ಬಂಟ್ವಾಳ: ಪ್ರತಿಯೊಬ್ಬರೂ ತನ್ನ ಸಂಘಟನೆಯ ಮೂಲಕ ಮಕ್ಕಳಿಗೆ ಉತ್ತಮ ಶಿಕ್ಷಣದ ಅವಕಾಶ ಕಲ್ಪಿಸಿ, ಸ್ವಾವಲಂಬಿ ಬದುಕು ನೀಡಿದರೆ ಸಮಾಜಕ್ಕೆ ಕೊಡುಗೆಯಾಗುತ್ತದೆ. ರಾಜ್ಯದ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಂದ ಬ್ರಹ್ಮ ಶ್ರೀ ನಾರಾಯಣ ಗುರುಗಳ ಹೆಸರಿನಲ್ಲಿ ಮೆಡಿಕಲ್ ಕಾಲೇಜು ಸ್ಥಾಪಿಸಲು ಅನುಮತಿ ದೊರಕಿದ್ದು, ಮುಂದಿನ ಬಜೆಟ್‌ನಲ್ಲಿ ಹೆಚ್ಚಿನ ಕೊಡುಗೆಯ ನಿರೀಕ್ಷೆ ಇದೆ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಹೇಳಿದರು.
ಬಂಟ್ವಾಳ ತಾ. ರಾಯಿ, ಕೊಲ, ಅರಳ ಬ್ರಹ್ಮ ಶ್ರೀ ನಾರಾಯಣ ಗುರು ಬಿಲ್ಲವ ಸಮಾಜ ಸೇವಾ ಸಂಘಕ್ಕೆ ಕುದ್ಮಾಣಿಯಲ್ಲಿ ನೂತನ ಗುರುಮಂದಿರ, ಸಮುದಾಯ ಭವನ, ಭೋಜನಾಲಯ ನಿರ್ಮಾಣಕ್ಕೆ ರವಿವಾರ ನಡೆದ ಶಿಲಾನ್ಯಾಸ ಕಾರ್ಯಕ್ರಮದ ಧಾರ್ಮಿಕ ಸಭೆಯಲ್ಲಿ ಅವರು ಮಾತನಾಡಿದರು.
ಕೇರಳ ಶ್ರೀ ಕ್ಷೇತ್ರ ಶಿವಗಿರಿ ಮಠದ ಶ್ರೀ ಸತ್ಯಾನಂದ ಸ್ವಾಮೀಜಿ ಅವರು ಆಶೀರ್ವಚನ ನೀಡಿ ಮಾತನಾಡಿ, ಬ್ರಹ್ಮ ಶ್ರೀ ನಾರಾಯಣ ಗುರುಗಳು ಸಮಾಜದ ಎಲ್ಲ ಸಮುದಾಯದವರಿಗೂ ಗುರುಗಳಾಗಿದ್ದಾರೆ. ಅವರ ತತ್ವವನ್ನು ಅಳವಡಿಸಿಕೊಂಡು ಸಮಾಜದ ಏಳಿಗೆಗೆ ಕಾರಣರಾಗಬೇಕು ಎಂದು ನುಡಿದರು.
ಬಂಟ್ವಾಳ ಶಾಸಕ ರಾಜೇಶ್ ನಾಕ್ ಉಳಿಪ್ಪಾಡಿಗುತ್ತು ಅವರು ವಿಜ್ಞಾಪನ ಪತ್ರವನ್ನು ಬಿಡುಗಡೆಗೊಳಿಸಿ ಮಾತನಾಡಿ, ಬ್ರಹ್ಮಶ್ರೀ ನಾರಾಯಣ ಗುರುಗಳು ಒಂದೇ ಜಾತಿ,ಒಂದೇ ಮತ,ಒಂದೇ ದೇವರು ಎಂದು ವಿಶ್ವಕ್ಕೆ ಸಾರಿದ ಮಹಾನ್ ವ್ಯಕ್ತಿತ್ವದವರು. ಹಿಂದೂ ಧರ್ಮದ ಏಳಿಗೆಗಾಗಿ ಶ್ರಮಿಸಿದವರು.ಅವರ ಜೀವನ ನಮಗೆ ಆದರ್ಶವಾಗಿದೆ ಎಂದರು.
