


ವಿಟ್ಲ: ಧರ್ಮ ಮತ್ತು ಸತ್ಯ ಎರಡು ಕಣ್ಣುಗಳಂತಿದ್ದು, ಅವುಗಳನ್ನು ಕಾಪಾಡುವ ಕಾರ್ಯ ಪ್ರತಿಯೊಬ್ಬರ ಕರ್ತವ್ಯವಾಗಿದೆ. ಪರಿವರ್ತನೆಯ ನೆಪದಲ್ಲಿ ಸಂಸ್ಕಾರ ಸಂಸ್ಕೃತಿಯನ್ನು ಕಳೆದುಕೊಳ್ಳಬಾರದು. ಮೂಢನಂಬಿಕೆಯನ್ನು ಬಿಟ್ಟು ಮೂಲ ನಂಬಿಕೆಯನ್ನು ಉಳಿಸಿಕೊಳ್ಳಬೇಕು. ಸಂಪ್ರದಾಯಗಳನ್ನು ಉಳಿಸಿಕೊಳ್ಳುವ ಕಾರ್ಯ ನಡೆಯಬೇಕು ಎಂದು ಕಣಿಯೂರು ಶ್ರೀ ಚಾಮುಂಡೇಶ್ವರೀ ದೇವಿ ಕ್ಷೇತ್ರದ ಶ್ರೀ ಮಹಾಬಲ ಸ್ವಾಮೀಜಿ ಹೇಳಿದರು.
ಅವರು ಬಾಕಿಲಗುತ್ತು ಕ್ಷೇತ್ರದಲ್ಲಿ ಶ್ರೀ ಉಳ್ಳಾಲ್ತಿ, ವೈದ್ಯನಾಥೇಶ್ವರ, ಹೊಸಮ್ಮ, ಅಣ್ಣಪ್ಪ ಪಂಜುರ್ಲಿ, ಬೆರ್ಮೆರ್ ಬೈದೇರುಗಳು ಹಾಗೂ ಇತರ ಪರಿವಾರ ದೈವಗಳ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಹಾಗೂ ಶ್ರೀ ದೈವಗಳಿಗೆ ನೇಮೋತ್ಸವ ಕಾರ್ಯಕ್ರಮದ ಅಂಗವಾಗಿ ನಡೆದ ಧಾರ್ಮಿಕ ಸಭೆಯಲ್ಲಿ ಆಶೀರ್ವಚನ ನೀಡಿದರು.
ಕುತ್ಯಾರು ಕೇಂಜಮಲೆ ಗರಡಿ ಬಗ್ಗಪೀಠ ಬಿಲ್ಲವ ಜೇಷ್ಠ ಗಡಿ ಪ್ರಧಾನಿತ ಬಗ್ಗ ಪೂಜಾರಿ ಕಾರ್ಯಕ್ರಮ ಉದ್ಘಾಟಿಸಿದರು. ಅಖಿಲ ಭಾರತ ಬಿಲ್ಲವರ ಯೂನಿಯನ್ ಅಧ್ಯಕ್ಷ ನವೀನ್ ಚಂದ್ರ ಡಿ. ಸುವರ್ಣ ಕ್ಷೇತ್ರ ಸಂಚಿಕೆ ಬಿಡುಗಡೆ ಮಾಡಿದರು. ಯುವ ಆಧ್ಯಯನಕಾರ ಸಂಕೇತ್ ಪೂಜಾರಿ ನಂದರಬೆಟ್ಟು ಬಿ. ಸಿ. ರೋಡು ಧಾರ್ಮಿಕ ಉಪನ್ಯಾಸ ನೀಡಿದರು.
ಸಭೆಯ ಅಧ್ಯಕ್ಷತೆಯನ್ನು ಕಂಕನಾಡಿ ಕ್ಷೇತ್ರ ಶ್ರೀ ಬ್ರಹ್ಮಬೈದೇರ್ಕಳ ಗರಡಿ ಅಧ್ಯಕ್ಷ ಕೆ. ಚಿತ್ತರಂಜನ್ ಕಂಕನಾಡಿ ವಹಿಸಿದ್ದರು.
