Wednesday, April 10, 2024

ಪಕಳಕುಂಜ: ಶಾಲಾ ಸಂಸ್ಥಾಪಕರ ಜನ್ಮಶತಾಬ್ಧಿ, ಪ್ರತಿಭಾ ಪುರಸ್ಕಾರ

ವಿಟ್ಲ: ಮಾಣಿಲ ಗ್ರಾಮದ ಪಕಳಕುಂಜ ಶ್ರೀವೇಣುಗೋಪಾಲ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ಥಾಪಕರ ಜನ್ಮ ಶತಾಬ್ಧಿ ಅಭಿನಂದನಾ ಸಮಾರಂಭ ಮತ್ತು ಪ್ರತಿಭಾ ಪುರಸ್ಕಾರ ಪ್ರದಾನ ಸಮಾರಂಭ ನಡೆಯಿತು. ಶಾಲಾ ಸಂಚಾಲಕ ಪಕಳಕುಂಜ ಗೋಪಾಲಕೃಷ್ಣ ಭಟ್ ಧ್ವಜಾರೋಹಣ ನೆರವೇರಿಸಿದರು.
ಸಭಾ ಕಾರ್ಯದಲ್ಲಿ ಶಾಲೆಯ ನಿವೃತ್ತ ಮುಖ್ಯ ಶಿಕ್ಷಕ ಎಂ. ತಿಮ್ಮಣ್ಣ ಭಟ್ ಅವರನ್ನು ಸನ್ಮಾನಿಸಲಾಯಿತು. ಶ್ಯಾಮ್ ಭಟ್ ಪಕಳಕುಂಜ ಅಭಿನಂದನಾ ಭಾಷಣ ಮಾಡಿದರು.
ಮುಖ್ಯ ಅತಿಥಿಗಳಾಗಿ ಬಾಯಾರು ಪ್ರಶಾಂತಿ ಸೇವಾ ಟ್ರಸ್ಟ್‌ನ ಮ್ಯಾನೇಜಿಂಗ್ ಟ್ರಸ್ಟಿ ಹೆಚ್. ಮಹಾಲಿಂಗ ಭಟ್, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸೇವಾ ಪ್ರತಿನಿಧಿ ಪರಮೇಶ್ವರ ನಾಯ್ಕ, ಶ್ರೀ ಕ್ಷೇತ್ರ ಒಡಿಯೂರು, ಶ್ರೀ ಗುರುದೇವ ಗ್ರಾಮ ವಿಕಾಸ ಯೋಜನೆಯ ತಾಲೂಕು ವಿಸ್ತರಣಾಧಿಕಾರಿ ಸದಾಶಿವ ಅಳಿಕೆ, ರಾಮಚಂದ್ರ ಭಟ್.ಬಿ ನಡುಮನೆ, ಮಾಣಿಲ ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಬಟ್ಯಡ್ಕ ವಿಶಾಲಾಕ್ಷಿ, ಪಕಳಕುಂಜ ಶಾಲೆಯ ಶಿಕ್ಷಕ-ರಕ್ಷಕ ಸಂಘ ಅಧ್ಯಕ್ಷೆ ನಿವೇದಿತಾ ಕೆ.ಭಟ್ ಮಾಣಿಮೂಲೆ ಭಾಗವಹಿಸಿದ್ದರು.
ಸಹ ಶಿಕ್ಷಕಿ ನಿರ್ಮಲಾ ಸ್ವಾಗತಿಸಿದರು. ಸಹ ಶಿಕ್ಷಕಿಯರಾದ ದಯಾಮಣಿ, ದಿವ್ಯಲಕ್ಷ್ಮೀ, ನವ್ಯ ಶ್ರೀ ಬಹುಮಾನ ವಿಜೇತರ ಪಟ್ಟಿ ವಾಚಿಸಿದರು.
ಶಾಲಾ ಮುಖ್ಯ ಶಿಕ್ಷಕ ಮದನ್ ಮೋಹನ್ ಶೆಟ್ಟಿ ಎಸ್. ಪಡಿಬಾಗಿಲು ಅಳಿಕೆ ವರದಿ ವಾಚಿಸಿದರು. ಸಹ ಶಿಕ್ಷಕಿ ನಳಿನಾಕ್ಷಿ ಕಾರ್ಯಕ್ರಮ ನಿರೂಪಿಸಿದರು. ಸಭಾ ಕಾರ್ಯಕ್ರಮದ ಬಳಿಕ ಅಂಗನವಾಡಿ ಮಕ್ಕಳಿಂದ ಶಾಲಾ ವಿದ್ಯಾರ್ಥಿಗಳಿಂದ, ಹಳೆ ವಿದ್ಯಾರ್ಥಿಗಳಿಂದ ನೃತ್ಯ ವೈವಿಧ್ಯಗಳು, ಶಾಲಾ ವಿದ್ಯಾರ್ಥಿಗಳಿಂದ ನಾಟಕ ಪ್ರದರ್ಶನಗೊಂಡಿತು.

