ಬಂಟ್ವಾಳ: ತೃಪ್ತಿ ಹಾಗೂ ಮಾನವೀಯತೆ ಎನ್ನುವ ಎರಡು ಮೌಲ್ಯಗಳನ್ನು ವಿದ್ಯಾರ್ಥಿಗಳು ತಮ್ಮಲ್ಲಿ ಅಳವಡಿಸಿಕೊಂಡಾಗ ಮಾತ್ರ ಪರಿಶುದ್ದವಾದ ಜೀವನ ನಡೆಸಲು ಸಾಧ್ಯವಿದೆ ಎಂದು ನಿವೃತ್ತ ಲೋಕಾಯುಕ್ತ ಜಸ್ಟೀಸ್ ಎನ್. ಸಂತೋಷ್ ಹೆಗ್ಡೆ ಹೇಳಿದರು.
ಅಂತರಾಷ್ಟ್ರೀಯ ಲಯನ್ಸ್ ಸೇವಾ ಸಂಸ್ಥೆಯ ಆಶ್ರಯದಲ್ಲಿ ಯುವವಾಹಿನಿ ಬಂಟ್ವಾಳ ಮತ್ತು ಲಯನ್ಸ್ ಕ್ಲಬ್ ಬಂಟ್ವಾಳ ಆತಿಥ್ಯದಲ್ಲಿ ಬಂಟ್ವಾಳ ಸ್ಪರ್ಶ ಕಲಾ ಮಂದಿರದಲ್ಲಿ ಗುರುವಾರ ನಡೆದ “ತ್ರಿನೇತ್ರ- ನಾಳೆಗಳ ಭರವಸೆ ಕಣ್ಣುಗಳು” ವಿದ್ಯಾರ್ಥಿಗಳ ಜೊತೆಗಿನ ಸಂವಾದ ಕಾರ್ಯಕ್ರಮವನ್ನು ಉದ್ಘಾಟಿಸಿದ ಅವರು, ಬಳಿಕ ನಡೆದ ಸಂವಾದ ದಲ್ಲಿ ಮಾತನಾಡಿದರು.
ಶಾಲೆಗಳಲ್ಲಿ ಮೌಲ್ಯಗಳ ಬಗ್ಗೆ ವಿಷಯಗಳಿರುವುದಿಲ್ಲ. ಚಂದ್ರಲೋಕಕ್ಕೆ ಹೋಗುವುದು ಹೇಗೆ, ಅಟಂಬಾಂಬು ತಯಾರಿ ಹೇಗೆ ಮಾಡುವುದು ಎನ್ನುವುದನ್ನು ಶಾಲೆಗಳಲ್ಲಿ ತಿಳಿಸಿಕೊಡುತ್ತಾರೆ, ಆದರೆ ಅದನ್ನು ಹೇಗೆ ಬಳಸಿಕೊಳ್ಳಬೇಕು ಎನ್ನುವುದನ್ನು ತಿಳಿಸಿಕೊಡುವುದಿಲ್ಲ ಎಂದರು. ಇಂತಹಾ ವ್ಯವಸ್ಥೆ ಬದಲಾಗಬೇಕು. ಕುಸಿಯುತ್ತಿರುವ ಮೌಲ್ಯಗಳನ್ನು ಎತ್ತಿ ಹಿಡಿಯುವ ಕಾರ್ಯ ವಿದ್ಯಾರ್ಥಿಗಳಿಂದ ನಡೆಯಬೇಕೆಂದರು.

ಲಯನ್ಸ್ ಕ್ಲಬ್‍ನ ರಾಜ್ಯಪಾಲ ರೊನಾಲ್ಡ್ ಐಸಕ್ ಗೋಮ್ಸ್ ಅಧ್ಯಕ್ಷತೆ ವಹಿಸಿದ್ದರು.
ಬಿಜೆಪಿ ಮುಖಂಡ ಪ್ರತಾಪ್ ಸಿಂಹ ನಾಯಕ್ , ಕಾಂಗ್ರೆಸ್ ನಾಯಕಿ ಪ್ರತಿಭಾ ಕುಳಾಯಿ, ಬಂಟ್ವಾಳ ಡಿವೈಎಸ್ಪಿ ವೆಲೈಂಟಿನ್ ಡಿಸೋಜ, ಖ್ಯಾತ ಮನೋರೋಗ ತಜ್ಞರಾದ ಡಾ. ರವೀಶ ತುಂಗಾ ಹಾಗೂ ಡಾ. ರಮೀಳಾ ಶೇಖರ್ ಸಂವಾದದ ಸಂಪನ್ಮೂಲ ವ್ಯಕ್ತಿಗಳಾಗಿದ್ದರು.
ಮುಖ್ಯ ಅತಿಥಿಗಳಾಗಿ ಅನಿತಾ ರೋನಾಲ್ಡ್ ಗೋಮ್ಸ್ ಯುವವಾಹಿನಿ ಕೇಂದ್ರ ಸಮಿತಿ ಅಧ್ಯಕ್ಷ ನರೇಶ್ ಕುಮಾರ್ ಸಸಿಹಿತ್ಲು, ಲಯನ್ಸ್ ಕ್ಲಬ್‍ನ ಪ್ರಥಮ ಉಪ ರಾಜ್ಯಪಾಲ ಗೀತ್ ಪ್ರಕಾಶ್, ದ್ವಿತೀಯ ಉಪರಾಜ್ಯಪಾಲ ವಸಂತ ಕುಮಾರ್ ಶೆಟ್ಟಿ, ಯುವವಾಹಿನಿ ಬಂಟ್ವಾಳ ಘಟಕದ ಅಧ್ಯಕ್ಷ ಇಂದಿರೇಶ್ ಬಿ. ಉಪಸ್ಥಿತರಿದ್ದರು.
ಬಂಟ್ವಾಳ ಲಯನ್ಸ್ ಕ್ಲಬ್ ಅಧ್ಯಕ್ಷ ಶ್ರೀನಿವಾಸ ಪೂಜಾರಿ ಸ್ವಾಗತಿಸಿದರು. ಸಂಚಾಲಕ ಚೇತನ್ ಮುಂಡಾಜೆ ವಂದಿಸಿದರು. ದಿನೇಶ್ ಸುವರ್ಣ ರಾಯಿ, ರಾಜೇಶ್ ಸುವರ್ಣ ಕಾರ್ಯಕ್ರಮ ನಿರೂಪಿಸಿದರು.ಲಯನ್ಸ್ ಉಪಾಧ್ಯಕ್ಷ ಕೃಷ್ಣಶ್ಯಾಮ್, ಸದಸ್ಯ ರಾಘವೇಂದ್ರ ಕಾರಂತ, ಯುವವಾಹಿನಿ ಉಪಾಧ್ಯಕ್ಷ ಸುಂದರ ಪೂಜಾರಿ, ಕಾರ್ಯದರ್ಶಿ ಪುರುಷೋತ್ತಮ ಕಾಯರ್ ಪಲ್ಕೆ, ಲಯನ್ಸ್ ನ  ಕಾರ್ಯಾಗಾರ ಸಂಚಾಲಕ ಶಿವಪ್ರಸಾದ್, ಚೇತನ್ ಮುಂಡಾಜೆ ಉಪಸ್ಥಿತರಿದ್ದರು. ಜಿಲ್ಲೆಯ ವಿವಿಧ ಕಾಲೇಜಿನ ವಿದ್ಯಾರ್ಥಿಗಳು ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here