ಬಿಲ್ಲವ ಮುಖಂಡ ಹರಿಕೃಷ್ಣ ಬಂಟ್ವಾಳ ಅವರು ಮಾತನಾಡಿ, ಶಿಕ್ಷಣದಿಂದ ಸುಸಂಸ್ಕೃತ ಸಮಾಜ ನಿರ್ಮಾಣವಾಗುತ್ತದೆ ಎಂದು ನೂರು ವರ್ಷಗಳ ಹಿಂದೆ ಸಾರಿದವರು ಬ್ರಹ್ಮಶ್ರೀ ನಾರಾಯಣ ಗುರುಗಳು. ಆದರೆ ಅಧ್ಯಯನ ಶೀಲತೆ ಕೊರತೆಯಿಂದ ಚರಿತ್ರೆ, ಇತಿಹಾಸದ ಅರಿವಿಲ್ಲದಿರುವುದು ದುರಂತವಾಗಿದೆ. ಜಾತಿ, ಧರ್ಮದ ಗಡಿ ದಾಟದವರು ಪ್ರಗತಿಹೊಂದುವುದಿಲ್ಲ ಎಂದರು.
ಜಿ.ಪಂ. ಸದಸ್ಯ ಎಂ. ತುಂಗಪ್ಪ ಬಂಗೇರ, ಬಂಟ್ವಾಳ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ಸೇಸಪ್ಪ ಕೋಟ್ಯಾನ್, ವಾಸ್ತು ತಜ್ಞ ಪ್ರಮಲ್ ಕುಮಾರ್ ಕಾರ್ಕಳ, ಸರಕಾರಿ ಶಾಲೆ ಉಳಿಸಿ ಬೆಳೆಸಿ ಸಮಿತಿ ರಾಜ್ಯಾಧ್ಯಕ್ಷ ಪ್ರಕಾಶ್ ಅಂಚನ್, ರಾಯಿ ಗ್ರಾ.ಪಂ. ಅಧ್ಯಕ್ಷ ದಯಾನಂದ ಸಪಲ್ಯ, ಅರಳ ಗ್ರಾ.ಪಂ.ಅಧ್ಯಕ್ಷೆ ತುಂಗಮ್ಮ, ಉದ್ಯಮಿ ಎಂ.ಪಿ. ದಿನೇಶ್, ಸಮಿತಿ ಗೌರವಾಧ್ಯಕ್ಷ ಶ್ರೀಧರ ಪೂಜಾರಿ ಎಸ್.ಪಿ. ಅವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ನೂತನ ಕಟ್ಟಡದ ನೀಲ ನಕಾಶೆಯನ್ನು ಸಚಿವ ಕೋಟ ಅವರು ಅನಾವರಣಗೊಳಿಸಿದರು.
ಅಧ್ಯಕ್ಷ ಶೇಖರ ಅಂಚನ್ ಪಿಲ್ಕಾಜೆಗುತ್ತು ಸ್ವಾಗತಿಸಿದರು. ಪವಿತ್ರಾ ಪೂಜಾರಿ ರಾಯಿ ವಂದಿಸಿದರು. ದಿನೇಶ್ ಸುವರ್ಣ ಕುದ್ಕೋಳಿ ಕಾರ್ಯಕ್ರಮ ನಿರೂಪಿಸಿದರು.
ಕಾರ್ಯಕ್ರಮಕ್ಕೆ ಮುನ್ನ ಸದಾನಂದ ಶಾಸ್ತ್ರಿ ವೇಣೂರು ಅವರ ನೇತೃತ್ವದಲ್ಲಿ ಪೂರ್ವಾಹ್ನ 11.18ರ ಮೇಷ ಲಗ್ನದಲ್ಲಿ ಶಿಲಾನ್ಯಾಸ ಕಾರ್ಯಕ್ರಮ ನಡೆಯಿತು

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here