ಬ್ರಹ್ಮಕಲಶ ಸಮಿತಿ ಗೌರವಾದ್ಯಕ್ಷ ಕೆ. ಸೇಸಪ್ಪ ಕೋಟ್ಯಾನ್ ಪಚ್ಚಿನಡ್ಕ, ಜೀರ್ಣೋದ್ಧಾರ ಸಮಿತಿ ಗೌರವಾಧ್ಯಕ್ಷ ಕೆ. ಟಿ. ಸುವರ್ಣ, ಪರ್ಪುಂಜ ರಾಮಜಾಲ್ ಬೈದೇರುಗಳ ಗರಡಿ ಮೊಕ್ತೇಸರ ಸಂಜೀವ ಪೂಜಾರಿ ಕೂರೇಲು, ದಿವಾಕರ್ ಕನ್‌ಸ್ಟ್ರಕ್ಷನ್ ವ್ಯವಸ್ಥಾಪಕ ನಿರ್ದೇಶಕ ದಿವಾಕರ್, ದಂತ ವೈದ್ಯ ಡಾ. ರಾಜಾರಾಮ್ ಕೆ. ಬಿ. ಮುಗ್ಗಗುತ್ತು, ಧೀರಕ್ಷಾ ಇಂಜಿನಿಯರಿಂಗ್ ವರ್ಕ್ಸ್ ಉಮೇಶ್ ಸಾಲ್ಯಾನ್, ಕಾಪಿಕಾಡ್ ಶ್ರೀ ಉಮಾಮಹೇಶ್ವರೀ ದೇವಸ್ಥಾನ ಅಧ್ಯಕ್ಷ ಎ. ಜೆ. ಶೇಖರ್, ದ. ಕ. ಶಾಮಿಯಾನ ಮಾಲಕರ ಸಂಘದ ಅಧ್ಯಕ್ಷ ಬಾಬು ಕೊಪ್ಪಳ, ಬಿರುವೆರ್ ಕಡೇಶಿವಾಲಯ ಟ್ರಸ್ಟ್ ಅಧ್ಯಕ್ಷ ಲೋಕನಾಥ ಪೂಜಾರಿ ತಿಮರಾಜೆ, ಬಾಕಿಲಗುತ್ತು ಆಡಳಿತ ಟ್ರಸ್ಟ್ ಅಧ್ಯಕ್ಷ ವಸಂತ ಪೂಜಾರಿ ಬಾಕಿಲಗುತ್ತು, ಪ್ರಧಾನ ಕಾರ್ಯದರ್ಶಿ ಹರೀಶ್ ಪೂಜಾರಿ ಬಾಕಿಲಗುತ್ತು, ಕೋಶಾಧಿಕಾರಿ ಹರೀಶ್ ಸಾಲ್ಯಾನ್ ಬಾಕಿಲಗುತ್ತು ಮತ್ತಿತರರು ಉಪಸ್ಥಿತರಿದ್ದರು.
ಕಂಕನಾಡಿ ಕ್ಷೇತ್ರ ಶ್ರೀ ಬ್ರಹ್ಮಬೈದೇರ್ಕಳ ಗರಡಿ ಮುಕ್ತೇಸರ ದಿನೇಶ್ ಅಂಚನ್ ಸ್ವಾಗತಿಸಿದರು. ಬ್ರಹ್ಮಕಲಶೋತ್ಸವ ಸಮಿತಿ ಗೌರವ ಸಲಹೆಗಾರ ಶೈಲು ಬಿರ್ವ ಅಗತ್ತಾಡಿ ದೋಲ ಬಾರಿಕೆ ಪ್ರಸ್ತಾಪನೆಗೈದರು. ಶಿಕ್ಷಕಿ ತ್ರಿವೇಣಿ ವಂದಿಸಿದರು. ಶಿಕ್ಷಕರಾದ ಗೋಪಾಲಕೃಷ್ಣ, ವೆಂಕಟೇಶ್ ಕಾರ್ಯಕ್ರಮ ನಿರೂಪಿದರು.


