Thursday, April 18, 2024

ಜ. 4 : ಏರ್ಯ ಸ್ಮೃತಿ ಪ್ರಶಸ್ತಿ-2019 ಪ್ರಧಾನ ಸಮಾರಂಭ

ಬಂಟ್ವಾಳ: ಬಂಟ್ವಾಳ ತಾಲೂಕು ಬಂಟರ ಸಂಘದ ವಾರ್ಷಿಕೋತ್ಸವ ಹಾಗೂ ಹಿರಿಯ ಸಾಹಿತಿ ದಿ| ಡಾ| ಏರ್ಯ ಲಕ್ಷ್ಮೀ ನಾರಾಯಣ ಆಳ್ವ ಅವರ ಹೆಸರಿನಲ್ಲಿ ನೀಡಲಾಗುವ ಏರ್ಯ ಸ್ಮೃತಿ ಪ್ರಶಸ್ತಿ-2019 ಪ್ರಧಾನ ಸಮಾರಂಭ ಜ. 4 ರಂದು ತುಂಬೆ ವಳವೂರಿನಲ್ಲಿರುವ ಬಂಟವಾಳದ ಬಂಟರ ಭವನದಲ್ಲಿ ಜರಗಲಿದೆ.
ಬೆಳಗ್ಗೆ 10 ರಿಂದ ಸಂಜೆ 7ರ ವರೆಗೆ ನಡೆಯಲಿರುವ ವೈವಿಧ್ಯಮಯ ಕಾರ್ಯಕ್ರಮದಲ್ಲಿ ಸಂಜೆ 4ಕ್ಕೆ ಕರ್ನಾಟಕದ ನಿವೃತ್ತ ಲೋಕಾಯುಕ್ತ ಜಸ್ಟಿಸ್ ಎನ್.ಸಂತೋಷ್ ಹೆಗ್ಡೆ ಅವರು ಮುಖ್ಯಅತಿಥಿಯಾಗಿ ಪಾಲ್ಗೊಳ್ಳಲಿದ್ದು, ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಮುಂಬಯಿ ಆಲ್ ಕಾರ್ಗೋ ಲಾಜಿಸ್ಟಿಕ್ಸ್ಲಿ.ನ ಅಧ್ಯಕ್ಷ ಶಶಿಕಿರಣ್ ಶೆಟ್ಟಿ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ಬಂಟರ ಸಂಘದ ವಿದ್ಯಾರ್ಥಿ ವೇತನಕ್ಕೆ ಸಹಕಾರ ನೀಡುವ ಆಲ್ ಕಾರ್ಗೋ ಸಂಸ್ಥೆಯ ಕಾರ್ಯನಿರ್ವಾಹಕ ನಿರ್ದೇಶಕಿ ಆರತಿ ಶಶಿಕಿರಣ್ ಶೆಟ್ಟಿ ಅವರನ್ನು ಸಮ್ಮಾನಿಸಲಾಗುತ್ತದೆ. ಸಂಗೀತ ನಿರ್ದೇಶಕ ಗುರುಕಿರಣ್ ಮಾರ್ಗದರ್ಶನದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಜರಗಲಿದೆ.
ಏರ್ಯ ಸ್ಮೃತಿ ಪ್ರಶಸ್ತಿ
ಬಂಟ್ವಾಳ ಬಂಟರ ಸಂಘದ ಅಭಿವೃದ್ಧಿಗೆ ಹಿರಿಯ ಸಾಹಿತಿ ದಿ| ಡಾ| ಏರ್ಯ ಲಕ್ಷ್ಮೀನಾರಾಯಣ ಆಳ್ವ ಅವರು ಸ್ಮರಣೀಯ ಕೊಡುಗೆ ನೀಡಿದ್ದು, ಈ ನಿಟ್ಟಿನಲ್ಲಿ ಸಾಹಿತ್ಯ ಹಾಗೂ ಶಿಕ್ಷಣ ಕ್ಷೇತ್ರದಲ್ಲಿ ಸಾಧನೆ ಮಾಡಿದ ತಾಲೂಕಿನ ಬಂಟ ಸಮುದಾಯ ಸಾಧಕರಿಗೆ ತಲಾ ಒಬ್ಬರಂತೆ ಪ್ರತಿವರ್ಷ ಏರ್ಯ ಸ್ಮೃತಿ ಪ್ರಶಸ್ತಿ ನೀಡಿ ಗೌರವಿಸುವ ನಿರ್ಧಾರಕ್ಕೆ ಬರಲಾಗಿದ್ದು, ಈ ಬಾರಿ ಸಾಹಿತಿ ವಿಜಯಾ ಶೆಟ್ಟಿ ಸಾಲೆತ್ತೂರು ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ. ಬೆಂಗಳೂರಿನ ಉದ್ಯಮಿ ಬಾಲಕೃಷ್ಣ ಹೆಗ್ಡೆ ಅವರು ಭಾಗವಹಿಸಲಿದ್ದಾರೆ ಎಂದು ಬಂಟ್ವಾಳ ಬಂಟರ ಸಂಘದ ಅಧ್ಯಕ್ಷ ನಗ್ರಿಗುತ್ತು ವಿವೇಕ್ ಶೆಟ್ಟಿ ಅವರು ಪ್ರಟನೆಯಲ್ಲಿ ತಿಳಿಸಿದ್ದಾರೆ.