More from the blog

ದ್ವಿತೀಯ ಪಿಯು ಫಲಿತಾಂಶ ಪ್ರಕಟ : ದಕ್ಷಿಣ ಕನ್ನಡ ಜಿಲ್ಲೆಗೆ ಮೊದಲ ಸ್ಥಾನ

ಬೆಂಗಳೂರು: ಮಾರ್ಚ್ 1ರಿಂದ ಮಾರ್ಚ್ 22ರವರೆಗೆ ನಡೆದಿದ್ದ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಬುಧವಾರ ಪ್ರಕಟಗೊಂಡಿದೆ. ಬೆಂಗಳೂರಿನಲ್ಲಿ ಶಿಕ್ಷಣ ಇಲಾಖೆ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿದೆ. ಈ ಬಾರಿ, ಶೇ 81.15 ಮಂದಿ ಉತ್ತೀರ್ಣರಾಗಿದ್ದಾರೆ....

ಏ.10ರಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ…. ರಿಸಲ್ಟ್​ ಚೆಕ್ ಮಾಡೋದು ಹೇಗೆ?

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶವನ್ನು ನಾಳೆ ಪ್ರಕಟಿಸಲಾಗುತ್ತಿದೆ. ಎಲ್ಲ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಮುಕ್ತಾಯವಾದ ಹಿನ್ನಲೆ ನಾಳೆ ಫಲಿತಾಂಶ ಪ್ರಕಟಿಸಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಮುಂದಾಗಿದೆ. ನಾಳೆ...

ಮತ್ತೆ ಏರಿಕೆ ಕಂಡ ಚಿನ್ನದ ಬೆಲೆ : ಇವತ್ತಿನ ‌ಬೆಲೆ ಎಷ್ಟು ಗೊತ್ತಾ…?

ಯುಗಾದಿ ಹಬ್ಬ. ಇದು ಸಂಬಂಧ ಬೆಸೆಯುವ ಹಬ್ಬ. ಅಂದಹಾಗೆಯೇ ದೇಶದಾದ್ಯಂತ ಜನರು ಇಂದು ಸಂಭ್ರಮದಲ್ಲಿದ್ದಾರೆ. ಆದರೆ ಇದರ ನಡುವೆ ಚಿನ್ನದ ಬೆಲೆ ಏರಿಕೆಯ ಬಿಸಿಯಿಂದ ಕೊಂಚ ಬೇಸರವು ಅವರಲ್ಲಿ ಆವರಿಸಿದೆ. ಕಳೆದ ಎರಡು ದಿನಗಳ...

5,8,9,11ನೇ ತರಗತಿ ಪರೀಕ್ಷೆ ಫಲಿತಾಂಶಕ್ಕೆ ಸುಪ್ರೀಂ ತಡೆ

ಹೊಸದಿಲ್ಲಿ: 5, 8, 9 ಮತ್ತು 11 ನೇ ತರಗತಿಗಳ ಬೋರ್ಡ್ ಪರೀಕ್ಷೆಗಳ ಫಲಿತಾಂಶಗಳನ್ನು ಪ್ರಕಟಿಸಲು ಸುಪ್ರೀಂ ಕೋರ್ಟ್ ಸೋಮವಾರ ತಡೆಯಾಜ್ಞೆ ನೀಡಿದೆ. ರಾಜ್ಯದಲ್ಲಿ 5, 8, 9ನೇ ತರಗತಿಗೆ ಬೋರ್ಡ್​ ಪರೀಕ್ಷೆ ಮುಗಿದಿದ್ದು,...