ವಿಟ್ಲ: ತಾಲೂಕು ಬಾಲಭವನ ಸಮಿತಿ ಬಂಟ್ವಾಳ ಮತ್ತು ಶಿಶು ಅಭಿವೃದ್ಧಿ ಯೋಜನೆ ವಿಟ್ಲ ಮತ್ತು ಬಂಟ್ವಾಳ ಇವರ ಸಹಯೋಗದಲ್ಲಿ ಅಳಿಕೆ ಶ್ರೀ ಸತ್ಯಸಾಯಿ ಲೋಕಸೇವಾ ಪ್ರೌಢಶಾಲೆಯಲ್ಲಿ ೨ ದಿನಗಳ ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ’ವಿಜ್ಞಾನ ಕಾರ್ಯಾಗಾರ-ಉಪನ್ಯಾಸ – ಪ್ರಯೋಗ’ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮವನ್ನು ಉದ್ಘಾಟಿಸಿದ ಪುತ್ತೂರು ಶಾಸಕ ಸಂಜೀವ ಮಠಂದೂರು ಮಾತನಾಡಿ ಅಧ್ಯಯನದಲ್ಲಿ ಒಂದೇ ವಿಷಯಕ್ಕೆ ಜೋತು ಬೀಳುವ ಬದಲು ಮೂಲ ವಿಜ್ಞಾನದ ಜೊತೆ ಆಧುನಿಕ ವಿಜ್ಞಾನ-ತಂತ್ರಜ್ಞಾನದ ಜ್ಞಾನವನ್ನು ಗಳಿಸಿ ಜೀವನವನ್ನು ರೂಪಿಸಿಕೊಳ್ಳಬೇಕು. ಇದಕ್ಕೆ ಇಂತಹ ವಿಜ್ಞಾನ ಕಾರ್ಯಾಗಾರಗಳು ಸಹಾಯಕವಾಗಿದೆ ಎಂದು ಹೇಳಿದರು.
ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಡಾ. ಜೆಡ್ಡುಗಣಪತಿ ಭಟ್ ಜೆಡ್ಡು ಆಯುರ್ವೇದ ಜೌಷದಿ ತಯಾರಿಕಾ ಕೇಂದ್ರ ಮತ್ತುಆಸ್ಪತ್ರೆ, ಕೇಪು ಕಲ್ಲಂಗಳ ಸರಕಾರಿ ಪ್ರೌಢಶಾಲೆಯ ಸಹಶಿಕ್ಷಕ ಲಕ್ಷ್ಮಣ ನಾಯ್ಕ, ಅಳಿಕೆ ಶ್ರೀ ಸತ್ಯಸಾಯಿ ಲೋಕಸೇವಾ ಪ.ಪೂ. ಕಾಲೇಜು ಪ್ರಿನ್ಸಿಪಾಲ್ ಎಂ. ಸಿದ್ದರಾಜು, ಉಪ್ಪಿನಂಗಡಿ ಇಂದ್ರಪ್ರಸ್ಥ ಪ.ಪೂ. ಕಾಲೇಜು ಪ್ರಿನ್ಸಿಪಾಲ್ ಹೆಚ್. ಕೆ ಪ್ರಕಾಶ್, ಅಳಿಕೆ ಪ್ರೌಢಶಾಲೆಯ ನಿವೃತ್ತ ವಿಜ್ಞಾನ ಶಿಕ್ಷಕ ಕೆ ರತ್ನಾಕರ ರೈ ಭಾಗವಹಿಸಿ ಅತ್ಯಮೂಲ್ಯ ಮಾಹಿತಿಯನ್ನು ಒದಗಿಸಿದರು.
ಕಾರ್ಯಕ್ರಮದ ಅಳಿಕೆ ಶ್ರೀ ಸತ್ಯಸಾಯಿ ಲೋಕಸೇವಾ ವಿದ್ಯಾಸಂಸ್ಥೆಯ ಸಂಚಾಲಕ ಕೆ.ಎಸ್.ಕೃಷ್ಣ ಭಟ್, ಅಳಿಕೆ ಕಾರ್ಯದರ್ಶಿ ಚಂದ್ರಶೇಖರ ಭಟ್, ಅಳಿಕೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಪದ್ಮನಾಭ ಪೂಜಾರಿ, ಜಿಲ್ಲಾ ಪಂಚಾಯಿತಿ ಸದಸ್ಯರಾದ ಜಯಶ್ರೀ ಕೊಡಂದೂರು, ಬಂಟ್ವಾಳ ತಾಲೂಕು ಪಂಚಾಯಿತಿ ಉಪಾಧ್ಯಕ್ಷ ಅಬ್ಬಾಸ್ ಅಲಿ ಮತ್ತು ಬಂಟ್ವಾಳ ಕ್ಷೇತ್ರ ಶಿಕ್ಷಣಾಧಿಕಾರಿ ಜ್ಞಾನೇಶ್ ಮತ್ತು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಸುಧಾ ಜೋಶಿಯವರು ಉಪಸ್ಥಿತರಿದ್ದರು.
ಮುಖ್ಯಶಿಕ್ಷಕರಾದ ರಘುಟಿ.ವೈ ಮಾರ್ಗದರ್ಶನದಲ್ಲಿ ವಿಜ್ಞಾನ ಶಿಕ್ಷಕರಾದ ಪ್ರಶಾಂತ್.ಜೆ, ಗುರುಪ್ರಸಾದ್, ಸೌಮ್ಯ, ಸುನಿಲ್, ಸುಜಯಕುಮಾರಿ ಮತ್ತು ಮಹೇಶ್ ಅವರು ಕಾರ್ಯಾಗಾರವನ್ನು ಅಚ್ಚುಕಟ್ಟಾಗಿ ಆಯೋಜಿಸಲಾಗಿತ್ತು.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here