ವಿಟ್ಲ: ಪ್ರತಿಯೊಬ್ಬ ವ್ಯಕ್ತಿಯೂ ಸ್ವಚ್ಛತೆಯ ಕಡೆಗೆ ಮಹತ್ವವನ್ನು ನೀಡುವ ನಿಟ್ಟಿನಲ್ಲಿ ಜಾಗೃತಿಗೊಳಿಸಲು, ಸ್ವಚ್ಛ ಮೇವ ಜಯತೇ ಕಾರ್ಯಕ್ರಮವನ್ನು ಹಾಕಿಕೊಳ್ಳಲಾಗಿದೆ. ಜನರ ಮೂಲ ಸೌಕರ್ಯಗಳ ಅಗತ್ಯಗಳಿಗೆ ಎಂಆರ್‌ಪಿಎಲ್ ನಂತಹ ಕಂಪನಿಗಳು ಸ್ಪಂದಿಸುತ್ತಿರುವುದು ಉತ್ತಮ ವಿಚಾರವಾಗಿದೆ. ಮನೆಯಿಂದ ಸ್ವಚ್ಛತೆಯ ಜಾಗೃತಿ ಮೂಡಿದಾಗ ಗ್ರಾಮ ದೇಶ ಸ್ವಚ್ಛ ಹಾಗೂ ಆರೋಗ್ಯವಾಗಿರಲು ಸಾಧ್ಯ ಎಂದು ಪುತ್ತೂರು ಶಾಸಕ ಸಂಜೀವ ಮಠಂದೂರು ಹೇಳಿದರು.
ಅವರು ಮಂಗಳವಾರ ವಿಟ್ಲ ಹಳೆ ಬಸ್ ನಿಲ್ದಾಣದಿಂದ ಕ್ಯಾಂಪ್ಕೋ ಹೋಗುವ ದಾರಿಯಲ್ಲಿ ಎಂ.ಆರ್.ಪಿ.ಎಲ್ ನ ಸಿ.ಎಸ್.ಆರ್. ಯೋಜನೆಯ 16 ಲಕ್ಷ ಅನುದಾನದಲ್ಲಿ ನಿರ್ಮಾಣವಾದ ನೂತನ ಶೌಚಾಲಯವನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದರು.
ಪಟ್ಟಣ ಪಂಚಾಯತ್ ಅಧ್ಯಕ್ಷೆ ದಮಯಂತಿ, ಉಪಾಧ್ಯಕ್ಷ ಜಯಂತ್ ವಿಟ್ಲ, ಸ್ಥಾಯೀ ಸಮಿತಿ ಅಧ್ಯಕ್ಷೆ ಉಷಾ ಕೃಷ್ಣಪ್ಪ, ಪುತ್ತೂರು ತಾಲೂಕು ಪಂಚಾಯತ್ ಅಧ್ಯಕ್ಷ ರಾಧಾಕೃಷ್ಣ ಬೋರ್ಕರ್, ಸ್ಥಾಯೀ ಸಮಿತಿ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ಎಂ.ಆರ್.ಪಿ.ಎಲ್, ಸಿಎಸ್‌ಆರ್ ಯೋಜನೆಯ ನಾಗರಾಜ ರಾವ್, ವಿಟ್ಲ ಪಟ್ಟಣ ಪಂಚಾಯಿತಿ ಸದಸ್ಯರಾದ ಅರುಣ ಎಂ. ವಿಟ್ಲ, ಲೋಕನಾಥ ಶೆಟ್ಟಿ ಕೊಲ್ಯ, ರಾಮದಾಸ ಶೆಣೈ, ಶ್ರೀಕೃಷ್ಣ, ಮಂಜುನಾಥ ಕಲ್ಲಕಟ್ಟ, ಚಂದ್ರಕಾಂತಿ, ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಮಾಲಿನಿ, ಕಂದಾಯ ನಿರೀಕ್ಷಕ ಪಕೀರ ಮೂಲ್ಯ, ಇಂಜಿನಿಯರ್ ಶ್ರೀಧರ್, ಕಾಮಗಾರಿ ಗುತ್ತಿಗೆದಾರ ಹಂಝ, ಕೇಪು ಗ್ರಾಮ ಪಂಚಾಯತ್ ಅಧ್ಯಕ್ಷ ತಾರಾನಾಥ ಆಳ್ವ, ವಿಟ್ಲ ನಗರ ಬಿಜೆಪಿ ಅಧ್ಯಕ್ಷ ಮೋಹನದಾಸ ಉಕ್ಕುಡ, ಕಾರ್ಯದರ್ಶಿ ಉದಯ ಆಲಂಗಾರು, ಪುರುಷೋತ್ತಮ ಕಲ್ಲಂಗಳ ಮತ್ತಿತರರು ಉಪಸ್ಥಿತರಿದ್ದರು.