಅನಿವಾರ್ಯವಾಗಿ ಬೇರೆ ಯಾವುದೇ ರೀತಿಯ ದಿಕ್ಕುತೋಚದೆ ತಾಯಿಯನ್ನು ತುಂಬೆ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿದ್ದೇವೆ ಎಂದು ವಸಂತಿ ಅವರ ಮಗ ಅರುಣ್ ಅವರು ಹೇಳಿದ್ದಾರೆ.
ಆಸ್ಪತ್ರೆಯವರ ಈ ಧೋರಣೆ ಬಗ್ಗೆ ನಾವು ಮೇಲಾಧಿಕಾರಿಗಳಿಗೆ ಪತ್ರ ಬರೆಯುವುದಾಗಿಯೂ ತಿಳಿಸಿದ್ದಾರೆ.
ಬಡಜನರ ಕಷ್ಟಗಳಿಗೆ ಸ್ಪಂದಿಸಿದ ಸರಕಾರಿ ಆಸ್ಪತ್ರೆಯ ಬಗ್ಗೆ ಆರೋಪ ವ್ಯಕ್ತಪಡಿಸಿದ ಅವರು ಸಂಬಂಧಿಸಿದವರು ಸಮಸ್ಯೆ ಪರಿಹಾರಕ್ಕೆ ಕ್ರಮಕೈಗೊಳ್ಳುವಂತೆಯೂ ಒತ್ತಾಯ ಮಾಡಿದ್ದಾರೆ.

More from the blog

ಮಂಗಳೂರು: ‘ಸ್ವೀಟ್ ಸಿಂಫನಿ ಇನ್ಸ್ಟಿಟ್ಯೂಟ್ ಆಫ್ ಮ್ಯೂಸಿಕ್’ ಸಂಸ್ಥೆಯ ಸಂಗೀತ ಕ್ಷೇತ್ರದಲ್ಲಿ ಸಂಪುಟ 2′ ರ ನೂತನ ಕೃತಿ ಲೋಕಾರ್ಪಣೆ

ಮಂಗಳೂರು: ಮಂಗಳೂರಿನ ಕುಲಶೇಖರದಲ್ಲಿರುವ 'ಸ್ವೀಟ್ ಸಿಂಫನಿ ಇನ್ಸ್ಟಿಟ್ಯೂಟ್ ಆಫ್ ಮ್ಯೂಸಿಕ್' ಸಂಸ್ಥೆಯ ಪ್ರಕಾಶನದಲ್ಲಿ ಇಂಗ್ಲಿಷ್, ಹಿಂದಿ ಮತ್ತು ಕನ್ನಡದ ಜನಪ್ರಿಯ ಹಾಡುಗಳನ್ನು ಪಾಶ್ಚಿಮಾತ್ಯ ನೊಟೇಶನ್ ಮೂಲಕ ವಯಲಿನ್, ಗಿಟಾರ್ ಮತ್ತು ಕೀಬೋರ್ಡ್ ನಲ್ಲಿ...

ಆಭರಣ ಪ್ರಿಯರಿಗೆ ಗುಡ್‌ನ್ಯೂಸ್‌ : ವಾರಾಂತ್ಯದಲ್ಲಿ ಚಿನ್ನದ ದರ ತುಸು ಇಳಿಕೆ…

ಬೆಂಗಳೂರು: ಚಿನ್ನದ ದರದಲ್ಲಿ ಮತ್ತೆ ಹಾವು ಏಣಿಯಾಟ ಶುರುವಾಗಿದೆ. ಕಳೆದೆರಡು ದಿನಗಳಿಂದ ನಿರಂತರ ಏರಿಕೆ ಕಂಡಿದ್ದ ಬಂಗಾರದ ಬೆಲೆ ಇದೀಗ ಇಳಿಕೆಯಾಗಿದೆ. ನಿನ್ನೆಯ ದರಕ್ಕೆ ಹೋಲಿಸಿದರೆ 10ಗ್ರಾಂ ಚಿನ್ನದ ಮೇಲೆ 450 ರೂ...

ನೀತಿ ಸಂಹಿತೆ ಇರುವಾಗ ಆಶ್ಲೇಷ ಬಲಿ ಮಂಟಪ ಕಾಮಗಾರಿ ಆರಂಭ ಸಮರ್ಪಕವಲ್ಲ- ಹರೀಶ್ ಇಂಜಾಡಿ

ಸುಬ್ರಹ್ಮಣ್ಯ: ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಈ ಹಿಂದಿನ ಆಡಳಿತ ಮಂಡಳಿಯ ಕೊನೇ ದಿನಗಳಲ್ಲಿ ದಾನಿಗಳು ಕ್ಷೇತ್ರದಲ್ಲಿ ಆಶ್ಲೇಷ ಬಲಿ ಮಂಟಪ ನಿರ್ಮಿಸಲು ಮುಂದೆ ಬಂದರು. ಇದು ಸ್ವಾಗತಾರ್ಹ ಬೆಳವಣಿಗೆ. ಆದರೆ...

ಪ್ರಧಾನಿ ಮೋದಿ ಕರೆ : ಪ್ರತಿಯೊಬ್ಬರ ಕೈ ಮೇಲೆ ಕಮಲದ ಹಚ್ಚೆ ಹಾಕಿ

ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ  ಬಿಜೆಪಿ ಕಾರ್ಯಕರ್ತರಿಗೆ ಕರೆ ನೀಡಿರುವ ಪ್ರಧಾನಿ ನರೇಂದ್ರ ಮೋದಿ ಪ್ರತಿಯೊಬ್ಬರ ಕೈ ಮೇಲೆ ಕಮಲದ ಹಚ್ಚೆ ಹಾಕಿ “ಮೆಹಂದಿ ಅಭಿಯಾನ" ನಡೆಸುವಂತೆ ಸೂಚನೆ ನೀಡಿದ್ದಾರೆ. ಜತೆಗೆ ಮೋದಿ...