More from the blog

ನರಿಕೊಂಬು: ನವಜೀವನ ವ್ಯಾಯಾಮ ಶಾಲೆ: 21ರಂದು ಹನುಮಾನ್ ಮಂದಿರ ಲೋಕಾರ್ಪಣೆ

ಬಂಟ್ವಾಳ: ಇಲ್ಲಿನ ನರಿಕೊಂಬು ಗ್ರಾಮದ ನವಜೀವನ ವ್ಯಾಯಾಮ ಶಾಲೆ ವತಿಯಿಂದ ರೂ 1 ಕೋಟಿ ವೆಚ್ಚದಲ್ಲಿ ಪುನರ್ ನಿಮರ್ಾಣಗೊಂಡ ಶ್ರೀ ಹನುಮಾನ್ ಮಂದಿರ ಲೋಕಾರ್ಪಣೆ ಮತ್ತು ಶ್ರೀ ಆಂಜನೇಯ ಬಿಂಬ ಪುನರ್ ಪ್ರತಿಷ್ಠೆ...

ಜಿಲ್ಲೆಯಲ್ಲಿ ಜೆ.ಡಿ.ಎಸ್.ಪಕ್ಷ ನಿಷ್ಕ್ರಿಯವಾಗಲು ಕಾರಣರಾದ ಜೆ.ಡಿ.ಎಸ್.ಜಿಲ್ಲಾಧ್ಯಕ್ಷ ಮಾದವ ಗೌಡರು ರಾಜೀನಾಮೆ ನೀಡುವಂತೆ ಒತ್ತಾಯ

ಜೆ.ಡಿ.ಎಸ್.ಪಕ್ಷ ಜಿಲ್ಲೆಯಲ್ಲಿ ನಿಷ್ಕ್ರಿಯವಾಗಲು ಜೆ.ಡಿ.ಎಸ್.ಜಿಲ್ಲಾಧ್ಯಕ್ಷ ಮಾದವ ಗೌಡ ಅವರೇ ಕಾರಣರಾಗಿದ್ದು, ನೈತಿಕ ಹೊಣೆ ಹೊತ್ತು ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಜೆಡಿಎಸ್ ಮುಖಂಡ ಅಬುಬಕ್ಕರ್ ಅಮ್ಮಂಜೆ ಅವರು ಪತ್ರಿಕಾ ಹೇಳಿಕೆ ನೀಡಿದ್ದಾರೆ. ಜಿಲ್ಲೆಯಲ್ಲಿ ಅಧ್ಯಕ್ಷ...

ಹಿಂದೂ ಸಂಘಟನೆ ಮುಖಂಡನಿಗೆ ಚೂರಿ ಇರಿದ ಪ್ರಕರಣ : ಆರೋಪಿ ಅರೆಸ್ಟ್

ಬಂಟ್ವಾಳ: ಹಿಂದೂ ಸಂಘಟನೆಯ ಮುಖಂಡನೋರ್ವನಿಗೆ ಚೂರಿ ಇರಿದು ಪರಾರಿಯಾಗಿದ್ದ ಆರೋಪಿಯನ್ನು ಬಂಟ್ವಾಳ ನಗರ ಠಾಣೆಯ ಪೋಲೀಸರು ಬಂಧಿಸಿದ ಘಟನೆ ಇಂದು ನಡೆದಿದೆ. ಬಂಟ್ವಾಳ ನಿವಾಸಿ ರವಿ ಯಾನೆ ರವೀಂದ್ರ ಬಂಧಿತ ಆರೋಪಿಯಾಗಿದ್ದಾನೆ. ಎ.14 ರಂದು ಆದಿತ್ಯವಾರ...

ಬಂಟ್ವಾಳ: ಕರ್ಪೆ ಗ್ರಾಮದ ಮನೆಗಳಿಗೆ ಭೇಟಿ ನೀಡಿ ಮತಯಾಚನೆ ನಡೆಸಿದ ಶಾಸಕ ರಾಜೇಶ್ ನಾಯ್ಕ್

ಲೋಕಸಭಾ ಚುನಾವಣೆಯಲ್ಲಿ ಕ್ಯಾ.ಬ್ರಿಜೇಶ್ ಚೌಟ ಅವರನ್ನು ಬಹುಮತದಿಂದ ಗೆಲ್ಲಿಸಿಕೊಡುವಂತೆ "ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಹಾಗೂ ಜಿ.ಪಂ.ಮಾಜಿ ಸದಸ್ಯ ಎಂ.ತುಂಗಪ್ಪ ಬಂಗೇರ ಅವರು ಗ್ರಾಮ,ಮನೆ,ಮನ ಸಂಪರ್ಕ ಅಭಿಯಾನ" ಕಾರ್ಯಕ್ರಮದ ಮೂಲಕ ಬಂಟ್ವಾಳದ...